ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ: ಗೊಂದಲಗಳಿಗೆ ತೆರೆ ಎಳೆದ ಸುರ್ಜೇವಾಲ

Date:

ಲೋಕಸಭೆ ಚುನಾವಣೆ ವೇಳೆಯೇ ಕಾಂಗ್ರೆಸ್‌ನಲ್ಲಿ ಮೂರು ಡಿಸಿಎಂ ಹುದ್ದೆ ಕೂಗು ಭಾರೀ ಜೋರಾಗಿತ್ತು. ಅಲ್ಲದೇ, ಇದೇ ವಿಚಾರವಾಗಿ ಕೆಲವು ಸಚಿವರು ಮಾಧ್ಯಮಗಳಲ್ಲಿ ಬಹಿರಂಗ ಹೇಳಿಕೆಗಳನ್ನು ಕೂಡ ಕೊಡುತ್ತಿದ್ದರು. ಈಗ ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಎದ್ದಿದ್ದ ಎಲ್ಲ ಕೋಲಾಹಲ, ಗೊಂದಲಗಳಿಗೆ ತೆರೆ ಎಳೆದಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, “ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ” ಎಂದಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಡಿಸಿಎಂ ಹುದ್ದೆ ಸೃಷ್ಟಿ ವಿಚಾರ ಸಿನಿಮೀಯ ರೀತಿಯಲ್ಲಿ ಚರ್ಚೆ ಆಗುತ್ತಿದೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಮಾಡುವ ಯಾವುದೇ ಪ್ರಸ್ತಾಪವಿಲ್ಲ. ಜನರ ಬಳಿ ಆಡಳಿತವನ್ನು ತೆಗೆದುಕೊಂಡು ಹೋಗುವ ಜವಾಬ್ದಾರಿ ಇದೆ. ಮುಂದಿನ ಲೋಕಸಭಾ ಚುನಾವಣೆಗೆ ನಾವು ತಯಾರಿ ನಡೆಸುತ್ತಿದ್ದೇವೆ” ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿದ್ದೀರಾ? ಲೋಕಸಭೆ ಚುನಾವಣೆ | ಅಭ್ಯರ್ಥಿಗಳ ಆಯ್ಕೆ ವರದಿ ತೃಪ್ತಿ ತಂದಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಿಸಿಎಂ ಹುದ್ದೆ ಸೃಷ್ಟಿ ವಿಚಾರವೆಲ್ಲಾ ಸಿನಿಮೀಯ ರೀತಿಯ ಊಹಾಪೋಹದ ಸುದ್ದಿಯಾಗಿದೆ. ಎಲ್ಲ ಕ್ಷೇತ್ರಗಳಲ್ಲೂ ಜನರ ಕಲ್ಯಾಣಕ್ಕೆ ನಾವು ಒತ್ತು ನೀಡುತ್ತಿದ್ದೇವೆ. ಗ್ಯಾರಂಟಿ ಜಾರಿ ನಮ್ಮ ಆದ್ಯತೆಯಾಗಿದೆ. ಪ್ರತಿಯೊಂದು ತಾಲೂಕುಗಳಲ್ಲಿ, ಕ್ಷೇತ್ರಗಳಲ್ಲಿ ಆಸ್ಪತ್ರೆ, ರಸ್ತೆ, ಬಸ್ ನಿಲ್ದಾಣಗಳು ಹಾಗೂ ಮೂಲ ಸೌಕರ್ಯಗಳನ್ನು ಕೊಡುವುದು ನಮ್ಮ ಸದ್ಯದ ಆದ್ಯತೆಯಾಗಿದೆ” ಎಂದು ಸುರ್ಜೇವಾಲ ತಿಳಿಸಿದರು.

ಈ ಮೂಲಕ  ಡಿಸಿಎಂ ಕೂಗಿಗೆ ಫುಲ್​ ಸ್ಟಾಪ್ ಇಟ್ಟರು. ಅಲ್ಲದೇ ಹೆಚ್ಚುವರಿ ಡಿಸಿಎಂ ಸೃಷ್ಟಿ ಮಾಡಬೇಕೆಂಬುವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...