ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೆ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹಾವೇರಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಈಗ ತಾನೇ ಅರ್ಜಿ ಕೊಟ್ಟಿದ್ದಾರೆ. ಸಾಮೂಹಿಕ ಅತ್ಯಾಚಾರ ಪ್ರಕರಣದ ಅರ್ಜಿ ಪರಿಗಣಿಸಲಾಗುವುದು” ಎಂದರು.

“ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ. ಕಾನೂನಿನ ಪ್ರಕಾರ ಕ್ರಮ ಜರುಗಿಸುವ ಕೆಲಸ ಮಾಡುತ್ತೇವೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂತ್ರಸ್ತೆಯನ್ನು ಭೇಟಿ ಮಾಡಿ ಬರುವುದು ಸಾಂತ್ವನ ಹೇಳುವುದು ಒಂದು ಭಾಗವಾದರೆ ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುವುದು ಮತ್ತೊಂದು ಭಾಗ” ಎಂದ ಸಿಎಂಗೆ ಬೆಳಗಾವಿ ಜಿಲ್ಲೆಯ ಪ್ರಕರಣದಲ್ಲಿ ಮಾತ್ರ ತಕ್ಷಣ ಭೇಟಿ ನೀಡಿ ಪರಿಹಾರ ನೀಡಿದಿರಿ ಎಂಬ ಪ್ರಶ್ನೆಗೆ ”ಅಲ್ಲಿಗೆ ಗೃಹ ಸಚಿವರು ಭೇಟಿ ನೀಡಿದ್ದರು. ಭೇಟಿ ನೀಡುವಂತೆ ನಾನೇ ಸೂಚನೆ ನೀಡಿದ್ದೆ. ಇಲ್ಲಿ ಗೃಹ ಸಚಿವರು ಇರಲಿಲ್ಲ. ಕೇಂದ್ರದ ಮಾಜಿ ಸಚಿವ ಶಿವಣ್ಣ ಭೇಟಿ ನೀಡಿದ್ದಾರೆ” ಎಂದರು.

ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡನೆ

“ಮಾರ್ಚ್ ಮೊದಲ ವಾರದೊಳಗೆ ಚುನಾವಣಾ ನೀತಿ ಸಂಹಿತೆ ಘೋಷಣೆಯಾಗುವುದರಿಂದ ಫೆಬ್ರವರಿ ತಿಂಗಳಲ್ಲಿಯೇ ಬಜೆಟ್ ಮಂಡಿಸಲಾಗುವುದು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ನಂತರ ರೈತರಿಗೆ ಪುನಃ ಪರಿಹಾರ

“ರೈತರಿಗೆ ಪರಿಹಾರ ನೀಡಿಲ್ಲವೆಂದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ರೈತರಿಗೆ 2,000 ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡುತ್ತಿದ್ದು ಕೇಂದ್ರ ಸರ್ಕಾರದಿಂದ ಪರಿಹಾರ ಬಂದ ನಂತರ ಪುನಃ ಎನ್.ಡಿ.ಆರ್.ಎಫ್ ನಿಯಮಾವಳಿಗಳ ಪ್ರಕಾರ ಪರಿಹಾರ ನೀಡಲಾಗುವುದು” ಎಂದರು.

ಮನುಷ್ಯತ್ವ ಇರಬೇಕು

ಅನಂತಕುಮಾರ್ ಹೆಗಡೆಯವರು ಏಕವಚನದಲ್ಲಿ ಮಾತನಾಡುವುದನ್ನು ಕಲಿಸಿದ್ದೇ ಸಿದ್ದರಾಮಯ್ಯ ಅವರು ಎಂದು ಸಮರ್ಥಿಸಿಕೊಂಡಿದ್ದಾರೆ ಎಂಬ ಬಗ್ಗೆ ಪ್ರತಿಕ್ರಿಯೆ ನೀಡಿ, “ರಾಜಕೀಯವಾಗಿ ಆರೋಪ ಮಾಡುತ್ತಾರೆ. ಅನಂತ ಕುಮಾರ್ ಹೆಗಡೆ ಅವರು ಇವತ್ತಿನವರೆಗೆ ನಾಪತ್ತೆಯಾಗಿದ್ದರು. ಚುನಾವಣೆ ಹತ್ತಿರ ಬಂದಂತೆ ಕಾಣಿಸಿಕೊಂಡು ಹೇಳಿಕೆ ನೀಡಿದ್ದಾರೆ. ಸಂಸದರಾಗಿ ಮಾಜಿ ಮಂತ್ರಿಯಾಗಿ ಕ್ಷೇತ್ರಕ್ಕೆ ಏನಾದರೂ ಮಾಡಿದ್ದಾರೆಯೇ? ಇಂದಿನವರೆಗೆ ಬಡವರ ಸಮಸ್ಯೆ ಕೇಳಿದ್ದಾರೆಯೇ? ಸಂಸ್ಕೃತಿ ಎಂದರೆ ಮನುಷ್ಯತ್ವ. ಮೊದಲು ಮನುಷ್ಯತ್ವ ಇರಬೇಕು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...