ಇನ್ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ: ಕಲ್ಲಡ್ಕ ಪ್ರಭಾಕರ್ ಭಟ್‌ ಬಾಯಿಗೆ ಬೀಗ ಜಡಿದ ನ್ಯಾಯಾಲಯ

Date:

ಮುಸ್ಲಿಂ ಮಹಿಳೆಯರು ಮತ್ತು ಸಮುದಾಯದ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಶ್ರೀರಂಗಪಟ್ಟಣ 3ನೇ ಅಪರ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯದಲ್ಲಿ ಷರತ್ತುಬದ್ಧ ಜಾಮೀನು ನೀಡಿದೆ.

ಜಾಮೀನು ಮಂಜೂರು ಮಾಡುವ ವೇಳೆ ಮಹತ್ವದ ಅಂಶವೊಂದನ್ನು ನ್ಯಾಯಾಲಯವು ಉಲ್ಲೇಖಿಸಿದ್ದು, ಆರೋಪಿಯು ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದೆ. ಆ ಮೂಲಕ, ಕಲ್ಲಡ್ಕ ಪ್ರಭಾಕರ್ ಭಟ್‌ ಬಾಯಿಗೆ ಬೀಗ ಜಡಿದಿದೆ. ಒಂದು ವೇಳೆ ಮಾಡಿದರೆ ಎಫ್ಐಆರ್ ಇಲ್ಲದೆಯೂ ಶ್ರೀರಂಗಪಟ್ಟಣದ ಜಾಮೀನು ರದ್ದಾಗಲಿದೆ.

“ಆರೋಪಿಯು ಯಾವುದೇ ಕಾರಣಕ್ಕೂ ಇಂತಹ ಕೃತ್ಯವನ್ನು ಪುನರಾವರ್ತಿಸಬಾರದು. ಈ ರೀತಿಯ ಆರೋಪಗಳನ್ನು ಮತ್ತೆ ಎದುರಿಸಬಾರದು” ಎಂದು ಷರತ್ತು ನೀಡಿದೆ. ಶ್ರೀರಂಗಪಟ್ಟಣದ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೋಪಾಲ ಕೃಷ್ಣ ರೈ ಟಿ ಅವರು ಇಂದು ಜಾಮೀನು ನೀಡುವ ವೇಳೆ ಈ ಅಂಶವನ್ನು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಕಲ್ಲಡ್ಕ ಪ್ರಭಾಕರ್ ಭಟ್ ಗೆ ಇರುವ ಹಲವು ಖಾಯಿಲೆಗಳು, ವಯಸ್ಸೂ ಸೇರಿದಂತೆ ಕೆಲ ವಿಷಯಗಳನ್ನು ಆಧರಿಸಿ ಕೋರ್ಟ್ ಜಾಮೀನು ನೀಡಿತ್ತು.

“ಇನ್ಮುಂದೆ ಕಲ್ಲಡ್ಕ ಪ್ರಭಾಕರ್ ಭಟ್ ಎಲ್ಲೇ ದ್ವೇಷ ಭಾಷಣ ಮಾಡಿದರೂ ತಕ್ಷಣ ಸಮೀಪದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ. ನೀವು ದಾಖಲಿಸಿದ ಎಫ್ಐಆರ್‌ಗೂ ಜಾಮೀನು ಸಿಗಲ್ಲ, ಈಗ ಶ್ರೀರಂಗಪಟ್ಟಣದಲ್ಲಿ ಸಿಕ್ಕಿರುವ ಜಾಮೀನೂ ರದ್ದಾಗುತ್ತದೆ. ಸ್ವಸ್ಥ ಸಮಾಜಕ್ಕಾಗಿ ಇಷ್ಟು ಮಾಡುವುದು ಅನಿವಾರ್ಯ” ಎಂದು ದೂರು ನೀಡಿದ್ದ ನಜ್ಮಾ ನಝೀರ್ ಪರ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪತ್ರಕರ್ತ ನವೀನ್ ಸೂರಿಂಜೆ ಫೇಸ್‌ಬುಕ್‌ ಪೋಸ್ಟ್ ಮೂಲಕ ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಕರ್ನಾಟಕಕ್ಕಾಗಿರುವ ಅನ್ಯಾಯಕ್ಕೆ ಉತ್ತರಿಸಬೇಕಾದದ್ದು ಮೋದಿ ಹೊರತು ಬಿಜೆಪಿ ಐಟಿ ಸೆಲ್ ಅಲ್ಲ: ಸಿದ್ದರಾಮಯ್ಯ

ಆರೋಪಿ ಕಲ್ಲಡ್ಕ ಪ್ರಭಾಕರ ಭಟ್ ಎರಡು ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್‌, ಇಬ್ಬರ ಭದ್ರತಾ ಖಾತರಿ ಒದಗಿಸಬೇಕು. ಸಾಕ್ಷ್ಯ ತಿರುಚಬಾರದು. ತನಿಖಾಧಿಕಾರಿ ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ. ನ್ಯಾಯಾಲಯದ ವಿಸ್ತೃತ ಆದೇಶ ಇನ್ನಷ್ಟೇ ಪ್ರಕಟವಾಗಬೇಕಿದೆ.

ಪ್ರಭಾಕರ್‌ ಭಟ್‌ ಗಂಭೀರ ಹೃದ್ರೋಗ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಡಿಸೆಂಬರ್‌ 28ರಂದು ಶ್ರೀರಂಗಪಟ್ಟಣ ನ್ಯಾಯಾಲಯವು ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಹನುಮ ಜಯಂತ್ಯುತ್ಸವದ ಅಂಗವಾಗಿ ಡಿಸೆಂಬರ್‌ 24ರಂದು ಶ್ರೀರಂಗಪಟ್ಟಣದಲ್ಲಿ ಹಿಂದೂ ಜಾಗರಣಾ ವೇದಿಕೆಯು ಆಯೋಜಿಸಿದ್ದ ಸಂಕೀರ್ತನಾ ಯಾತ್ರೆಯಲ್ಲಿ ಪ್ರಭಾಕರ್‌ ಭಟ್‌ ಮುಸ್ಲಿಮರ ವಿರುದ್ಧ ಧಾರ್ಮಿಕ ದ್ವೇಷಕಾರಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತೆ ನಜ್ಮಾ ನಜೀರ್‌ ನೀಡಿದ್ದ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್‌ ಠಾಣೆಯ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

ಪ್ರಭಾಕರ್‌ ಭಟ್‌ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 294 (ಸಾರ್ವಜನಿಕ ಸ್ಥಳದಲ್ಲಿ ಅಶ್ಲೀಲ ಮಾತುಗಳನ್ನು ಆಡುವುದು), 509 (ಮಹಿಳೆಯ ಖಾಸಗಿತನಕ್ಕೆ ಸಂಬಂಧಿಸಿದ ಮಾತುಗಳನ್ನಾಡುವುದು), 153ಎ (ಧರ್ಮದ ಆಧಾರದಲ್ಲಿ ಸಮುದಾಯಗಳ ನಡುವೆ ದ್ವೇಷ ಹರಡುವುದು) ಮತ್ತು 298 (ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡುವುದು) ಅಡಿ ಪ್ರಕರಣ ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...