ಯತ್ನಾಳ್‌ ಮಾತನ್ನು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ: ಮುರುಗೇಶ್ ನಿರಾಣಿ

Date:

ಶಾಸಕ ಬಸನಗೌಡ ಪಾಟೀಲ​ ಯತ್ನಾಳ್ ​ಅವರ ಮಾತನ್ನು ಯಾರೂ ಸೀರಿಯಸ್ ಆಗಿ ತೆಗೆದುಕೊಳ್ಳಲ್ಲ. ಹಾದಿ ಬೀದಿಯಲ್ಲಿ ಹೋಗೋರು ಮಾತನಾಡಿದರೆ ಉತ್ತರ ಕೊಡಲು ಆಗುತ್ತದಾ? ಎಂದು ಮಾಜಿ ಸಚಿವ ಮುರುಗೇಶ್​​ ನಿರಾಣಿ ಹರಿಹಾಯ್ದರು.

ಬಾಗಲಕೋಟೆಯಲ್ಲಿ ಸುದ್ದಿಗಾರರ ಜೊತೆ ಬಿಜೆಪಿ ನೂತನ ಪದಾಧಿಕಾರಿಗಳ ಬಗ್ಗೆ ಯತ್ನಾಳ್ ಟೀಕೆ ಮಾಡಿರುವ ವಿಚಾರವಾಗಿ ಮಾತನಾಡಿ, “ಏನು ಮಾತಾಡ್ತಿದ್ದೀನಿ ಅಂತಾ ಅವರಿಗೆ ಅರ್ಥ ಆಗುತ್ತೋ ಇಲ್ವೋ ಗೊತ್ತಿಲ್ಲ. ದೀಪ ಆರುವಾಗ ಗಾಳಿಗೆ ಜಾಸ್ತಿ ಉರಿಯುತ್ತೆ” ಎಂದು ಕಿಡಿಕಾರಿದರು.

“ಇನ್ನು ಆರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದುಹೋಗುತ್ತೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯದ ಜನ ರೊಚ್ಚಿಗೆದ್ದಿದ್ದಾರೆ. ಈ ಸರ್ಕಾರ ಹಿಂದೂಗಳಿಗೆ ತಾರತಮ್ಯ ಮಾಡುತ್ತಿದೆ. ಈ​ ಸರ್ಕಾರವನ್ನು ಕಿತ್ತೊಗೆಯಲು ಜನ ಎದುರು ನೋಡುತ್ತಿದ್ದಾರೆ. ಈಗಾಗಲೇ ಕಾಂಗ್ರೆಸ್ ಸರ್ಕಾರ ಕೋಮಾದಲ್ಲಿದೆ. ಅದರ ಬಗ್ಗೆ ಮಾತನಾಡಿ ನಾವೇಕೆ ಪಾಪ ಕಟ್ಟಿಕೊಳ್ಳುವ ಕೆಲಸ‌ ಮಾಡಬೇಕು” ಎಂದು ಲೇವಡಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

ಹಿಜಾಬ್ ನಿಷೇಧ ಬಗ್ಗೆ ಪ್ರತಿಕ್ರಿಯಿಸಿ, “ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡುತ್ತೇನೆ, ಬೆಳಗ್ಗೆ ಒಂದು, ಮಧ್ಯಾಹ್ನ ಒಂದು ಮತ್ತು ಸಂಜೆ ಒಂದು ಹೇಳಿಕೆ ನೀಡುತ್ತಾರೆ. ಹಿಜಾಬ್ ಪ್ರಕರಣ ಸುಪ್ರೀಂಕೋರ್ಟ್​​ನಲ್ಲಿದ್ದರೂ ಹೇಳಿಕೆ ನೀಡಿದ್ದಾರೆ. ಶಾಲೆಗೆ ಮಕ್ಕಳು ಯಾವ ಡ್ರೆಸ್​ನಲ್ಲಿ ಬೇಕಾದರೂ ಬರಬಹುದು. ಸಿರಿವಂತರು, ಬಡವರು, ಮೇಲ್ಜಾತಿ-ಕೆಳಜಾತಿ ಎಂಬ ಭೇದ-ಭಾವ ಬರಬಾರದೆಂದು ಸಮವಸ್ತ್ರ ಮಾಡಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಾನತೆ ಬೇಕಾಗಿಲ್ಲ. ಬಡವರು ಬಡವರಾಗಿ ಇರಬೇಕು. ಶ್ರೀಮಂತರು ಶ್ರೀಮಂತರಾಗಿ ಇರಬೇಕು” ಎಂದರು.

“ಇಡೀ ಜಗತ್ತಿನಲ್ಲಿ ನಮ್ಮದು ಹಿಂದೂ ರಾಷ್ಟ್ರ. ಅಂತಹ ಭಾರತ ದೇಶದಲ್ಲಿ ಯಾರನ್ನು ಓಲೈಸುತ್ತಾರೆ ಅನ್ನೋದು ನಿತ್ಯ ನೋಡುತ್ತಿದ್ದೇವೆ. ಮುಸ್ಲಿಂ ಬಾಂಧವರಿಗೆ 10 ಸಾವಿರ ಕೋಟಿ ಮೀಸಲು ಇಡುತ್ತೇನೆ ಅಂತ ಹೇಳುತ್ತಿದ್ದಾರೆ. ಹಿಂದೂಗಳು ಏನು ಪಾಪ ಮಾಡಿದ್ದಾರೆ. ಹಿಂದೂಗಳಿಗೆ ಒಂದು ರೂಪಾಯಿನೂ ಘೋಷಣೆ ಮಾಡದ ಈ ಸರ್ಕಾರವನ್ನ ಕಿತ್ತು ಒಗೆಯಲು ಜನರು ತುದಿಗಾಲಿನಲ್ಲಿ ನಿಂತಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...