5 ವರ್ಷಗಳಿಂದ ಹೊಸ ಐಐಟಿ-ಐಐಎಂ ನಿರ್ಮಿಸಿಲ್ಲ ಎಂದ ಕೇಂದ್ರ: ಅಮೆರಿಕದಲ್ಲಿ ಸುಳ್ಳು ಹೇಳಿದ ಪ್ರಧಾನಿ!

Date:

ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಯಾವುದೇ ಹೊಸ ಐಐಟಿ ಅಥವಾ ಐಐಎಂ ತೆರೆಯಲಾಗಿಲ್ಲ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಕಾಂಗ್ರೆಸ್ ಸಂಸದ ಕುಮಾರ್ ಕೇತ್ಕರ್ ಅವರ ಲಿಖಿತ ಪ್ರಶ್ನೆಗೆ ಉತ್ತರ ನೀಡಿದ ಕೇಂದ್ರ ಶಿಕ್ಷಣ ರಾಜ್ಯ ಸಚಿವ ಸುಭಾಸ್ ಸರ್ಕಾರ್ ಅವರು ಬುಧವಾರ (ಜುಲೈ 26) ರಾಜ್ಯಸಭೆಯಲ್ಲಿ ಮಾಹಿತಿ ನೀಡಿದರು.

“ಅಂಕಿಅಂಶಗಳ ಪ್ರಕಾರ ಪ್ರಸ್ತುತ ದೇಶದಲ್ಲಿ ಒಟ್ಟು 23 ಐಐಟಿಗಳು ಮತ್ತು 20 ಐಐಎಂಗಳು ಕಾರ್ಯನಿರ್ವಹಿಸುತ್ತಿವೆ. ಆದಾಗ್ಯೂ, ಶಿಕ್ಷಣ ಸಚಿವಾಲಯವು ಹಂಚಿಕೊಂಡ ಮಾಹಿತಿಯು ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಒಟ್ಟು 242 ಉನ್ನತ ಶಿಕ್ಷಣ ಸಂಸ್ಥೆಗಳನ್ನು (ಎಚ್‌ಇಐ) ಸ್ಥಾಪಿಸಲಾಗಿದೆ. ಸ್ಥಾಪಿತವಾದ 242 ಹೊಸ ಸಂಸ್ಥೆಗಳಲ್ಲಿ 90 ರಾಜ್ಯ ವಿಶ್ವವಿದ್ಯಾಲಯಗಳು, 140 ರಾಜ್ಯ ಖಾಸಗಿ ವಿಶ್ವವಿದ್ಯಾಲಯಗಳು, 8 ಕೇಂದ್ರೀಯ ವಿಶ್ವವಿದ್ಯಾಲಯಗಳು ಮತ್ತು 4 ಡೀಮ್ಡ್ ವಿಶ್ವವಿದ್ಯಾಲಯಗಳು ಸೇರಿವೆ. ಆದರೆ ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿ ಯಾವುದೇ ಹೊಸ ಐಐಟಿ ಅಥವಾ ಐಐಎಂ ತೆರೆಯಲಾಗಿಲ್ಲ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪ್ರಧಾನಿ ಕಾರ್ಯಕ್ರಮದಲ್ಲಿ ನನ್ನ ಭಾಷಣ ಕೈಬಿಡಲಾಗಿದೆ: ರಾಜಸ್ಥಾನ ಸಿಎಂ ಆರೋಪ

ಕೇಂದ್ರ ಶಿಕ್ಷಣ ಸಚಿವಾಲಯವು ರಾಜ್ಯಸಭೆಯಲ್ಲಿ ವಿರೋಧ ಪಕ್ಷಗಳ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದೆ. ಹೊಸ ಶಿಕ್ಷಣ ಸಂಸ್ಥೆಗಳ ಸ್ಥಾಪನೆ ಕುರಿತು ಎಎಪಿ ಸಂಸದ ಸಂದೀಪ್ ಕುಮಾರ್ ಪಾಠಕ್ ಅವರ ಪ್ರಶ್ನೆಗೆ ಜುಲೈ 26ರಂದು ಉತ್ತರಿಸಿದ ಸಚಿವ ಸುಭಾಸ್ ಸರ್ಕಾರ್, 2015-16 ರಿಂದ 2020-21 ರವರೆಗೆ ದೇಶಾದ್ಯಂತ ಒಟ್ಟು 314 ಹೊಸ ವಿಶ್ವವಿದ್ಯಾಲಯಗಳು ಮತ್ತು 4,725 ಕಾಲೇಜುಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದ್ದಾರೆ. 

ಪ್ರಧಾನಿ ಮೋದಿಯನ್ನು ತೆಗಳಿದ ಕಾಂಗ್ರೆಸ್

ಕಳೆದ 5 ವರ್ಷಗಳಲ್ಲಿ ಯಾವುದೇ ಹೊಸ ಐಐಟಿ ಅಥವಾ ಐಐಎಂ ನಿರ್ಮಿಸಲಾಗಿಲ್ಲ ಎಂದು ಶಿಕ್ಷಣ ಸಚಿವಾಲಯ ಇಂದು ರಾಜ್ಯಸಭೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಬಗ್ಗೆ ಕಾಂಗ್ರೆಸ್ ಮೋದಿಯ ಸುಳ್ಳು ಭಾಷಣದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ.

“ಭಾರತದಲ್ಲಿ ಪ್ರತಿ ವರ್ಷ ಹೊಸ ಐಐಟಿ ಮತ್ತು ಐಐಎಂ ಸ್ಥಾಪನೆಯಾಗುತ್ತಿದೆ ಎಂದು ಅಮೆರಿಕದಲ್ಲಿ ಪ್ರಧಾನಿ ಮೋದಿ ಹೇಳುತ್ತಿದ್ದಾರೆ. ಕಳೆದ ಐದು ವರ್ಷಗಳಲ್ಲಿ ಯಾವುದೇ ಹೊಸ ಐಐಟಿ ಅಥವಾ ಐಐಎಂ ಸ್ಥಾಪನೆಯಾಗಿಲ್ಲ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ಹೇಳುತ್ತಿದೆ. ಪ್ರಧಾನಿ ಮೋದಿ ಯಾಕೆ ಇಷ್ಟೊಂದು ಸುಳ್ಳು ಹೇಳುತ್ತಾರೆ? ಎಂದು ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ಪ್ರಧಾನಿ ಮೋದಿ ವಿರುದ್ಧ ಕಿಡಿಕಾರಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...