ಬಿಜೆಪಿ-ಆರ್‌ಎಸ್‌ಎಸ್‌ ಯಾವುದೇ ಮಹಿಳೆಯರಿಗೆ ನೇತೃತ್ವ ವಹಿಸುವ ಅವಕಾಶ ನೀಡಿಲ್ಲ: ಕಾಂಗ್ರೆಸ್ ಟೀಕೆ

Date:

ಬಿಜೆಪಿ ಮತ್ತು ಆರ್‌ಎಸ್‌ಎಸ್ ಸ್ಥಾಪನೆಯಾದಾಗಿನಿಂದ ಈವರೆಗೂ ಯಾವುದೇ ಮಹಿಳೆಯರಿಗೆ ನೇತೃತ್ವ ವಹಿಸುವ ಅವಕಾಶವನ್ನು ನೀಡಲಾಗಿಲ್ಲ ಎಂದು ಹೇಳುವ ಮೂಲಕ ಪುರುಷ ಪ್ರಧಾನ ಮನಸ್ಥಿತಿಯ ವಿರುದ್ಧ ಕಾಂಗ್ರೆಸ್ ಬುಧವಾರ ವಾಗ್ದಾಳಿ ನಡೆಸಿದೆ.

ಮಹಿಳೆಯರ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯದ ಬಗ್ಗೆ ಅವರ (ಬಿಜೆಪಿ/ ಆರ್‌ಎಸ್‌ಎಸ್‌) ಪೂರ್ವಭಾವಿ ಮತ್ತು ಸಂಕುಚಿತ ಮನಸ್ಥಿತಿಯೇ ಮಹಿಳೆಯರಿಗೆ ನಾಯಕತ್ವ ನೀಡದಿರಲು ಕಾರಣ ಎಂದು ಕಾಂಗ್ರೆಸ್ ಹೇಳಿದೆ.

ಇದನ್ನು ಓದಿದ್ದೀರಾ? ಕಾಂಗ್ರೆಸ್ ಕಾರ್ಯಕರ್ತರಿಗೆ‌ ಸರ್ಕಾರದ ಅನುಕೂಲ ಮಾಡಿಕೊಡುವ ಹಕ್ಕು ನಮಗಿದೆ: ಡಿ ಕೆ ಶಿವಕುಮಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಹಮದಾಬಾದ್‌ನಲ್ಲಿ ನಡೆದ ಎಐಸಿಸಿ ಅಧಿವೇಶನದಲ್ಲಿ ‘ನ್ಯಾಯ ಮಾರ್ಗ’ ನಿರ್ಣಯವನ್ನು ಕಾಂಗ್ರೆಸ್ ಅಂಗೀಕರಿಸಿದೆ. ಈ ನಿರ್ಣಯದಲ್ಲಿ, ಮಹಿಳಾ ಮೀಸಲಾತಿ ಮಸೂದೆಯನ್ನು ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದೆ. ಆದರೆ ದಲಿತ, ಆದಿವಾಸಿ ಮತ್ತು ಒಬಿಸಿ ಮಹಿಳೆಯರಿಗೆ ಕೋಟಾದೊಂದಿಗೆ ಅದನ್ನು ತಕ್ಷಣ ಜಾರಿಗೆ ತರಬೇಕೆಂದು ಕಾಂಗ್ರೆಸ್ ಬಲವಾಗಿ ಒತ್ತಾಯಿಸಿದರೂ ಬಿಜೆಪಿ ಸರ್ಕಾರ ಅದನ್ನು ಜಾರಿಗೆ ತಂದಿಲ್ಲ ಎಂದು ಉಲ್ಲೇಖಿಸಲಾಗಿದೆ.

“ಬಿಜೆಪಿ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಮತ್ತು ಅವರ ನಾಯಕರು ಮಹಿಳೆಯರ ಉಡುಪು, ನಡವಳಿಕೆ, ಪಾತ್ರ, ಶಿಕ್ಷಣ, ಆಹಾರ ಪದ್ಧತಿ ಮತ್ತು ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯಗಳ ಬಗ್ಗೆ ಅವಮಾನಕರ, ಅಸಭ್ಯ ಮತ್ತು ಕೆಟ್ಟದಾದ ಹೇಳಿಕೆಗಳನ್ನು ನೀಡುವ ನುರಿತ ಅಪರಾಧಿಗಳು” ಎಂದು ನಿರ್ಣಯ ಹೇಳಿದೆ.

ಇದನ್ನು ಓದಿದ್ದೀರಾ? ಪಾಪ್‌ಕಾರ್ನ್ ಬಳಿಕ ಈಗ ಡೋನಟ್‌ಗೆ ‘ಜಿಎಸ್‌ಟಿಗರ’ ಕಾಟ ಶುರುವಾಗಿದೆ: ಕಾಂಗ್ರೆಸ್

“ಈ ಪೂರ್ವಭಾವಿ ಮತ್ತು ಸಂಕುಚಿತ ಮನಸ್ಥಿತಿಯಿಂದಾಗಿಯೇ ಬಿಜೆಪಿ ಸ್ಥಾಪನೆಯಾದ ಕಳೆದ 45 ವರ್ಷಗಳಲ್ಲಿ ಒಬ್ಬ ಮಹಿಳೆಯೂ ಅದರ ರಾಷ್ಟ್ರೀಯ ಅಧ್ಯಕ್ಷೆಯಾಗಿಲ್ಲ ಅಥವಾ ಯಾವುದೇ ಮಹಿಳೆಗೆ ಆರ್‌ಎಸ್‌ಎಸ್ ಮುಖ್ಯಸ್ಥೆಯಾಗಿ ಅಥವಾ ಅದರ ಪದಾಧಿಕಾರಿಯಾಗಿ ಪ್ರವೇಶಕ್ಕೆ ಅವಕಾಶ ನೀಡಲಾಗಿಲ್ಲ” ಎಂದು ದೂರಿದೆ.

ಇನ್ನು ಕಾಂಗ್ರೆಸ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ ಆನಿ ಬೆಸೆಂಟ್, ಸರೋಜಿನಿ ನಾಯ್ಡು, ಸೇನ್‌ಗುಪ್ತಾ, ಇಂದಿರಾ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಕಾಂಗ್ರೆಸ್ ಉಲ್ಲೇಖಿಸಿದೆ. ಮಹಿಳೆಯರಿಗೆ ನೇತೃತ್ವ ವಹಿಸಿರುವುದು ಮಹಿಳಾ ಸಬಲೀಕರಣಕ್ಕೆ ಕಾಂಗ್ರೆಸ್‌ನ ಶಾಶ್ವತ ಬದ್ಧತೆಗೆ ಸಾಕ್ಷಿಯಾಗಿದೆ ಎಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...