ಜೆಡಿಎಸ್‌ ಅಳಿಸಿಹಾಕಲು ಯಾರಿಂದಲೂ ಸಾಧ್ಯವಿಲ್ಲ, ಲೋಕಸಭೆಗೆ ಸ್ವತಂತ್ರ ಸ್ಪರ್ಧೆ: ಎಚ್‌ ಡಿ ದೇವೇಗೌಡ

Date:

  • ‘ಕಾಂಗ್ರೆಸ್‌ ಸಮಯ ಬಂದಾಗ ಸೆಕ್ಯೂಲರ್‌, ಇಲ್ಲದಿದ್ದಾಗ ನೋ ಸೆಕ್ಯೂಲರ್‌’
  • ‘ಜಿ ಟಿ ದೇವೇಗೌಡ ನೇತೃತ್ವದಲ್ಲಿ ಸಮಿತಿ ರಚಿಸಿ ರಾಜ್ಯಾದ್ಯಂತ ಪ್ರವಾಸ’

ಜೆಡಿಎಸ್ ಪಕ್ಷವನ್ನು ಯಾರಾದರೂ ಅಳಿಸಿ ಹಾಕುತ್ತೇವೆ ಎಂದು ತಿಳಿದುಕೊಂಡಿದ್ದರೆ ಅದು ಅವರ ಭ್ರಮೆ, ಯಾರಿಂದಲೂ ಜೆಡಿಎಸ್ ಅಳಿಸಿಹಾಕಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರೀಷ್ಠ ಎಚ್‌ ಡಿ ದೇವೇಗೌಡ ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ದೇವೇಗೌಡರು, “ಜೆಡಿಎಸ್‌ ಶಾಸಕರು, ವಿಧಾನಪರಿಷತ್‌ ಸದಸ್ಯರು ಹಾಗೂ ಮುಖಂಡರು ಕುಳಿತು ಮಾತುಕತೆ ನಡೆಸಿದ್ದೇವೆ. ಪಕ್ಷ ಸಂಘಟನೆಗೆ ಮುಂದೆ ಕಾರ್ಯಕ್ರಮಗಳನ್ನು ರೂಪಿಸುವ ಬಗ್ಗೆ ಸಲಹೆ ನೀಡಿದ್ದಾರೆ” ಎಂದರು.

“ಕುಮಾರಸ್ವಾಮಿ ಅವರು ವಿಶ್ರಾಂತಿಯಿಂದ ಬಂದ ಬಳಿಕ, ಯಾವ ಜಿಲ್ಲೆಗೆ ಪ್ರವಾಸ, ಏನೇನು ಕಾರ್ಯಕ್ರಮ ಮಾಡಬೇಕು ಎಂಬುದನ್ನು ತೀರ್ಮಾನ ಮಾಡಿ ಲಕ್ಷಾಂತರ ಕಾರ್ಯಕರ್ತರ ಸಮೂಹವನ್ನು ಒಂದುಗೂಡಿಸಿ ಪಕ್ಷಕ್ಕೆ ಶಕ್ತಿ ತುಂಬುವ ಕಾರ್ಯ ಮಾಡುತ್ತೇವೆ. ಜಿ ಟಿ ದೇವೇಗೌಡ ನೇತೃತ್ವದಲ್ಲಿ ಒಂದು ಸಮಿತಿ ಮಾಡಿ ರಾಜ್ಯಾದ್ಯಂತ ಪ್ರವಾಸ ಮಾಡಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾವುದೇ ಗೊಂದಲಕ್ಕೆ ಅವಕಾಶ ನೀಡದೇ ಸದೃಢವಾಗಿ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರನ್ನು ಸಂಘಟನೆ ಮಾಡಿ, ಅವರ ಜೊತೆಗೆ ನಾವಿದ್ದು, ವಿಶ್ವಾಸಕ್ಕೆ ತೆಗೆದುಕೊಂಡು, ಕುಮಾರಸ್ವಾಮಿ ಅವರು ಕೊಟ್ಟಿರುವ ಕಾರ್ಯಕ್ರಮಗಳನ್ನು ಜನರ ಮುಂದೆ ಇಟ್ಟು ಹೋರಾಟ ಮಾಡುತ್ತೇವೆ” ಎಂದು ತಿಳಿಸಿದರು.

