ಹಿಂದಿಯಿಂದ ಉತ್ತರ ಭಾರತದ 25 ಭಾಷೆಗಳು ನಾಶ: ಎಂ ಕೆ ಸ್ಟಾಲಿನ್

Date:

“ಹಿಂದಿ ಭಾರತದ ಎಷ್ಟು ಭಾಷೆಗಳನ್ನು ನುಂಗಿ ಹಾಕಿದೆ ಎಂದು ತಿಳಿದಿದೆಯೇ? ಉತ್ತರ ಭಾರತದ ಸುಮಾರು 25 ಭಾಷೆಗಳನ್ನು ನಾಶ ಮಾಡಿದೆ” ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರು ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ತ್ರಿಭಾಷಾ ನೀತಿಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಆದರೆ ಕೇಂದ್ರ ಸರ್ಕಾರದ ಈ ಕ್ರಮವನ್ನು ತಮಿಳುನಾಡು ಸರ್ಕಾರ ತೀವ್ರವಾಗಿ ವಿರೋಧಿಸಿದೆ. ಅದರಲ್ಲೂ ತಮಿಳುನಾಡಿನ ನಿಧಿ ಬಿಡುಗಡೆ ಮಾಡಬೇಕಾದರೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡಬೇಕು ಎಂಬ ಕೇಂದ್ರ ಶಿಕ್ಷಣ ಸಚಿವ ಧರ್ಮೇದ್ರ ಪ್ರಧಾನ್ ಅವರ ಬೆದರಿಕೆಯು ತಮಿಳುನಾಡನ್ನು ಇನ್ನಷ್ಟು ಕೆಣಕಿದೆ.

ಇದನ್ನು ಓದಿದ್ದೀರಾ? ತ್ರಿಭಾಷಾ ಸೂತ್ರದ ಹೆಸರಿನಲ್ಲಿ‌ ಹಿಂದಿ‌ ಹೇರಿಕೆ‌ ಮಾಡುತ್ತಿದೆ ಕೇಂದ್ರ ಸರ್ಕಾರ? three-language formula | BJP

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದಿನಿಂದಲೂ ಹಿಂದಿ ಹೇರಿಕೆಯನ್ನು ನಿರಂತರವಾಗಿ ವಿರೋಧಿಸುತ್ತಾ ಬಂದಿರುವ ತಮಿಳುನಾಡು ಇದೀಗ ಹಿಂದಿ ಹೇರಿಕೆ ವಿರುದ್ಧ ಕೇಂದ್ರ ಸರ್ಕಾರದ ಜೊತೆ ವಾಕ್ಸಮರ ನಡೆಸುತ್ತಿದೆ. ಹಿಂದಿ ಅದೆಷ್ಟೋ ಸ್ಥಳೀಯ ಭಾಷೆಗಳನ್ನು ನುಂಗಿ ಹಾಕಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸ್ಟಾಲಿನ್, “ಇತರೆ ರಾಜ್ಯಗಳ ನನ್ನ ಪ್ರೀತಿಯ ಸಹೋದರರೇ ಮತ್ತು ಸಹೋದರಿಯರೇ, ಹಿಂದಿ ಭಾರತದ ಎಷ್ಟು ಭಾಷೆಗಳನ್ನು ನುಂಗಿ ಹಾಕಿದೆ ಎಂದು ನಿಮಗೆ ತಿಳಿದಿದೆಯೇ” ಎಂದು ಪ್ರಶ್ನಿಸಿದ್ದಾರೆ.

“ಭೋಜ್‌ಪುರಿ, ಮೈತಿಲಿ, ಅವಧಿ, ಬ್ರಜ್, ಬಂಡೇಲಿ, ಗರ್ವಾಲಿ, ಕುಮೌನಿ, ಮಗಹಿ, ಮರ್ವರಿ, ಮಾಲ್ವಿ, ಛತ್ತೀಸ್‌ಗರ್ಹಿ, ಸಂಥಾಲಿ, ಆಂಗಿಕ, ಹೊ, ಖಾರಿಆ, ಖೋರ್ಥಾ, ಕುರ್ಮಾಲಿ, ಕುರುಖ್, ಮುಂಡಾರಿ ಮತ್ತು ಇನ್ನೂ ಹಲವು ಭಾಷೆಗಳು ಉಳಿಯಲು ಒದ್ದಾಡುತ್ತಿದೆ” ಎಂದು ಸ್ಟಾಲಿನ್ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಿಂದಿ ಹೇರಿಕೆ ವಿವಾದ | ಶಾಲೆಗಳಲ್ಲಿ ತೆಲುಗು ಬೋಧನೆ, ಕಲಿಕೆ ಕಡ್ಡಾಯಗೊಳಿಸಿದ ತೆಲಂಗಾಣ

“ಹಿಂದಿಯ ಗುರುತಿಗಾಗಿ ನೀಡುವ ಉತ್ತೇಜನವು ಇತರೆ ಪ್ರಾಚೀನ ಮಾತೃ ಭಾಷೆಗಳನ್ನು ಕೊಂದು ಹಾಕಿದೆ. ಉತ್ತರ ಪ್ರದೇಶ ಮತ್ತು ಬಿಹಾರ ಬರೀ ಹಿಂದಿ ನೆಲೆಯಾಗಿರಲಿಲ್ಲ. ಆ ರಾಜ್ಯದ ನಿಜವಾದ ಭಾಷೆಯು ಅಳಿದುಹೋಗಿದೆ” ಎಂದಿದ್ದಾರೆ.

“ಮೈಥಿಲಿ ಭಾಷೆಯು ಸದ್ಯ ಹಿಂದಿಯನ್ನು ಮಾತನಾಡುವ ಬಿಹಾರದ ಜನರ ಸ್ಥಳೀಯ ಭಾಷೆ ಆಗಿತ್ತು. ಹಿಂದಿ ಭಾರತದ ಅತೀ ದೊಡ್ಡ ರಾಜ್ಯವಾಗಿರುವ ಉತ್ತರ ಪ್ರದೇಶದ ಮಾತೃ ಭಾಷೆ ಅಂದುಕೊಳ್ಳೋಣ. ಆದರೆ ಅದು ಕೂಡಾ ನಿಜವಲ್ಲ. ಆದರೆ ಹಿಂದಿ ಸ್ಥಳೀಯ ಭಾಷೆಯನ್ನು ಧಮಿನಿಸಿ ಈಗ ಉತ್ತರ ಪ್ರದೇಶ ಭಾಷೆ ಎಂಬಂತಾಗಿದೆ” ಎಂದು ಸ್ಟಾಲಿನ್ ಹೇಳಿದ್ದಾರೆ.

“ಕಳೆದ ಶತಕದಲ್ಲಿ ಹಿಂದಿ ಮತ್ತು ಸಂಸ್ಕೃತದ ಪ್ರಾಬಲ್ಯದಿಂದ ಉತ್ತರ ಭಾರತದ ಸುಮಾರು 25ಕ್ಕೂ ಅಧಿಕ ಭಾಷೆಗಳು ನಾಶವಾಗಿದೆ” ಎಂದು ಕೂಡಾ ಸ್ಟಾಲಿನ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...