ಕೇಂದ್ರ ಸರಕಾರಕ್ಕೆ ಕನಿಷ್ಠ ಸೌಜನ್ಯವೂ ಇಲ್ಲವಾಗಿದೆ: ಮಧು ಬಂಗಾರಪ್ಪ ಕಿಡಿ

Date:

  • ಬರಗಾಲ ಆವರಿಸಿದ್ದು, ಸ್ಪಂದಿಸಬೇಕು ಎಂಬ ಉದ್ದೇಶವೇ ಕೇಂದ್ರದಿಂದ ಕಾಣುತ್ತಿಲ್ಲ
  • ಕೇಂದ್ರದಿಂದ ಹಣ ತರುವ ದಮ್ಮು ತಾಕತ್ತು ಈ ಬಿಜೆಪಿ ನಾಯಕರಿಗೆ ಇದೆಯಾ?

ಕೇಂದ್ರ ಸರಕಾರಕ್ಕೆ ಕನಿಷ್ಠ ಸೌಜನ್ಯವೂ ಇಲ್ಲವಾಗಿದೆ. ರಾಜ್ಯದಲ್ಲಿ ಬರಗಾಲ ಆವರಿಸಿದೆ. ರಾಜ್ಯಕ್ಕೆ ಸ್ಪಂದಿಸಬೇಕು ಎಂಬ ಉದ್ದೇಶವೇ ಕೇಂದ್ರದಿಂದ ಕಾಣುತ್ತಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಕಿಡಿಕಾರಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಕೇಂದ್ರ ಸರಕಾರದಿಂದ ಹಣ ತರುವ ದಮ್ಮು ತಾಕತ್ತು ಈ ಬಿಜೆಪಿ ನಾಯಕರಿಗೆ ಇದೆಯಾ? ಬರಗಾಲ ನಿರ್ವಹಣೆ ಮಾಡುವುದಕ್ಕೆ ಸರಕಾರ ಕ್ರಮ ವಹಿಸಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ” ಎಂದರು.

“ಒಂದು ತಿಂಗಳ ನಂತರ ತೊಂದರೆ ಬರಬಹುದು. ಬಹಳ ಆಹಾಕಾರ ಆಗೋದು ನೀರಿಗೆ. ಮೇವಿಗೆ ಯಾವುದೇ ತೊಂದರೆ ಇಲ್ಲ. ಸೊರಬ ಪಟ್ಟಣಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಆಗುತ್ತಿದೆ. ಜಿಲ್ಲೆಯ 238 ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆ ಆಗಬಹುದು ಎಂದು ಗುರುತಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲೆನಾಡಿನಲ್ಲಿ ‌ಕಾಡಾನೆ ದಾಳಿ ವಿಚಾರವಾಗಿ ಪ್ರತಿಕ್ರಿಯಿಸಿ, “ಅವುಗಳ ಜಾಗಕ್ಕೆ ನಾವು ಬಂದು ಬಿಟ್ಟಿದ್ದೀವಿ. ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಆನೆ ಬರದಂತೆ ಕ್ರಮ ವಹಿಸುವಂತೆ ಸೂಚಿಸಿದ್ದೇನೆ. ಜಾತಿ ಜನಗಣತಿ ಆಗಬೇಕು ಎಂಬುದು ನಮ್ಮ ‌ಪಕ್ಷದ ನಿಲುವು. ಜಾತಿ ಜನಗಣತಿ ಆದಷ್ಟು ಬೇಗ ಬಿಡುಗಡೆ ಆಗಬೇಕು” ಎಂದು ತಿಳಿಸಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಉರಿಯುತ್ತಿರುವ ಬಿಜೆಪಿಯಲ್ಲಿ ಗಳ ಇರಿಯುತ್ತಿರುವ ನಾಯಕರು

“ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ. ರೈತರಿಗೆ ನೀಡುವ ವಿದ್ಯುತ್ ಪೂರೈಕೆ ಸಮಯದಲ್ಲಿ ವ್ಯತ್ಯಾಸ ಆಗಬಹುದು. ಖಜಾನೆಯಲ್ಲಿ ದುಡ್ಡಿಲ್ಲ, ರಾಜ್ಯದಲ್ಲಿ ವಿದ್ಯುತ್ ಇಲ್ಲ ಅಂತಾ ಬಿಜೆಪಿಯವರು ಅಪಪ್ರಚಾರ ಮಾಡಿದರು. ಅಂತಹ ಸಮಸ್ಯೆ ‌ಇಲ್ಲ. ಖಜಾನೆಯಲ್ಲಿ ದುಡ್ಡಿದೆ. ವಿದ್ಯುತ್ ಸಹ ಇದೆ” ಎಂದು ಸ್ಪಷ್ಟಪಡಿಸಿದರು.