‘ಕಾಂಗ್ರೆಸ್‌ ಸಮಯ ಬಂದಾಗ ಸೆಕ್ಯೂಲರ್‌, ಇಲ್ಲದಿದ್ದಾಗ ನೋ ಸೆಕ್ಯೂಲರ್‌’

“ಹೆಗ್ಗಡೆ ಅವರು ಬಿಜೆಪಿ ಜೊತೆಗೆ ಹೋಗಿ ಮುಖ್ಯಮಂತ್ರಿ ಆಗಲಿಲ್ಲವೆ? ಆದರೆ, ಕುಮಾರಸ್ವಾಮಿ ಸಿಎಂ ಆಗಿದ್ದನ್ನೇ ಮುಂದೆ ಇಟ್ಟು ಮಾತನಾಡುತ್ತಾರೆ. ಜೆಡಿಎಸ್‌ ಮುಳುಗಿ ಹೋಗುತ್ತದೆ ಎನ್ನುತ್ತಾರೆ. ಹೌದು, ಪಾರ್ಲಿಮೆಂಟ್‌ ಚುನಾವಣೆಯಲ್ಲಿ ಅದು ಸ್ವಾಭಾವಿಕ, ನಾವು ಎಷ್ಟು ಸ್ಥಾನ ಗೆಲ್ಲುತ್ತೇವೋ ಗೊತ್ತಿಲ್ಲ. ನಾವು ಸ್ವತಂತ್ರವಾಗಿ ಹೋರಾಟ ಮಾಡುತ್ತೇವೆ. 28 ಕ್ಷೇತ್ರಗಳಲ್ಲಿ ಎಲ್ಲಿ ಶಕ್ತಿ ಇದೆಯೋ ಅಲ್ಲಿ, ನಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಹಾಕಿ ಚುನಾವಣೆ ಎದುರಿಸುತ್ತೇವೆ” ಎಂದು ಸ್ಪಷ್ಟನೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಯಾವುದೇ ಸಚಿವರ ಮೇಲೆ ಶಾಸಕರಿಂದ ದೂರು ಬಂದಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯತಿಕ್ಸ್‌ ಮರೆಯಬಾರದು ಎಂದು ಬಹಳ ಒಳ್ಳೆ ಸಂದೇಶ ಕೊಟ್ಟಿದ್ದಾರೆ. ಆದರೆ, ಅವರ ಪಕ್ಷದವರೇ ಆದ ಟಿ ಬಿ ಜಯಚಂದ್ರ ಅವರು, ಕೊಟ್ಟಿರುವ ವರದಿ ಮೇಲೆ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಿಎಂ ಈವರೆಗೂ ತಮ್ಮ ದೃಢವಾದ ನಿರ್ಧಾರ ಹೇಳುತ್ತಿಲ್ಲ. ಆದರೆ ಈ ಉಪದೇಶ ಯಾರಿಗೆ? ಸಿದ್ದರಾಮಯ್ಯ ಅವರೇ ಅಧಿಕಾರ ಮುಖ್ಯ ಅಲ್ಲ. ನೀವು ಮಾತನಾಡುವ ಮಾತು ಹೃದಯದ ಅಂತರಾಳದಿಂದ ಬರಬೇಕು. ಅಧಿಕಾರ ಬರುತ್ತೆ ಹೋಗುತ್ತೆ” ಎಂದರು.

ಕಾಂಗ್ರೆಸ್‌ ಇಲ್ಲದೆ ಮೊದಲ ಬಾರಿಗೆ 1983ರಲ್ಲಿ ರಾಜ್ಯದಲ್ಲಿ ಸರ್ಕಾರ ರಚನೆ ಆಗಿತ್ತು. ಅಂದು ಬಿಜೆಪಿ ಜೊತೆಗೆ ಹೊಂದಾಣಿಕೆ ಮಾಡಿರಲಿಲ್ಲವೇ? ಸಿದ್ದರಾಮಯ್ಯ ಅವರು ಕಾವಲು ಸಮಿತಿ ಅಧ್ಯಕ್ಷರಾಗಿರಲಿಲ್ಲವೆ? ಬಿಜೆಪಿಯ ಬೆಂಬಲದಿಂದ ರಚನೆ ಆದಂತ ಹೆಗ್ಗಡೆ ಅವರ ಸರ್ಕಾರದಲ್ಲಿ ಯಾರು ಲೋಕೋಪಯೋಗಿ ಸಚಿವರು, ಅವರೇ ಕಾವಲು ಸಮಿತಿ ಅಧ್ಯಕ್ಷರು. ಆದ್ದರಿಂದ ರಾಜಕೀಯದಲ್ಲಿ ಯಾವ ಯಾವ ಸಂದರ್ಭದಲ್ಲಿ ಏನಾಗಿದೆ ಎಂದು ಜಿ ಟಿ ದೇವೇಗೌಡರು ವಿವರವಾಗಿ ಹೇಳಿದ್ದಾರೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...