ಗೌತಮ್ ಗಂಭೀರ್ ನಂತರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದ ಮತ್ತೊಬ್ಬ ಬಿಜೆಪಿ ಸಂಸದ ಜಯಂತ್ ಸಿನ್ಹಾ

Date:

ಬಿಜೆಪಿಯ ಎಲ್ಲ ಕೆಲಸಗಳಿಂದ ತಮ್ಮನ್ನ ಮುಕ್ತಗೊಳಿಸುವಂತೆ ಬಿಜೆಪಿ ಸಂಸದ ಗೌತಮ್ ಗಂಭೀರ್ ಬಿಜೆಪಿ ನಾಯಕರಿಗೆ ಮನವಿ ಮಾಡಿದ್ದಾರೆ. ಈ ಬೆನ್ನಲ್ಲೇ, ಬಿಜೆಪಿಯ ಮತ್ತೊಬ್ಬ ಸಂಸದ ಜಯಂತ್ ಸಿನ್ಹಾ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಸಚಿವರಾಗಿದ್ದ ಸಿನ್ಹಾ, ತಾವು ಹವಾಮಾನ ಬದಲಾವಣೆ ಸಂಬಂಧವಾಗಿ ಕೆಲಸ ಮಾಡಲು ಬಯಸಿರುವುದಾಗಿ ಹೇಳಿಕೊಂಡಿದ್ದಾರೆ. ಹೀಗಾಗಿ, ಚುನಾವಣೆಗೆ ಸ್ಪರ್ಧಿಸಲು ಮನಸ್ಸಿಲ್ಲ ಎಂದಿದ್ದಾರೆ.

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಶನಿವಾರ ಪೋಸ್ಟ್‌ ಮಾಡಿರುವ ಸಿನ್ಹಾ, “ನಾನು ಚುನಾವಣಾ ಕರ್ತವ್ಯಗಳಿಂದ ನನ್ನನ್ನು ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಮನವಿ ಮಾಡಿದ್ದೇನೆ. ಇದರಿಂದಾಗಿ ನಾನು ಭಾರತ ಮತ್ತು ಪ್ರಪಂಚದಾದ್ಯಂತ ಜಾಗತಿಕ ಹವಾಮಾನ ಬದಲಾವಣೆಯನ್ನು ಎದುರಿಸುವ ಕೆಲಸಗಳಲ್ಲಿ ನನ್ನ ಪ್ರಯತ್ನಗಳನ್ನು ಕೇಂದ್ರೀಕರಿಸುತ್ತೇನೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖಂಡಿತವಾಗಿಯೂ, ನಾನು ಆರ್ಥಿಕ ಮತ್ತು ಆಡಳಿತ ವಿಷಯಗಳಲ್ಲಿ ಪಕ್ಷದೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇನೆ. ಕಳೆದ ಹತ್ತು ವರ್ಷಗಳಿಂದ ಭಾರತ ಮತ್ತು ಹಜಾರಿಬಾಗ್‌ ಕ್ಷೇತ್ರದ ಜನರಿಗೆ ಸೇವೆ ಸಲ್ಲಿಸುವ ಸೌಭಾಗ್ಯ ನನಗೆ ಸಿಕ್ಕಿದೆ. ಮೇಲಾಗಿ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ನಾಯಕತ್ವವು ನನಗೆ ಒದಗಿಸಿದ ಅನೇಕ ಅವಕಾಶಗಳಿಗೆ ನಾನು ಅಬಾರಿಯಾಗಿದ್ದೇನೆ. ಅವರೆಲ್ಲರಿಗೂ ಹೃತ್ಪೂರ್ವಕ ಕೃತಜ್ಞತೆಗಳು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...