“ಬಿಜೆಪಿಯವರು ಬರಿ ಸರಕಾರ ಬೀಳಿಸುವ ಯೋಚನೆಯಲ್ಲೇ ಇದ್ದಾರೆ. ಅವರಿಗೆ 6-7 ತಿಂಗಳು ಆದರೂ ಅವರ ಯೋಗ್ಯತೆಗೆ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲು ಆಗಿರಲಿಲ್ಲ. ಪಂಚ ರಾಜ್ಯ ಚುನಾವಣೆ ಫಲಿತಾಂಶ ಬರಲಿ ಅಡ್ರೆಸ್ ಇಲ್ಲದಾಗೆ ಹೋಗುತ್ತಾರೆ. ಅವರ ಯೋಗ್ಯತೆಗೆ ರಾಜ್ಯದಲ್ಲಿ ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಆಗಲಿಲ್ಲ” ಎಂದು ಲೇವಡಿ ಮಾಡಿದರು.

ಸರಕಾರ ತಾನಾಗಿಯೇ ಬಿದ್ದು ಹೋಗುತ್ತದೆ ಎಂಬ ವಿಪಕ್ಷ ನಾಯಕ ಆರ್ ಅಶೋಕ ಹೇಳಿಕೆಗೆ ಪ್ರತಿಕ್ರಿಯಿಸಿ, “ಸರಕಾರ ಬೀಳಿಸೋದೆ ಅವರ ಕೆಲಸನಾ? ಅಶೋಕ್ ಅವರು ಡಿಸಿಎಂ ಆಗಿದ್ದವರು. ಅವರಿಗೂ ಸರಕಾರ ನಡೆಸಿ ಅನುಭವ ಇದೆ. ಆಡಳಿತ ಪಕ್ಷಕ್ಕೆ ಸಲಹೆ ಸಹಕಾರ ಕೊಡಬೇಕು. ಅದು ಬಿಟ್ಟು ಸರಕಾರ ಬೀಳಿಸೋದೆ ಅವರ ಕೆಲಸವಲ್ಲ. ಮನಸ್ಸಿಗೆ ಬಂದಾಗೆ ಮಾತನಾಡುವುದು ಸರಿಯಲ್ಲ” ಎಂದರು.

“ರಾಗಿಗುಡ್ಡ ವಿಚಾರದಲ್ಲಿ ಬಿಜೆಪಿಯವರು ಶಾಂತಿ ಕದಡುವ ಪ್ರಯತ್ನ ಮಾಡಿದ್ದರು. ಅದು ಸಾಧ್ಯವಾಗಲಿಲ್ಲ. ಶಿವಮೊಗ್ಗದ ಜನರು ಅವರ ಮುಖಕ್ಕೆ ಹೊಡೆದ್ರು. ನಮ್ಮ ಸರಕಾರ ಬಂದ ಮೇಲೆ ರಾಜ್ಯದ ಎಲ್ಲ ಕಡೆ ಶಾಂತಿ ನೆಲೆಸಿದೆ” ಎಂದರು.

“ಶಾಲೆಗಳ ಮಾನಿಟರಿಂಗ್‌ ಜಿಪಂ ಕೈಯಲ್ಲಿದೆ. ಪಿಯುಸಿ ಕಾಲೇಜುಗಳ ಮಾನಿಟರಿಂಗ್ ಜಿಪಂಗೆ ಕೊಡ್ತಿದ್ದೇವೆ. ಈ ಬಗ್ಗೆ ಉಪನ್ಯಾಸಕರಿಗೆ ಯಾವುದೇ ಆತಂಕ ಬೇಡ. ಕೇವಲ ಮಾನಿಟರಿಂಗ್ ಅಷ್ಟೇ ಜಿ.ಪಂ. ವ್ಯಾಪ್ತಿಗೆ ವಹಿಸುತ್ತಿದ್ದೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...