ನಾನು ಟಿಕೆಟ್‌ ಆಕಾಂಕ್ಷಿಯಲ್ಲ: ನಿಖಿಲ್ ಕುಮಾರಸ್ವಾಮಿ

Date:

ಲೋಕಸಭಾ ಚುನಾವಣೆಗೆ ನಾನು ಮಂಡ್ಯ ಕ್ಷೇತ್ರದ ಆಕಾಂಕ್ಷಿಯಲ್ಲ. ಚುನಾವಣೆಗೆ ಸ್ಪರ್ಧಿಸುವ ಇರಾದೆಯೂ ಇಲ್ಲ. ಕೆಲ ಮುಖಂಡರು ಈಗಲೂ ಮಂಡ್ಯದಲ್ಲಿ ಸ್ಪರ್ಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ, ನಾನು ಸ್ಪರ್ಧಾಕಾಂಕ್ಷಿಯಲ್ಲ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನ ಜೆಡಿಎಸ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲವೆಂದು ಈ ಹಿಂದೆಯೇ ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ. ನನ್ನ ನಿರ್ಧಾರದ ಬಗ್ಗೆ ನನಗೆ ಸ್ಪಷ್ಟತೆ ಇದೆ. ಯು-ಟರ್ನ್‌ ಹೊಡೆಯುವ ಗಿರಾಕಿ ನಾನಲ್ಲ” ಎಂದಿದ್ದಾರೆ.

“ಮಂಡ್ಯದಲ್ಲಿ ಪಕ್ಷದ ಮುಖಂಡರು ಒತ್ತಾಯ ಮಾಡಿದ ಕಾರಣಕ್ಕೆ, ಮಂಡ್ಯ ಭಾಗದಲ್ಲಿ ಓಡಾಡಿ ಬಂದಿದ್ದೇನೆ ಅಷ್ಟೇ. ಮಂಡ್ಯದಲ್ಲಿ ಸುಮಲತಾ ಸ್ಪರ್ಧೆ ಬಗ್ಗೆ ಕಾಲವೇ ಉತ್ತರ ನೀಡುತ್ತದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...