ಕೊಪ್ಪಳ | ನಾಮಪತ್ರಕ್ಕೆ ಸಹಿ ಹಾಕದ ಪಕ್ಷೇತರ ಅಭ್ಯರ್ಥಿ: ಅರ್ಜಿ ತಿರಸ್ಕಾರ

Date:

  • ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ
  • ಹೈವೋಲ್ಟೇಜ್‌ ಕ್ಷೇತ್ರವಾದ ಗಂಗಾವತಿ

ವಿಧಾನಸಭಾ ಚುನಾವಣೆ ನಿಂತು ಶಾಸಕರಾಗಬೇಕೆಂದು ಆಸೆ ಇಟ್ಟುಕೊಂಡಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಸಹಿಹಾಕದೇ ನಾಮಪತ್ರ ಸಲ್ಲಿಸಿರುವುದರಿಂದ ನಾಮಮತ್ರವು ತಿರಸ್ಕೃತಗೊಂಡಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ ಕ್ಷೇತ್ರದ ದೇವಪ್ಪ ಎಂಬುವವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ನಿನ್ನೆ ನಡೆದ ನಾಮಪತ್ರ ಪರಿಶೀಲನೆ ವೇಳೆಯಲ್ಲಿ ದೇವಪ್ಪ ಅವರು ನಾಮಪತ್ರಕ್ಕೆ ಸಹಿ ಹಾಕದೇ ಇರುವುದು ಕಂಡುಬಂದಿದ್ದು, ಚುನಾವಣಾ ಅಧಿಕಾರಿಗಳು ನಾಮಪತ್ರವನ್ನು ತಿರಸ್ಕರಿಸಿದ್ದಾರೆ.

ಬೆಂಗಳೂರು ಮೂಲದ ಗೀತಾ ಎಂಬ ಮತ್ತೋರ್ವ ಪಕ್ಷೇತರ ಅಭ್ಯರ್ಥಿ ಕೂಡ ತಾನಿರುವ ವಿಳಾಸದ ದೃಢೀಕರಣ ಪತ್ರ ಸಲ್ಲಿಸದ ಕಾರಣ ಅವರ ನಾಮಪತ್ರವನ್ನು ಕೂಡ ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? : ಶಿವಮೊಗ್ಗ | ಚೂರಿ ಇರಿದು ಯುವಕನ ಹತ್ಯೆ; ದುಷ್ಕರ್ಮಿಗಳ ಗುಂಪು ಪರಾರಿ

ಕೊಪ್ಪಳ ಜಿಲ್ಲೆ ಗಂಗಾವತಿಯಲ್ಲಿ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಸ್ಪರ್ಧಿಸುತ್ತಿರುವುದರಿಂದ ಹೈವೋಲ್ಟೇಜ್‌ ಕ್ಷೇತ್ರವಾಗಿದೆ. ಇಲ್ಲಿ ಒಟ್ಟು 33 ನಾಮಪತ್ರಗಳು ಸಲ್ಲಿಕೆಯಾಗಿದ್ದವು. ಇಬ್ಬರು ಪಕ್ಷೇತರ ಅಭ್ಯರ್ಥಿಗಳ ನಾಮಪತ್ರ ತಿರಸ್ಕಾರದಿಂದಾಗಿ 31 ನಾಮಪತ್ರ ಮಾತ್ರ ಉಳಿದುಕೊಂಡಿವೆ.

ಇದರಲ್ಲಿ ಒಬ್ಬರು ಮಹಿಳಾ ಅಭ್ಯರ್ಥಿ ಕಣದಲ್ಲಿ ಉಳಿದಿದ್ದಾರೆ. 8 ಜನ ಪಕ್ಷೇತರರ ಹಾಗೂ ಉಳಿದ ಅಭ್ಯರ್ಥಿಗಳು ನಾನಾ ಪಕ್ಷಗಳಿಂದ ಸ್ಪರ್ಧಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...