ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಬಳಿಕ ಕ್ಷೇತ್ರಗಳಿಗೆ ಅನುದಾನ ಇಲ್ಲ: ಬಿ ವೈ ವಿಜಯೇಂದ್ರ ಆರೋಪ

Date:

ಕಾಂಗ್ರೆಸ್ ಸರಕಾರವು ದಕ್ಷಿಣ ಕನ್ನಡಕ್ಕೆ ಮಾತ್ರವಲ್ಲ, ರಾಜ್ಯದ ಯಾವುದೇ ಕ್ಷೇತ್ರಕ್ಕೂ ಅನುದಾನ ಕೊಡುತ್ತಿಲ್ಲ. ಸಿದ್ದರಾಮಯ್ಯ ಅವರು ಅಧಿಕಾರಕ್ಕೆ ಬಂದ ಬಳಿಕ ಅನುದಾನವೂ ಇಲ್ಲ, ಮುಖ್ಯಮಂತ್ರಿಗಳು ದಕ್ಷಿಣ ಕನ್ನಡಕ್ಕೆ ಬರುವುದೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಟೀಕಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮಗಳ ಗುರುವಾರ ಮಾತನಾಡಿದ ಅವರು, “ಹಿಂದೆ ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ, ಯಡಿಯೂರಪ್ಪ ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರ ಸೇರಿ ದಕ್ಷಿಣ ಕನ್ನಡಕ್ಕೆ, ಮಂಗಳೂರಿನಲ್ಲಿರುವ ವಿಧಾನಸಭಾ ಕ್ಷೇತ್ರಕ್ಕೆ 19,500 ಕೋಟಿ ಅನುದಾನ ಕೊಟ್ಟಿದ್ದರು” ಎಂದರು.

“ಸಿದ್ದರಾಮಯ್ಯನವರು ಬೆಂಗಳೂರಿನ ಮುಖ್ಯಮಂತ್ರಿಗಳೇ ಅಥವಾ ರಾಜ್ಯದ ಮುಖ್ಯಮಂತ್ರಿಗಳೇ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ. ಬಸವರಾಜ ರಾಯರೆಡ್ಡಿ ಅವರದು ದಿಟ್ಟವಾಗಿ ಮಾತನಾಡುವ ಸ್ವಭಾವ. ಅವರು ಸತ್ಯವನ್ನೇ ಹೇಳಿದ್ದಾರೆ. ವಾಲ್ಮೀಕಿ ನಿಗಮದ ಹಗರಣ, ಮುಡಾ ಹಗರಣ ಸೇರಿ ಬೇರೆಬೇರೆ ಹಗರಣಗಳ ಬಳಿಕ ಅವರು ಕೂಡ ಬೇಸತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಭಿವೃದ್ಧಿಗೆ ಹಣ ಕೊಡುತ್ತಿಲ್ಲ. ಹಿಂದೆ ಬಿಜೆಪಿ ಸರಕಾರ ಇದ್ದಾಗ ಅಭಿವೃದ್ಧಿ ವಿಷಯದಲ್ಲಿ ಇಡೀ ದೇಶದಲ್ಲಿ ಕರ್ನಾಟಕವು ಗುಜರಾತ್ ನಂತರದ ಸ್ಥಾನವನ್ನು ಪಡೆದಿತ್ತು. ಇವತ್ತು ಭ್ರಷ್ಟಾಚಾರದಲ್ಲಿ ಕರ್ನಾಟಕವು ನಂಬರ್ ಒನ್ ಸ್ಥಾನಕ್ಕೆ ತಲುಪಿದೆ ಎಂದರೆ ಅದರ ಕೀರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ. ಆ ಸತ್ಯವನ್ನು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ” ಎಂದರು.

“ದಲಿತರಿಗೆ ಅನ್ಯಾಯ ಮಾಡುವವರು ಕಾಂಗ್ರೆಸ್ ಪಕ್ಷದವರು. ಮೊನ್ನೆ ರಾಹುಲ್ ಗಾಂಧಿ ಅವರನ್ನು ನೋಡಿದ್ದೀರಿ. ಗಾಂಧೀಜಿ, ಬಾಬಾಸಾಹೇಬ ಅಂಬೇಡ್ಕರ್‌ ಕುರಿತ ಅವರ ಕಳಕಳಿ ಬಹಿರಂಗವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಬಿಜೆಪಿ, ದಲಿತರ ಪರವಾಗಿ ಯೋಜನೆಗಳನ್ನು ನೀಡುತ್ತಿದೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...