ಮಾನನಷ್ಟ ಪ್ರಕರಣ | ಶಾಸಕ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ

Date:

ದಿನೇಶ್ ಗುಂಡೂರಾವ್ ಕುಟುಂಬದ ಮೇಲೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿಯಾಗಿದೆ.

ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಕೋರ್ಟಿನ ಮ್ಯಾಜಿಸ್ಟ್ರೇಟ್ ಕೆ ಎನ್ ಶಿವಕುಮಾರ್ ಈ ಆದೇಶ ಜಾರಿ ಮಾಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡುತ್ತಿದ್ದ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಅವರ ಪತ್ನಿಯ ಟಬು ರಾವ್ ಅವರನ್ನು ಉಲ್ಲೇಖಿಸಿ, “ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ” ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆಯ ವಿರುದ್ಧ ಟಬು ರಾವ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟಿನ ಮೆಟ್ಟಿಲೇರಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ಗೆ ಹೈಕೋರ್ಟ್ ಪೀಠ ತರಾಟೆಗೆ ತೆಗೆದುಕೊಂಡಿತ್ತು. ಅಲ್ಲದೇ, ಪ್ರಕರಣ ರದ್ದುಪಡಿಸಲು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಾಲಯವು, ಬಂಧನ ವಾರೆಂಟ್ ಜಾರಿ ಮಾಡಿದ್ದಲ್ಲದೇ, ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.

ಮಾನನಷ್ಟ ಪ್ರಕರಣಕ್ಕೆ ತಡೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ್ದ ಹೈಕೋರ್ಟಿನ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದ್ದರಲ್ಲದೇ, ಶಾಸಕರ ಕೀಳು ಅಭಿರುಚಿಯ ಹೇಳಿಕೆಯನ್ನು ಪ್ರಶ್ನಿಸಿದ್ದರು. “ನೀವು ಹೇಳಿಕೆ ನೀಡಿದ್ದು ಹೌದೋ ಅಲ್ಲವೋ” ಎಂದು ಪ್ರಶ್ನಿಸಿದರು. ಹೇಳಿಕೆ ನೀಡಿದ್ದನ್ನು ಯತ್ನಾಳ್ ಪರ ವಕೀಲ ಒಪ್ಪಿಕೊಂಡಿದ್ದರು.

ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿಯವರು, “ಈ ರೀತಿಯ ಪದ ಬಳಕೆ ಯಾವ ಅರ್ಥ ನೀಡುತ್ತದೆ. ವೈಯಕ್ತಿಕ ತೇಜೋವಧೆಗೆ ನೀವು ಏಕೆ ಇಳಿದಿದ್ದೀರಿ? ಇತ್ತೀಚೆಗೆ ಈ ರೀತಿಯ ಹೇಳಿಕೆಗಳು ಮಾಮೂಲಾಗಿವೆ. ಒಂದು ಸಮುದಾಯದ ವಿರುದ್ಧ ಈ ರೀತಿ ಪದಬಳಕೆ ಸರಿಯಲ್ಲ. ಒಬ್ಬರ ಪತ್ನಿ ಮುಸ್ಲಿಂ ಪತ್ನಿ ಆಂದ ತಕ್ಷಣ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ” ಎಂದು ಚಾಟಿ ಬೀಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...