ಉತ್ತರ ಭಾರತೀಯರಿಗೆ ಹಿಂದಿ ಮಾತ್ರ ಬರುತ್ತೆ, ಪಾನಿಪುರಿ ಮಾರಲು ಇಲ್ಲಿಗೆ ಬರ್ತಾರೆ: ತಮಿಳುನಾಡು ಸಚಿವ

Date:

ಹಿಂದಿ ಹೇರಿಕೆ ವಿರುದ್ಧ ನಿರಂತರವಾಗಿ ಆಕ್ರೋಶ ವ್ಯಕ್ತಪಡಿಸುತ್ತಿರುವ ತಮಿಳುನಾಡು ಕೃಷಿ ಸಚಿವ ಎಂಆರ್‌ಕೆ ಪನ್ನೀರ್‌ಸೆಲ್ವಂ ಉತ್ತರ ಭಾರತದಿಂದ ವಲಸೆ ಬಂದ ಕಾರ್ಮಿಕರ ಬಗ್ಗೆ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. “ಉತ್ತರ ಭಾರತೀಯರಿಗೆ ಹಿಂದಿ ಮಾತ್ರ ಬರುತ್ತದೆ. ಪಾನಿಪುರಿ ಮಾರಲು ಇಲ್ಲಿಗೆ ಬರ್ತಾರೆ” ಎಂದು ಹೇಳಿದ್ದಾರೆ.

“ಹಿಂದಿ ಮಾತ್ರ ಕಲಿತಿರುವ ಉತ್ತರದವರು ದಕ್ಷಿಣ ರಾಜ್ಯದಲ್ಲಿ ಸೀಮಿತ ಉದ್ಯೋಗಾವಕಾಶಗಳನ್ನು ಹೊಂದಿದ್ದಾರೆ. ಸಣ್ಣಪುಟ್ಟ ಕೆಲಸಗಳನ್ನು ಮಾಡುತ್ತಾರೆ. ಆದರೆ ತಮಿಳು ಮತ್ತು ಇಂಗ್ಲಿಷ್ ಅನ್ನು ಕೇಂದ್ರೀಕರಿಸುವ ರಾಜ್ಯದ ಎರಡು-ಭಾಷಾ ನೀತಿಯಿಂದ ತಮಿಳರು ಪ್ರಯೋಜನ ಪಡೆಯುತ್ತಾರೆ. ಯುಎಸ್ ಅಥವಾ ಲಂಡನ್‌ನಲ್ಲಿ ಉದ್ಯೋಗ ಪಡೆಯುತ್ತಾರೆ” ಎಂದರು.

ಇದನ್ನು ಓದಿದ್ದೀರಾ? ಉತ್ತರ ಭಾರತ-ದಕ್ಷಿಣ ಭಾರತ: ರಾಜಕೀಯ ಮತ್ತು ಆರ್ಥಿಕ ತಲ್ಲಣಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಉತ್ತರದಿಂದ ಬಂದವರು ತಮಿಳುನಾಡಿಗೆ ಮೇಜುಗಳನ್ನು ಸ್ವಚ್ಛಗೊಳಿಸಲು ಬರುತ್ತಿದ್ದಾರೆ. ಅವರು ಹಿಂದಿಯನ್ನು ಮಾತ್ರ ಕಲಿತಿರುವುದರಿಂದ ಅವರು ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡಲು ಇಲ್ಲಿಗೆ ಬರುತ್ತಿದ್ದಾರೆ. ಆದರೆ ನಮ್ಮ ಮಕ್ಕಳು ವಿದೇಶಕ್ಕೆ ಹೋಗಿದ್ದಾರೆ. ನಾವು ಎರಡು-ಭಾಷಾ ನೀತಿಯನ್ನು ಅನುಸರಿಸುತ್ತೇವೆ. ಇಂಗ್ಲಿಷ್ ಅನ್ನು ಚೆನ್ನಾಗಿ ಕಲಿಯುತ್ತೇವೆ. ಆದ್ದರಿಂದ ನಮ್ಮ ಮಕ್ಕಳು ವಿದೇಶಕ್ಕೆ ಹೋಗುತ್ತಿದ್ದಾರೆ. ಯುಎಸ್ಎ, ಲಂಡನ್‌ನಲ್ಲಿ ಕೋಟಿಗಟ್ಟಲೆ ಗಳಿಸುವ ಅವಕಾಶಗಳನ್ನು ಪಡೆಯುತ್ತಿದ್ದಾರೆ” ಎಂದು ಹೇಳಿದರು.

ಇನ್ನು ಸಚಿವರ ಹೇಳಿಕೆ ಬೆನ್ನಲ್ಲೇ ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷವು ಶೀಘ್ರವೇ ಪ್ರತಿಕ್ರಿಯಿಸಿದೆ. “ಪ್ರತಿಯೊಂದು ಕಾನೂನು ಕೆಲಸದಲ್ಲೂ ಘನತೆ ಇರುತ್ತದೆ. ನಾವು ಅದನ್ನು ವಿರೋಧಿಸುವುದಿಲ್ಲ. ಹಿಂದಿ ಮಾತನಾಡುವವರು ಅಥವಾ ಅವರು ಮಾಡುವ ಕೆಲಸದ ಬಗ್ಗೆ ತಮಿಳುನಾಡು ವಿರೋಧ ಹೊಂದಿಲ್ಲ” ಎಂದು ವಕ್ತಾರ ಡಾ. ಸೈಯದ್ ಹಫಿಸುಲ್ಲಾ ಒತ್ತಿ ಹೇಳಿದ್ದಾರೆ. ಹಾಗೆಯೇ ಕೇಂದ್ರದ ತ್ರಿಭಾಷಾ ನೀತಿಯನ್ನು ಟೀಕಿಸುತ್ತಾ ಸಚಿವರು ಹೇಳಿಕೆ ನೀಡಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

“ದ್ವಿಭಾಷಾ ನೀತಿಯು ತಮಿಳುನಾಡು ಮತ್ತು ಅದರ ಜನರಿಗೆ ಸಹಾಯ ಮಾಡಿದೆ. ಇಂಗ್ಲಿಷ್ ಜನರಿಗೆ ಅಭಿವೃದ್ಧಿ ಮತ್ತು ಜಾಗತಿಕ ಅವಕಾಶಗಳನ್ನು ನೀಡಿದೆ. ಇಂಗ್ಲಿಷ್‌ಗೆ ಈ ಆದ್ಯತೆಯಿಲ್ಲದೆ, ಹಿಂದಿ ಮಾತನಾಡುವ ರಾಜ್ಯಗಳ ಜನರು ಶಿಕ್ಷಣದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಾಗಲ್ಲ” ಎಂದೂ ಅಭಿಪ್ರಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...