ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಕಿರುಕುಳ ಬೇಡ: ಸಿದ್ದರಾಮಯ್ಯ ಸೂಚನೆ

Date:

ಅಬಕಾರಿ ಪರವಾನಗಿಗಳ ನವೀಕರಣಕ್ಕೆ ಸನ್ನದುದಾರರಿಗೆ ಕಿರುಕುಳ ನೀಡಬಾರದು. ನೆರೆ ರಾಜ್ಯಗಳಿಂದ ಕರ್ನಾಟಕ ರಾಜ್ಯಕ್ಕೆ ಕಳ್ಳಸಾಗಾಣಿಕೆ ಮೂಲಕ ನುಸುಳುವ ಮದ್ಯವನ್ನು ಕಡ್ಡಾಯ ತಡೆಗಟ್ಟಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಮಂಗಳವಾರ ಅಬಕಾರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಇಲಾಖೆಯ ತೆರಿಗೆ ಸಂಗ್ರಹ ಸಾಮರ್ಥ್ಯವನ್ನು ಆಧರಿಸಿಯೇ ನಿಗದಿ ಪಡಿಸುವ ಗುರಿ ತಲುಪಲು ಅಧಿಕಾರಿಗಳು ಗರಿಷ್ಠ ಪ್ರಯತ್ನ ಮಾಡಬೇಕು” ಎಂದು ಸೂಚಿಸಿದರು.

ಚುನಾವಣಾ ನೀತಿ ಸಂಹಿತೆ ಕಾರಣದಿಂದ ತೆರಿಗೆ ಸಂಗ್ರಹ ಬೆಳವಣಿಗೆ ದರ ನಿರೀಕ್ಷಿತ ಮಟ್ಟ ತಲುಪಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಮುಂದಿನ ದಿನಗಳಲ್ಲಿ ಇದನ್ನು ಭರ್ತಿ ಮಾಡುವಂತೆ ಸಿಎಂ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಲಾಖೆಯಲ್ಲಿ ಕಾನ್‌ಸ್ಟೆಬಲ್‌, ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಹಾಗೂ ವಾಹನಗಳ ಅಗತ್ಯತೆ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಕರ ಸಮಾಧಾನ ಯೋಜನೆಯಡಿ 5.10 ಕೋಟಿ ರೂ. ವಸೂಲಾಗಿದ್ದು, ಯೋಜನೆಯನ್ನು ಇನ್ನಷ್ಟು ಕಾಲ ವಿಸ್ತರಿಸುವಂತೆ ಅಧಿಕಾರಿಗಳು ಕೋರಿದರು.

ನೂತನ ತಂತ್ರಾಂಶವನ್ನು ಲೋಕಾರ್ಪಣೆ

ಅಬಕಾರಿ ಇಲಾಖೆಯ ವ್ಯವಹಾರಗಳನ್ನು ಸರಳಗೊಳಿಸುವ ನೂತನ ತಂತ್ರಾಂಶವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು. ಆನ್‌ಲೈನ್‌ನಲ್ಲಿಯೇ ಇಲಾಖೆಯ ಸೇವೆಗಳನ್ನು ಒದಗಿಸುವ ಹಾಗೂ ಅಬಕಾರಿ ಇಲಾಖೆಗೆ ಸಂಬಂಧಿಸಿದ ನಿಯಮ ಉಲ್ಲಂಘನೆ ಹಾಗೂ ಅಕ್ರಮದ ಪ್ರಕರಣಗಳು ಹಾಗೂ ಅಧಿಕಾರಿಗಳ ತಪಾಸಣೆಯನ್ನೂ ಇದರಲ್ಲಿ ದಾಖಲಿಸಲು ಹಾಗೂ ಅನುಸರಿಸಲು ಅವಕಾಶವನ್ನು ಇದರಲ್ಲಿ ಕಲ್ಪಿಸಲಾಗಿದೆ.

ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಹಾಗೂ ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಆರ್ಥಿಕ ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್, ಅಬಕಾರಿ ಇಲಾಖೆಯ ಆಯುಕ್ತ ಡಾ . ರವಿಶಂಕರ್ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...