ಸಂವಿಧಾನ ಬದಲಿಸುವುದಿಲ್ಲ, ಪ್ರಯತ್ನ ನಡೆದರೆ ರಾಜೀನಾಮೆ ಕೊಡುತ್ತೇನೆ: ಕೇಂದ್ರ ಸಚಿವ

Date:

ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಸಂವಿಧಾನವನ್ನು ಬದಲಾಯಿಸಲು ಯೋಜಿಸುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಕೇಂದ್ರ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠವಳೆ ತಳ್ಳಿಹಾಕಿದ್ದಾರೆ. ಸಂವಿಧಾನ ಬದಲಿಸುವು ಯಾವುದೇ ಪ್ರಯತ್ನವಿದ್ದಲ್ಲಿ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದಾರೆ.

ಮಹಾರಾಷ್ಟ್ರದ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ಮುಖ್ಯಸ್ಥರಾಗಿರುವ ಅಠವಾಳೆ ಅವರು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಅವರು, ಮಹಾರಾಷ್ಟ್ರದ ಭಂಡಾರಾ-ಗೊಂಡಿಯಾ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸುನಿಲ್ ಮೆಂಧೆ ಪರ ಪ್ರಚಾರ ನಡೆಸಿದ್ದಾರೆ.

ಪ್ರಚಾರದಲ್ಲಿ ಮಾತನಾಡಿದ ಅವರು, “ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಈ ಚುನಾವಣೆಯಲ್ಲಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದರೆ, ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಆರೋಪವನ್ನು ಕಾಂಗ್ರೆಸ್‌ ಮಾಡುತ್ತಿದೆ. ಆ ಮೂಲಕ ಜನರನ್ನು ದಾರಿತಪ್ಪಿಸಲು ಪ್ರಯತ್ನಿಸುತ್ತಿದೆ. ಅವರ ಆರೋಪ ಸಂಪೂರ್ಣವಾಗಿ ಆಧಾರರಹಿತವಾಗಿದೆ. ಒಂದು ವೇಳೆ ಸರ್ಕಾರ ಅಂತಹ ಪ್ರಯತ್ನ ನಡೆಸಿದರೆ, ನಾನು ಸಂಪುಟಕ್ಕೆ ರಾಜೀನಾಮೆ ನೀಡುತ್ತೇನೆ. ಅಲ್ಲದೆ, ಬಿಜೆಪಿಗೆ ನೀಡುತ್ತಿರುವ ಬೆಂಬಲವನ್ನು ಹಿಂಪಡೆಯುತ್ತೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಇತ್ತೀಚೆಗೆ ಸಂವಿಧಾನವನ್ನು ತಿದ್ದುಪಡಿ ಮಾಡಲು ಸಂಸತ್ತಿನ ಉಭಯ ಸದನಗಳಲ್ಲಿ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ. ಅದಕ್ಕಾಗಿ, ಲೋಕಸಭೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು ಎಂದಿದ್ದರು. ಅವರ ಹೇಳಿಕೆಯ ಬಳಿಕ, ವಿಪಕ್ಷಗಳು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿದ್ದ ಬಿಜೆಪಿ, ‘ಆ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ’ ಎಂದಷ್ಟೇ ಹೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...