ಸಚಿವ ಸಂಪುಟ ಪುನಾರಚನೆ ವಿಚಾರ ನನಗೆ ತಿಳಿದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

Date:

“ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಇದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ತೀರ್ಮಾನಿಸುತ್ತಾರೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

“ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ನನ್ನ ಜೊತೆ ಚರ್ಚಿಸಿದರೆ ನಾನು ನನ್ನ ಸಲಹೆ ನೀಡುತ್ತೇನೆ. ಈ ವಿಚಾರವಾಗಿ ಅನಗತ್ಯ ಚರ್ಚೆ ಮಾಡಿ ಗೊಂದಲ ಸೃಷ್ಟಿಸಬೇಡಿ ಎಂದು ನಿಮ್ಮಲ್ಲಿ(ಮಾಧ್ಯಮ) ಮನವಿ ಮಾಡುತ್ತೇನೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಮತ್ತೆ ಮುನ್ನೆಲೆಗೆ ಸಚಿವ ಸಂಪುಟ ಪುನಾರಚನೆ: ಏಳು ಸಚಿವರ ಬದಲಾವಣೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸಿರುವ ಬಗ್ಗೆ ಕೇಳಿದಾಗ, “ಇದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ ಊಟ ಮಾಡಿ, ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುವುದು ಸಹಜ” ಎಂದು ಅಭಿಪ್ರಾಯಿಸಿದರು.

ಈ ವೇಳೆಯೇ ಬಿಗ್ ಬಾಸ್ ವಿಚಾರದಲ್ಲಿಯೂ ಡಿಸಿಎಂ ಪ್ರತಿಕ್ರಿಯಿಸಿದರು. “ಬುಧವಾರ ರಾತ್ರಿ ಡಿಸಿಗೆ ಕರೆ ಮಾಡಿ ಜಾಲಿವುಡ್ ಸ್ಟುಡಿಯೋದವರು ತಮ್ಮ ತಪ್ಪನ್ನು ಸರಿಪಡಿಸಿಕೊಳ್ಳಲು ಒಂದು ಅವಕಾಶ ಕಲ್ಪಿಸಿ ಎಂದು ಸೂಚಿಸಿದ್ದೇನೆ” ಎಂದು ಹೇಳಿದರು.

“ನಮ್ಮ ಉದ್ಯಮ ಬೆಳೆಯಬೇಕು. ಇದು ಹೆಚ್ಚಿನ ಮಾಲಿನ್ಯ ಉಂಟು ಮಾಡಲು ದೊಡ್ಡ ಕಾರ್ಖಾನೆಯಲ್ಲ. ಸಣ್ಣಪುಟ್ಟ ನಿಯಮ ಉಲ್ಲಂಘನೆಯಾಗಿದ್ದರೆ ಸರಿಪಡಿಸಿಕೊಳ್ಳಿ, ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಾವಳಿಯನ್ನು ಪಾಲನೆ ಮಾಡಿ ಎಂದು ಸ್ಟುಡಿಯೋದವರಿಗೂ ಹೇಳಿ ಕಳುಹಿಸಿದ್ದೇನೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...