ನ್ಯಾಯಾಲಯ ಏನೇ ತೀರ್ಪು ಕೊಡಲಿ, ಸಿದ್ದರಾಮಯ್ಯ ಜೊತೆ ಹೈಕಮಾಂಡ್ ನಿಲ್ಲಲಿದೆ: ಸಚಿವ ಪರಮೇಶ್ವರ್‌

Date:

ನ್ಯಾಯಾಲಯ ಏನೇ ತೀರ್ಪು ಕೊಟ್ಟರು, ಮುಖ್ಯಮಂತ್ರಿಯವರ ಜೊತೆ ಹೈಕಮಾಂಡ್ ನಿಲ್ಲಲಿದೆ. ನಾವೆಲ್ಲರು ಸಹ ಸಿಎಂ ಜೊತೆ ಇರುತ್ತೇವೆ. 29ರ ನಂತರದ ಬೆಳವಣಿಗೆ ಬಗ್ಗೆ ನೋಡೋಣ. ಕೋರ್ಟ್ ತೀರ್ಪು ಏನು ಬರುತ್ತದೆ ಎಂಬುದರ ಮೇಲೆ ಚರ್ಚೆ ಆಗಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ತಿಳಿಸಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯಪಾಲರ ನಿರ್ಣಯವನ್ನು ಕೋರ್ಟ್ ಪರಿಗಣಿಸುವುದಿಲ್ಲ ಎಂಬ ನಿರೀಕ್ಷೆ ಇದೆ‌. ಸಿಎಂ ಅವರ ಸಹಿ, ಯಾವುದೇ ರೀತಿಯ ದಾಖಲೆಗಳಿಲ್ಲ. ರಿಜಿಸ್ಟ್ರೇಷನ್ ಅಲ್ಲಿಯೂ ಸಹ ಅವರ ಹೆಸರು ಉಲ್ಲೇಖವಾಗಿಲ್ಲ. ಇದೆಲ್ಲವನ್ನು ನ್ಯಾಯಾಲಯ ಗಮನಿಸಿಯೇ ತೀರ್ಮಾನ ಕೊಡುತ್ತದೆ ಎಂದು ನಿರೀಕ್ಷೆ ಮಾಡಿದ್ದೇವೆ” ಎಂದರು.

ಮೈತ್ರಿ ಪಕ್ಷಗಳ ಪ್ರಾಸಿಕ್ಯೂಷನ್ ಗೆ ಒತ್ತಾಯಿಸಿ ರಾಜಭವನ ಚಲೋ ವಿಚಾರದ ಕುರಿತು ಮಾತನಾಡಿ, “ರಾಜ್ಯಪಾಲರ ನಡೆಯ ಬಗ್ಗೆ ಒಂದಷ್ಟು ಚರ್ಚೆ ಮಾಡಿ ತೀರ್ಮಾನಗಳನ್ನು ಮಾಡಿದ್ದೇವೆ. ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿದ್ದಾರೆ. ಪಕ್ಷದ ವತಿಯಿಂದ ರಾಜ್ಯದಾದ್ಯಂತ ಪ್ರತಿಭಟನೆಯನ್ನು ಮಾಡುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದರ ಜೊತೆಯಲ್ಲೇ ಎಲ್ಲ ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ರಾಜ್ಯಪಾಲರಿಗೆ ಮನವಿ ಸಲ್ಲಿಸುವ ನಿರ್ಧಾರ ಮಾಡಿದ್ದೇವೆ. ಅಷ್ಟರೊಳಗೆ ಕೋರ್ಟ್‌ನಲ್ಲಿ ಏನೆಲ್ಲ ತೀರ್ಮಾನ ಆಗುತ್ತದೆ ಎಂಬುದನ್ನು ನೋಡಬೇಕಿದೆ. ಆನಂತರ ರಾಷ್ಟ್ರಪತಿಯವರನ್ನು ಭೇಟಿ ಮಾಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಆ.31ರಂದು ರಾಜಭವನ ಚಲೋ ಮಾಡುತ್ತೇವೆ” ಎಂದು ತಿಳಿಸಿದರು.

