ಅಧಿವೇಶನ | ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಪ್ರಸ್ತಾವ ಇಲ್ಲ: ‌ಸಚಿವ ಎಚ್‌ ಕೆ ಪಾಟೀಲ್

Date:

ಕರಾವಳಿ ಪ್ರವಾಸೋದ್ಯಮ ಹೆಚ್ಚು ಜನಪ್ರಿಯವಾಗಿದ್ದು, ವಾರ್ಷಿಕ 8 ಕೋಟಿ ಪ್ರವಾಸಿಗರು ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಗುರುರಾಜ ಶೆಟ್ಟಿ ಘಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ರಾಜ್ಯದ ಕರಾವಳಿ ಭಾಗವೂ ಒಳಗೊಂಡಂತೆ ಒಟ್ಟಾರೆ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕರ್ನಾಟಕ ಪ್ರವಾಸೋದ್ಯಮ ನೀತಿ-2024-29 ನ್ನು ಜಾರಿಗೆ ತರಲಾಗಿದೆ” ಎಂದರು.

“ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ತರುವ ಪ್ರಸ್ತಾವನೆ ಇಲ್ಲ. ಪ್ರವಾಸೋದ್ಯಮ ನೀತಿಯಲ್ಲೇ ಕರಾವಳಿ ಭಾಗದಲ್ಲಿನ ಎಲ್ಲ ವರ್ಗದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಅವಕಾಶಗಳನ್ನು ಕಲ್ಪಿಸಲಾಗಿದೆ. ಕರಾವಳಿ ಹಾಗೂ ಕಡಲತೀರ ಪ್ರದೇಶಕ್ಕೆ ವಿಶೇಷ ಮಹತ್ವ ನೀಡಲಾಗಿದೆ ಎಂದು ಹೇಳಿದರು.ಕರಾವಳಿ ಅಭಿವೃದ್ಧಿ ಮಂಡಳಿ ರಚನೆ ಮಾಡುತ್ತೇವೆ. ಭೂ ಬ್ಯಾಂಕ್ ಮಾಡುತ್ತೇವೆ. ಕಂಬಳಕ್ಕೆ ತಲಾ 5 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. 320 ಕಿ.ಮೀ. ಉದ್ದದ ಕರಾವಳಿಯಲ್ಲಿ ಪ್ರವಾಸೋದ್ಯಮ ಇಲಾಖೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಹಕ್ಕುಗಳ ವರ್ಗಾಯಿಸಲು ಅನುವು ಮಾಡಿಕೊಡಲಾಗಿದೆ. ಸಾಹಸ, ಪರಿಸರ ಸ್ನೇಹಿ ವಸತಿ, ಸಂಸ್ಕøತಿ ಸೇರಿದಂತೆ ಪ್ರವಾಸಿಗರಿಗೆ ಪೂರೈಸುವ ಸೌಲಭ್ಯಗಳನ್ನು ಸಮಗ್ರ ಕರಾವಳಿ ಪ್ರವಾಸೋದ್ಯಮ ವಲಯಗಳು ಒಳಗೊಂಡಿವೆ. ಕರಾವಳಿಯಲ್ಲಿ ಕನಿಷ್ಟ 10 ಬೃಹತ್ ಪ್ರವಾಸೋದ್ಯಮ ಯೋಜನೆಗಳ ಅಭಿವೃದ್ಧಿಗೆ ಯೋಜನೆ ಮಾಡಲಾಗುತ್ತಿದೆ. ಕರಾವಳಿ ಉತ್ಸವಗಳಿಗೆ ಉತ್ತೇಜನ ನೀಡಲಾಗುತ್ತಿದೆ” ಎಂದರು.

ಈ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ.ಖಾದರ್ ಮಾತನಾಡಿ, “ಕರಾವಳಿಯಲ್ಲಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣ, ಬಂದರುಗಳಿದ್ದು, ಆರೋಗ್ಯ, ಶಿಕ್ಷಣ, ಧಾರ್ಮಿಕ ಪ್ರವಾಸೋದ್ಯಮಕ್ಕೆ ಅವಕಾಶವಿದೆ. ಆದರೆ ಸೌಹಾರ್ದತೆಗೆ ಒತ್ತು ಕೊಡುವ ಕೆಲಸವನ್ನು ಶಾಸಕರು, ನಾವು, ನೀವೆಲ್ಲಾ ಮಾಡಬೇಕು. ಜನರನ್ನು ಪ್ರೀತಿಯಿಂದ ಬರುವಂತೆ ಮಾಡಬೇಕು. ಭಯ ಪಡಿಸುವಂತಾಗಬಾರದು” ಎಂದು ಸಲಹೆ ಮಾಡಿದರು.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿ, ಕರಾವಳಿಯಲ್ಲಿ 7 ಗಂಟೆ ನಂತರ ಚಟುವಟಿಕೆಗಳು ಸ್ಥಗಿತವಾಗುತ್ತವೆ. ಧಾರ್ಮಿಕ ಕಾರ್ಯಕ್ರಮಗಳು ಮಾತ್ರ ನಡೆಯುತ್ತವೆ. 2 ವರ್ಷದಿಂದ ವಿದ್ಯಾರ್ಥಿಗಳ ದಾಖಲಾತಿ ಕಡಿಮೆಯಾಗಿದೆ. ಅತೀ ಹೆಚ್ಚು ಇಂಜಿನಿಯರ್ ಮತ್ತು ಮೆಡಿಕಲ್ ಕಾಲೇಜುಗಳಿವೆ. ಶಿಕ್ಷಣ ಪಡೆದವರು ಮುಂಬೈ, ಬೆಂಗಳೂರು ಕಡೆ ಹೋಗುತ್ತಿದ್ದಾರೆ. ಇದನ್ನು ಸರಿಪಡಿಸುವ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಕೊಡಿ. ಕರಾವಳಿ ಭಾಗದ ಶಾಸಕರ ಜೊತೆ ಪ್ರತ್ಯೇಕ ಸಭೆ ನಡೆಸುವುದಾಗಿ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...