ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿ ಪ್ರವಾಹ ಉಂಟಾಗಲು ಭೂತಾನ್‌ನಿಂದ ಹರಿದು ಬರುವ ನೀರು ಕಾರಣವಾಗಿದೆ. ಆದ್ದರಿಂದ ಭೂತಾನ್ ಸರ್ಕಾರ ಪರಿಹಾರವನ್ನು ನೀಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ.
ಪ್ರಾಕೃತಿಕ ವಿಕೋಪಕ್ಕೆ ತುತ್ತಾದ ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಜಲಪೈಗುರಿ ಜಿಲ್ಲೆಯ ನಾಗರಕಟದಲ್ಲಿ ಭೂತಾನ್‌ನ ವಿವಿಧ ನದಿಗಳಿಂದ ನೀರು ಹರಿದು ಬಂದು ಪ್ರವಾಹ ಸಂಭವಿಸಿದೆ, ಈ ನಷ್ಟ ಸಂಭವಿಸಿದೆ ಎಂದು ಹೇಳಿದ್ದಾರೆ.
ಇದನ್ನು ಓದಿದ್ದೀರಾ? ‘ಹುಡುಗಿಯರು ರಾತ್ರಿ ಹೊರ ಹೋಗಬಾರದು’ – ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ
“ಭೂತಾನ್‌ನಿಂದ ಬರುತ್ತಿರುವ ನೀರಿನಿಂದ ನಮಗೆ ನಷ್ಟವಾಗಿದೆ. ಅವರು ನಮಗೆ ಪರಿಹಾರ ನೀಡಬೇಕು ಎಂದು ನಾವು ಬಯಸುತ್ತೇವೆ” ಎಂದು ಬ್ಯಾನರ್ಜಿ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಒಂದು ಸಣ್ಣ ಭಾಷಣದಲ್ಲಿ ಹೇಳಿದ್ದಾರೆ.
ಇನ್ನು ಈ ಸಂದರ್ಭದಲ್ಲೇ, “ಎಲ್ಲಾ ಪರಿಹಾರ ಮತ್ತು ಪುನರ್ವಸತಿ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಬೇಕಾಗಿದೆ. ಕೇಂದ್ರ ಸರ್ಕಾರವು ಅದಕ್ಕೆ ಹಣ ನೀಡುವುದಿಲ್ಲ” ಎಂದು ಆರೋಪಿಸಿದ್ದಾರೆ.
ಹಾಗೆಯೇ ಇಂಡೋ-ಭೂತಾನ್ ನದಿ ಆಯೋಗವನ್ನು ರಚಿಸಬೇಕು, ಅದರಲ್ಲಿ ಪಶ್ಚಿಮ ಬಂಗಾಳವನ್ನು ಸದಸ್ಯರನ್ನಾಗಿ ಮಾಡಬೇಕು ಎಂದು ನಮ್ಮ ಸರ್ಕಾರ ನಿರಂತರವಾಗಿ ಒತ್ತಾಯಿಸುತ್ತಾ ಬರುತ್ತಿದೆ ಎಂದಿದ್ದಾರೆ.
ಇನ್ನು ಈ ಹಿಂದೆ ಮಮತಾ ಬ್ಯಾನರ್ಜಿ, “ಹೆಣ್ಣು ಮಕ್ಕಳು ರಾತ್ರಿ ಹೊತ್ತು ಹೊರಗೆ ಹೋಗಬಾರದು. ತಮ್ಮ ಸುರಕ್ಷತೆಯನ್ನು ತಾವೇ ಮಾಡಿಕೊಳ್ಳಬೇಕು” ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದಾರೆ. ವಿಪಕ್ಷಗಳು ಮಮತಾ ಅವರ ಹೇಳಿಕೆಯನ್ನು ಮಹಿಳಾ ವಿರೋಧಿ ಎಂದು ಕರೆದಿದೆ.





