ಜೆಡಿಎಸ್‌ ಫ್ಲೆಕ್ಸ್​ಗಳಲ್ಲಿ ಸಚಿವ ಎಚ್‌ಡಿಕೆ ಸಹೋದರ ರೇವಣ್ಣ ಫೋಟೋಗಿಲ್ಲ ಜಾಗ!

Date:

ಲೈಂಗಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣಗಳಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಇಬ್ಬರು ಮೊಮ್ಮಕ್ಕಳು ಜೈಲು ಸೇರಿದ್ದಾರೆ. ಮಗ ಎಚ್‌.ಡಿ ರೇವಣ್ಣ ಜೈಲು ಸೇರಿ, ಜಾಮೀನು ಪಡೆದು ಹೊರಬಂದಿದ್ದಾರೆ. ಮತ್ತೊಬ್ಬ ಮಗ ಎಚ್‌.ಡಿ ಕುಮಾರಸ್ವಾಮಿ ಮಂಡ್ಯ ಸಂಸತ್ ಚುನಾವಣೆಯಲ್ಲಿ ಗೆದ್ದು, ಕೇಂದ್ರದಲ್ಲಿ ಮಂತ್ರಿಗಿರಿ ಪಡೆದಿದ್ದಾರೆ. ಈ ನಡುವೆ, ಕುಮಾರಸ್ವಾಮಿ ಮಂತ್ರಿಯಾಗಿದ್ದಕ್ಕೆ ಜೆಡಿಎಸ್‌ ಅಭಿನಂದನೆ ಸಲ್ಲಿಸಿ, ಫ್ಲೆಕ್ಸ್‌ಗಳನ್ನು ಹಾಕಿದ್ದು, ಅದರಲ್ಲಿ ರೇವಣ್ಣ ಚಿತ್ರವನ್ನು ಕೈಬಿಡಲಾಗಿದೆ.

ರೇವಣ್ಣ ಮತ್ತು ಅವರ ಇಬ್ಬರೂ ಮಕ್ಕಳು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಗಳಾಗಿದ್ದು, ಪ್ರಜ್ವಲ್‌ ರೇವಣ್ಣನನ್ನು ಮಾತ್ರ ಜೆಡಿಎಸ್‌ನಿಂದ ಅಮಾನತು ಮಾಡಲಾಗಿದೆ. ರೇವಣ್ಣ ಮತ್ತು ಸೂರಜ್‌ ಇನ್ನೂ ಜೆಡಿಎಸ್‌ನಲ್ಲಿದ್ದು, ಶಾಸಕ, ಎಂಎಲ್‌ಸಿ ಆಗಿದ್ದಾರೆ. ಆದಾಗ್ಯೂ, ಜೆಡಿಎಸ್‌ ಫ್ಲೆಕ್ಸ್‌ಗಳಲ್ಲಿ ದೇವೇಗೌಡರ ಎರಡನೇ ಮಗನ ಚಿತ್ರಕ್ಕೆ ಅವಕಾಶ ನೀಡಲಾಗಿಲ್ಲ. ರೇವಣ್ಣ ಕುಟುಂಬದ ಲೈಂಗಿಕ ಹಗರಣಗಳ ಕಾರಣದಿಂದಾಗಿ, ಅವರ ಕುಟುಂಬದಿಂದ ಅಂತರ ಕಾಯ್ದುಕೊಳ್ಳಲು ಕುಮಾರಸ್ವಾಮಿ ಯತ್ನಿಸುತ್ತಿದ್ದಾರೆ. ರೇವಣ್ಣ ಕುಟುಂಬವನ್ನು ದೂರವಿಟ್ಟು ನೋಡುತ್ತಿದ್ದಾರೆ.

ಮಂಡ್ಯದಲ್ಲಿನ ಪ್ರಮುಖ ಸರ್ಕಲ್‌ಗಳಲ್ಲಿ ಕುಮಾರಸ್ವಾಮಿಗೆ ಅಭಿನಂದನೆ ಸಲ್ಲಿಸಿ, ಬೃಹತ್ ಫ್ಲೆಕ್ಸ್‌ಗಳನ್ನು ಹಾಕಲಾಗಿದೆ. ಅವುಗಳಲ್ಲಿ ಬಿಜೆಪಿಯ ಪ್ರಮುಖ ನಾಯಕರ ಚಿತ್ರಗಳೂ ಇವೆ. ಆದರೆ, ಮಾಜಿ ಸಚಿವ ರೇವಣ್ಣ ಭಾವಚಿತ್ರಕ್ಕೆ ಜಾಗ ನೀಡಲಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ, ಹಾಸನ ಜಿಲ್ಲೆಯಲ್ಲಿ ರೇವಣ್ಣ ಕುಟುಂಬದ ದೌರ್ಜನ್ಯ – ದಬ್ಬಾಳಿಕೆಗಳು ಬಹಿರಂಗವಾಗಿದ್ದು, ಜೆಡಿಎಸ್‌ ಮುಜುಗರ ಅನುಭವಿಸುತ್ತಿದೆ. ಆದಾಗ್ಯೂ, ಪ್ರಜ್ವಲ್ ಪ್ರಕರಣದಲ್ಲಿ ಮೊದಲಿಗೆ ರೇವಣ್ಣ ಕುಟುಂಬಕ್ಕೂ ನಮಗೂ ಸಂಬಂಧವೇ ಇಲ್ಲ ಎಂದಿದ್ದ ಕುಮಾರಸ್ವಾಮಿ, ನಂತರದಲ್ಲಿ ರೇವಣ್ಣ ಕುಟುಂಬದ ಪರ ನಿರಂತರವಾಗಿ ಮಾತನಾಡುತ್ತಿದ್ದರು. ಆದರೆ, ಪ್ರಜ್ವಲ್ ಮತ್ತು ಸೂರಜ್ ಬಂಧನದ ಬಳಿಕ, ಅವರ ಕುಟುಂಬದಿಂದ ಅಂತರ ಕಾಯ್ದುಕೊಳ್ಳಲು ಕುಮಾರಸ್ವಾಮಿ ಹಾಗೂ ಜೆಡಿಎಸ್ ನಾಯಕರು ಯತ್ನಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...