ನನಗೆ ಮುಖ್ಯಮಂತ್ರಿಯಾಗಲು ಧಾವಂತವಿಲ್ಲ: ಡಿಕೆ ಶಿವಕುಮಾರ್

Date:

ಸಿದ್ದರಾಮಯ್ಯ ಅವರಿಂದ ಅಧಿಕಾರ ಕಸಿದುಕೊಂಡು ಮುಖ್ಯಮಂತ್ರಿಯಾಗಲು, ಅಧಿಕಾರ ವಹಿಸಿಕೊಳ್ಳಲು ನನಗೆ ಧಾವಂತವಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಶುಕ್ರವಾರ ಹೇಳಿದ್ದಾರೆ. ಆದಾಗ್ಯೂ, ಸಮಸ್ಯೆಯನ್ನು ಕಾಂಗ್ರೆಸ್‌ ಹೈಕಮಾಂಡ್‌ ಇತ್ಯರ್ಥಪಡಿಸುತ್ತದೆ ಎಂಬ ನಿರೀಕ್ಷೆ ಅವರಲ್ಲಿದೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ದೆಹಲಿಯನ್ನು ತಮ್ಮ ದೇವಾಲಯವೆಂದು ಬಣ್ಣಿಸಿದ್ದಾರೆ. “ಹೈಕಮಾಂಡ್‌ ನಮಗೆ ಯಾವಾಗಲೂ ಮಾರ್ಗದರ್ಶನ ನೀಡುತ್ತದೆ. ನಾವು ಇಲ್ಲಿ ಆಡಳಿತ ನಡೆಸಬಹುದು. ಆದರೆ, ದೆಹಲಿ (ಹೈಕಮಾಂಡ್‌) ಇಲ್ಲದೆ, ಏನೂ ಘಟಿಸುವುದಿಲ್ಲ” ಎಂದು ಹೇಳಿದ್ದಾರೆ.

“ನನಗೆ ಆತುರವಿಲ್ಲ… ಯಾವುದಕ್ಕೂ ನಾನು ಆತುರಪಡುತ್ತಿಲ್ಲ. ನನ್ನ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ. ಹೈಕಮಾಂಡ್‌ ಕರೆ ಮಾಡಿದಾಗಲೆಲ್ಲ ನಾವು ದೆಹಲಿಗೆ ಹೋಗುತ್ತೇವೆ” ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಬೇಕೆಂದು ಒಕ್ಕಲಿಗ ಮಠಗಳ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮಿ ಮತ್ತು ನಂಜಾವಧೂತ ಸ್ವಾಮಿ ಹಾಗೂ ಒಕ್ಕಲಿಗರ ಸಂಘಗಳು ಹೇಳುತ್ತಿವೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು ಎಂಬುದನ್ನು ಬೆಂಬಲಿಸಿದ್ದಾರೆ. ಅವರನ್ನು ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿಯನ್ನಾಗಿ ನೇಮಿಸಬೇಕೆಂದು ಈ ಮಠಾಧೀಶರು ಸಾರ್ವಜನಿಕವಾಗಿ ಹೇಳುತ್ತಿದ್ದಾರೆ.

“ನನಗೆ ಯಾವುದೇ ಸಮುದಾಯದ ದೃಷ್ಟಿಕೋನ ಬೇಡ. ನನ್ನ ಸಮುದಾಯ ಕಾಂಗ್ರೆಸ್” ಎಂದಿರುವ ಶಿವಕುಮಾರ್, ತಾವು ಒಕ್ಕಲಿಗ ನಾಯಕನಾಗಿ ಮಾತ್ರವೇ ಸೀಮಿತಗೊಳಿಸಿಕೊಳ್ಳಲು ನಿರಾಕರಿಸಿದ್ದಾರೆ. “ಖಂಡಿತ, ನಾನು ಒಂದು ಸಮುದಾಯಕ್ಕೆ ಸೇರಿದವನು. ಅವರು ನನ್ನನ್ನು ಇಷ್ಟಪಡುತ್ತಾರೆ. ಆದಾಗ್ಯೂ, ನಾನು ಸಮಾಜದ ಎಲ್ಲ ವರ್ಗಗಳನ್ನು ಪ್ರೀತಿಸುತ್ತೇನೆ. ಹಿಂದುಳಿದ ವರ್ಗಗಳು, ಎಸ್‌ಸಿ/ಎಸ್‌ಟಿಗಳು ಮತ್ತು ಅಲ್ಪಸಂಖ್ಯಾತರು ಹಾಗೂ ಒಕ್ಕಲಿಗರನ್ನೂ ಒಳಗೊಂಡ ಹಿಂದುಳಿದ ವರ್ಗಗಳನ್ನು ನಾನು ಒಳಗೊಳ್ಳುತ್ತೇನೆ” ಎಂದು ಹೇಳಿದ್ದಾರೆ.

“ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ರಾಜ್ಯದ ಸಂಸದರನ್ನು ಭೇಟಿ ಮಾಡಲು ದೆಹಲಿಗೆ ತೆರಳುತ್ತೇನೆ. ನನಗೆ ದೆಹಲಿಯಲ್ಲಿ ಬಹಳಷ್ಟು ಕೆಲಸಗಳಿವೆ. ನಾನು ಸಂಸದರನ್ನು ಭೇಟಿ ಮಾಡಬೇಕಾಗಿದೆ. ಅವರು ನಮ್ಮ ಕೆಲವು ಯೋಜನೆಗಳನ್ನು ಮುಂದುವರಿಸಬೇಕಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...