ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ರೀತಿಯ ಹಗರಣಗಳು ನಡೆದಿಲ್ಲ : ಸಚಿವ ಕೆ ಎನ್ ರಾಜಣ್ಣ

Date:

“ಬಿಜೆಪಿಯವರು ಅವರ ಪಕ್ಷದಲ್ಲಿ ನಾಯಕತ್ವ ನಿರೂಪಿಸಲು ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ” ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.

ತುಮಕೂರಿನ ಗೃಹ ಕಚೇರಿಯಲ್ಲಿ ಈ ದಿನ. ಕಾಮ್‌ನ ಸಹಾಯವಾಣಿ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರದಲ್ಲಿ ಯಾವುದೇ ರೀತಿಯ ಹಗರಣಗಳು ನಡೆದಿಲ್ಲ. ಈ ಹಿಂದಿನ ಬಿಜೆಪಿ ಸರ್ಕಾರದಲ್ಲೇ 25 ಹಗರಣಗಳು ನಡೆದಿವೆ. ಅದನ್ನು ಮಾಧ್ಯಮಗಳು ಕೂಡ ವರದಿ ಮಾಡಿದೆ. ಬಿಜೆಪಿಯ ನಾಯಕರು ಅವರ ಪಕ್ಷದಲ್ಲಿ ನಾಯಕತ್ವ ನಿರೂಪಿಸಿಕೊಳ್ಳಲು ವಿನಾಃಕಾರಣ ಕಾಂಗ್ರೆಸ್ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಆರೋಪಗಳಿಂದ ಅವರಿಗೆ ಯಾವುದೇ ರೀತಿಯ ಯಶಸ್ಸು ಸಿಗುವುದಿಲ್ಲ” ಎಂದು ಹೇಳಿದರು.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಸಿ ಎಂ ಸಿದ್ದರಾಮಯ್ಯ ಪತ್ನಿ ಪಾರ್ವತಮ್ಮ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ತಂದೆಯ ಹೆಸರು ಪ್ರಸ್ತಾಪ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ರಾಜಣ್ಣ, “ರಾಜಕಾರಣದಲ್ಲಿ ಯಾವಾಗಲೂ ತಾಳ್ಮೆಯ ರಾಜಕಾರಣ ಇರಬೇಕು. ಏಕವಚನದಲ್ಲಿ ಬೈಯ್ಯೋದು, ಮಾತಾಡೋದು. ಗಂಭೀರವೇ ಅಲ್ಲದ ವಿಷಯಗಳನ್ನು ವಿವಾದವನ್ನಾಗಿ ಮಾಡುವುದು ಸರಿಯಲ್ಲ. ವೈಯಕ್ತಿಕವಾಗಿ ಕುಟುಂಬ ಸದಸ್ಯರ ಹೆಸರುಗಳನ್ನ ಪ್ರಸ್ತಾಪ ಮಾಡುವುದು. ಇದು ಯಾವುದೇ ರಾಜಕಾರಣಿಗೆ ಭೂಷಣವಲ್ಲ” ಎಂದು ಹೇಳುವ ಮೂಲಕ ಪರೋಕ್ಷವಾಗಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಟಾಂಗ್ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...