ಪಶ್ಚಿಮ ಬಂಗಾಳ | ಕಾಂಗ್ರೆಸ್‌ನೊಂದಿಗೆ ಮೈತ್ರಿ ಇಲ್ಲ, ಏಕಾಂಗಿ ಸ್ಪರ್ಧೆ ಎಂದು ಘೋಷಿಸಿದ ಮಮತಾ ಬ್ಯಾನರ್ಜಿ

Date:

ಮುಂದಿನ ಲೋಕಸಭಾ ಚುನಾವಣೆಗೆ ದಿನಾಂಕ ಪ್ರಕಟಣೆಗೂ ಮುನ್ನವೇ ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ತಿಕ್ಕಾಟ ಏರ್ಪಟ್ಟಿದೆ.

“ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್‌ನೊಂದಿಗೆ ನಾವು ಮೈತ್ರಿ ಮಾಡುವುದಿಲ್ಲ. ಟಿಎಂಸಿಯು ಏಕಾಂಗಿಯಾಗಿಯೇ ಸ್ಪರ್ಧೆ ಮಾಡಲಿದೆ” ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಹಿರಂಗವಾಗಿಯೇ ಘೋಷಿಸಿದ್ದಾರೆ.

“ನಾವು ಬಂಗಾಳದಲ್ಲಿ ಏಕಾಂಗಿಯಾಗಿಯೇ ಸ್ಪರ್ಧಿಸುತ್ತೇವೆ. ನಾವು ಸೀಟು ಹಂಚಿಕೆಯ ಪ್ರಸ್ತಾಪವನ್ನು ಮಾಡಿದ್ದೆವು. ಆದರೆ ಅವರು ತಿರಸ್ಕರಿಸಿದರು ಮತ್ತು ನಂತರ ಯಾವುದೇ ಮಾತುಕತೆ ನಡೆಯಲಿಲ್ಲ. ಬಂಗಾಳಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ನೊಂದಿಗೆ ಯಾವುದೇ ಮೈತ್ರಿ ಇಲ್ಲ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾರತ್ ಜೋಡೊ ನ್ಯಾಯ ಯಾತ್ರೆಗೆ ಆಹ್ವಾನಿಸುವಲ್ಲಿ ಅಥವಾ ಯಾತ್ರೆಯು ಬಂಗಾಳದಲ್ಲಿ ಸಾಗುವ ಬಗ್ಗೆ ತಿಳಿಸುವಲ್ಲಿ ನಮಗೆ ಯಾವುದೇ ಮಾಹಿತಿ ನೀಡುವ ಸೌಜನ್ಯ ಕೂಡ ನೀಡಲಿಲ್ಲ” ಎಂದು ಇದೇ ವೇಳೆ ದೀದಿ ಬೇಸರ ಹೊರಹಾಕಿದ್ದಾರೆ.

“ಇಂಡಿಯಾ ಮೈತ್ರಿಕೂಟದೊಂದಿಗಿನ ಸಂಬಂಧದ ಬಗ್ಗೆ ಏನು ಮಾಡಬೇಕೆಂಬುದನ್ನು ಚುನಾವಣೆಯ ನಂತರ ತಿಳಿಸುತ್ತೇವೆ. ನಾವು ಜಾತ್ಯತೀತ ಪಕ್ಷವಾಗಿದ್ದು, ಬಿಜೆಪಿಯನ್ನು ಸೋಲಿಸಲು ಎಲ್ಲ ಶ್ರಮವನ್ನು ಹಾಕುತ್ತೇವೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಮಮತಾ ಬ್ಯಾನರ್ಜಿ ಅವರೊಂದಿಗೆ ಉತ್ತಮ ಒಡನಾಟ ಹೊಂದಿದ್ದೇವೆ. ಬಂಗಾಳದಲ್ಲಿ ಸೀಟು ಹಂಚಿಕೆಯ ಮಾತುಕತೆ ನಡೆಯುತ್ತಿದೆ” ಎಂದು ರಾಹುಲ್ ಗಾಂಧಿ ಹೇಳಿದ ಒಂದು ದಿನದ ನಂತರ ಮಮತಾ ಬ್ಯಾನರ್ಜಿ ಈ ಹೇಳಿಕೆ ನೀಡಿದ್ದಾರೆ.