ಪ್ರಭಾವ ಬಳಸಿಲ್ಲ

ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಕೆಐಎಡಿಬಿ ನಿವೇಶನ ನೀಡಿದ ವಿಚಾರದ ಪ್ರತಿಕ್ರಿಯಿಸಿ, “ಕೆಐಎಡಿಬಿ ನಿವೇಶನ ಅಕ್ರಮವಾಗಿ ಪಡೆದಿದ್ದಾರ ಇಲ್ಲವೇ ಎಂಬುದನ್ನು ರಾಜ್ಯಪಾಲರು ಪರಿಶೀಲನೆ ಮಾಡಲಿ. ಅವರು ಕಾನೂನು ಬಾಹಿರವಾಗಿ ಪಡೆದಿದ್ದಾರೆ ಎಂಬುದಾದರೆ ರಾಜ್ಯಪಾಲರು ಏನು ಕ್ರಮ ತೆಗೆದುಕೊಳ್ಳಬೇಕು ತೆಗೆದುಕೊಳ್ಳಲಿ.‌ ಖರ್ಗೆ ಅವರು ತಮ್ಮ ಪ್ರಭಾವ ಬಳಸಿ, ಟ್ರಸ್ಟ್‌ಗೆ ನಿವೇಶನ ಪಡೆದಿಲ್ಲ” ಎಂದರು‌.

“ಬಿಜೆಪಿ ಆಡಳಿತ‌ ನಡೆಸುತ್ತಿರುವ ಸರ್ಕಾರಗಳು, ಕೇಂದ್ರ ಸರ್ಕಾರದ ಮೇಲೆಯೂ ಭ್ರಷ್ಟಚಾರದ ಆರೋಪಗಳಿಲ್ಲವೇ? ನಮ್ಮ ಸರ್ಕಾರದ ಮೇಲೆ ನಿರಾದಾರ ಆರೋಪ ಬಂದಿದೆ. ಆರೋಪಗಳನ್ನು ನಿರಾದಾರ ಎಂಬುದನ್ನು ನಾವು ಸಾಬೀತುಪಡಿಸುತ್ತೇವೆ” ಎಂದು ಹೇಳಿದರು.

“ನಾನು ಕಾಂಗ್ರೆಸ್‌ನ ಶಿಸ್ತಿನ ಸಿಪಾಯಿ. ಪಕ್ಷದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ವಹಿಸಿದರು ಪ್ರಾಮಾಣಿಕವಾಗಿ ಮಾಡಿದ್ದೇನೆ. ದೆಹಲಿ ಭೇಟಿ ವೇಳೆ ರಾಹುಲ್ ಗಾಂಧಿ ಅವರು ನನ್ನನ್ನು ಪ್ರತ್ಯೇಕವಾಗಿ ಕರೆದು ಮಾತನಾಡಿಸಿದ್ದು ನಿಜ. ನೀವೆಲ್ಲ ನೋಡಿದ್ದೀರಿ. ಪಕ್ಷ ವಹಿಸಿದ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ. ಪಕ್ಷದ ವಿಚಾರದಲ್ಲಿ ಅವರು ನನಗೆ ಏನು ಹೇಳಬೇಕು, ಹೇಳಿದ್ದಾರೆ. ಅದನ್ನು ಬಿಟ್ಟು ಬೇರೆ ಏನು ಮಾತನಾಡಿಲ್ಲ. ನಾನು ಪಕ್ಷದಲ್ಲಿ ಹಿರಿಯ ಇರಬಹುದು. ಆ ಪ್ರಶ್ನೆ ಮೂಡಿಲ್ಲ. ಅದರ ಬಗ್ಗೆ ನಾನು ಉತ್ತರವನ್ನು ನೀಡುವುದಿಲ್ಲ‌” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...