ಮುಂದಿನ ಪ್ರತಿಪಕ್ಷಗಳ ಮಹಾಸಭೆ ಬೆಂಗಳೂರಿನಲ್ಲಿ ಆಯೋಜನೆ: ಶರದ್‌ ಪವಾರ್

Date:

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವ ಕಾರ್ಯತಂತ್ರಗಳ ಪ್ರತಿಪಕ್ಷಗಳ ಒಗ್ಗಟ್ಟಿನ ಮಹಾಸಭೆ ಜುಲೈ 13 ರಂದು ಬೆಂಗಳೂರಿನಲ್ಲಿ ನಡೆಯಲಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷರಾದ ಶರದ್‌ ಪವಾರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್ 23 ರಂದು ಪಾಟ್ನಾದಲ್ಲಿ ನಡೆದ ಮೊದಲ ಪ್ರತಿಪಕ್ಷ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಿಜೆಪಿ ವಿರುದ್ಧ ಒಗ್ಗಟ್ಟಿನ ಕಾರ್ಯತಂತ್ರ ರೂಪಿಸಲು ಮುಂದಿನ ಸಭೆಯನ್ನು ಶಿಮ್ಲಾದಲ್ಲಿ ನಡೆಸಲಾಗುವುದು ಎಂದು ಘೋಷಿಸಿದ್ದರು. ಆದರೆ ಈಗ ಸ್ಥಳವನ್ನು ಬದಲಾಯಿಸಲಾಗಿದೆ ಎಂದು ಶರದ್‌ ಪವಾರ್ ಹೇಳಿದ್ದಾರೆ.   

2024 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಮಾರ್ಗಸೂಚಿಯನ್ನು ಸಿದ್ಧಪಡಿಸುವ ಸಲುವಾಗಿ 16 ವಿರೋಧ ಪಕ್ಷಗಳು ಪಾಟ್ನಾದಲ್ಲಿ ಸಭೆ ಸೇರಿದ್ದವು. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿವಾಸದಲ್ಲಿ ಸಭೆ ನಡೆಸಿದ್ದ ವಿರೋಧ ಪಕ್ಷದ ನಾಯಕರು ಜುಲೈ 10-12 ರಂದು ಶಿಮ್ಲಾದಲ್ಲಿ ಭೇಟಿಯಾಗುವುದಾಗಿ ಈ ಹಿಂದೆ ಘೋಷಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024 ರಲ್ಲಿ ಬಿಜೆಪಿಯ ವಿರುದ್ಧ ಹೋರಾಡಲು ಆಯಾ ರಾಜ್ಯಗಳಲ್ಲಿ ಕೆಲಸ ಮಾಡುವಾಗ ಒಟ್ಟಾಗಿ ಮುನ್ನಡೆಯುವ ಕಾರ್ಯಸೂಚಿಯನ್ನು ಸಿದ್ಧಪಡಿಸಲು ಬೆಂಗಳೂರಿನಲ್ಲಿ ಎರಡನೆ ಸಭೆ ನಡೆಯಲಿದೆ.

ಈ ಸುದ್ದಿ ಓದಿದ್ದೀರಾ? ಮಣಿಪುರ | ಬೆಂಗಾವಲು ವಾಹನ ತಡೆ; ಹೆಲಿಕಾಪ್ಟರ್‌ ಮೂಲಕ ಸಂತ್ರಸ್ತರ ಶಿಬಿರಗಳಿಗೆ ತೆರಳಿದ ರಾಹುಲ್‌ ಗಾಂಧಿ

ಪಾಟ್ನಾದಲ್ಲಿ ನಡೆದ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಮತ್ತು ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್ ಸೇರಿದಂತೆ ವಿಪಕ್ಷ ನಾಯಕರು ಭಾಗವಹಿಸಿದ್ದರು.

ಪ್ರಸ್ತುತ ಲೋಕಸಭೆಯಲ್ಲಿ, ಪ್ರತಿಪಕ್ಷಗಳ ಒಟ್ಟು ಬಲವು 543 ಸ್ಥಾನಗಳಲ್ಲಿ 200 ಕ್ಕಿಂತ ಕಡಿಮೆಯಿದೆ. ಆದರೂ ಈ ಬಾರಿ 300ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆದು ಬಿಜೆಪಿಗೆ ಸೆಡ್ಡು ಹೊಡೆಯುವ ಭರವಸೆಯಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...