ಚುನಾವಣೆಗೆ ಸ್ಪರ್ಧಿಸಲು ಮಮತಾ ಬ್ಯಾನರ್ಜಿ ಸಹಾಯ ನಮಗೆ ಬೇಡ ಎಂದಿದ್ದ ಅಧೀರ್ ರಂಜನ್ ಚೌಧರಿ

ಪಶ್ವಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಕಾಂಗ್ರೆಸ್‌ ಮುಖಂಡ ಅಧೀರ್ ರಂಜನ್ ಚೌಧರಿ, ಮಮತಾ ಅವರನ್ನು ಅವಕಾಶವಾದಿ ಎಂದು ಕರೆದಿದ್ದರು.

ಮಾಧ್ಯಮಗಳೊಂದಿಗೆ ನಿನ್ನೆ ಮಾತನಾಡಿದ್ದ ಅಧೀರ್ ರಂಜನ್ ಚೌಧರಿ, “ಮಮತಾ ಬ್ಯಾನರ್ಜಿ ಸಹಾಯದೊಂದಿಗೆ ನಾವು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ತನ್ನ ಸ್ವಂತ ಬಲದೊಂದಿಗೆ ಹೇಗೆ ಸ್ಪರ್ಧಿಸಬೇಕೆಂದು ಕಾಂಗ್ರೆಸ್‌ಗೆ ಗೊತ್ತಿದೆ. ಬಂಗಾಳದಲ್ಲಿ ಕಾಂಗ್ರೆಸ್ ಬೆಂಬಲದೊಂದಿಗೆ ಟಿಎಂಸಿ ಅಧಿಕಾರಕ್ಕೆ ಬಂದಿದ್ದು ಎಂಬುದನ್ನು ಮಮತಾ ಬ್ಯಾನರ್ಜಿ ಅವರು ನೆನಪಿನಲ್ಲಿ ಇಟ್ಟುಕೊಳ್ಳಬೇಕು” ಎಂದಿದ್ದರು.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವನ್ನು ಸೋಲಿಸುವ ನಿಟ್ಟಿನಲ್ಲಿ ವಿಪಕ್ಷಗಳೇ ಸೇರಿಕೊಂಡು ‘ಇಂಡಿಯಾ ಒಕ್ಕೂಟ’ವನ್ನು ರಚಿಸಿತ್ತು. ಇದರ ಸಂಚಾಲಕರಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಇತ್ತೀಚಿಗಷ್ಟೇ ಆಯ್ಕೆ ಮಾಡಲಾಗಿತ್ತು.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ: ಹಿಂಸಾಚಾರದಲ್ಲಿ ಪಾಲ್ಗೊಂಡಿದ್ದವರ ಅಂಗಡಿಗಳನ್ನು ಧ್ವಂಸಗೊಳಿಸಿದ ಪಾಲಿಕೆ

ಇದರ ನಡುವೆಯೇ ಇಂಡಿಯಾ ಮೈತ್ರಿಕೂಟದಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ತಿಕ್ಕಾಟ ಏರ್ಪಟ್ಟಿದೆ. ಈ ನಡುವೆಯೇ ಮಮತಾ ಬ್ಯಾನರ್ಜಿಯವರ ಈ ಬಹಿರಂಗ ಘೋಷಣೆಯು ಮತ್ತಷ್ಟು ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಲಿದೆ.

‘ಇಂಡಿಯಾ ಒಕ್ಕೂಟ’ದಲ್ಲಿ ಮಮತಾ ಬ್ಯಾನರ್ಜಿಯೇ ಮುಂಚೂಣಿಯಲ್ಲಿದ್ದ ನಾಯಕಿಯಾಗಿದ್ದರು. ಅಲ್ಲದೇ, ಮಲ್ಲಿಕಾರ್ಜುನ ಖರ್ಗೆ ಅವರೇ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿಯಾಗಲಿ ಎಂದು ತಿಳಿಸಿದ್ದ ಪ್ರಮುಖರಲ್ಲೋರ್ವರಾಗಿದ್ದರು. ಇಂಡಿಯಾ ಒಕ್ಕೂಟವು ಈವರೆಗೆ ಒಟ್ಟು ಐದು ಸಭೆಗಳನ್ನು ನಡೆಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...