ಪರವಾನಗಿ ಪಡೆಯದೆ ಕಬ್ಬು ನುರಿದ ಆರೋಪ; ಬಿಜೆಪಿ ಶಾಸಕ ಯತ್ನಾಳ್‌ಗೆ ನೋಟಿಸ್‌

Date:

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಒಡೆತನದ ಕಾರ್ಖಾನೆಯಲ್ಲಿ ಕಬ್ಬು ಅರೆಯಲು ಪರವಾನಗಿ ಪಡೆಯದಿಲ್ಲ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನೂ ಉಲ್ಲಂಘಿಸಲಾಗಿದೆ ಎಂದು ಆರೋಪಿಸಲಾಗಿದೆ. ಆರೋಪ ಸಂಬಂಧ ತ್ನಾಳ್‌ಗೆ ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಇಲಾಖೆ ಆಯುಕ್ತರು ಮತ್ತು ನಿರ್ದೇಶಕರು ನೋಟಿಸ್‌ ಜಾರಿ ಮಾಡಿದ್ದಾರೆ.

ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿರುವ ಸಿದ್ಧಸಿರಿ ಸೌಹಾರ್ದ ಸಹಕಾರಿ ಕಾರ್ಖಾನೆಯ ಸಿದ್ಧಸಿರಿ ಎಥೆನಾಲ್ ಮತ್ತು ವಿದ್ಯುತ್ ಘಟಕದಲ್ಲಿ ಪರವಾನಗಿ ಪಡೆಯದೆ ಕಬ್ಬು ನುರಿಯಲು ಆರಂಭಿಸಲಾಗಿದೆ ಎಂದು ವರದಿಯಾಗಿದೆ. ಇದಕ್ಕೆ ಸಕ್ಕರೆ ಇಲಾಖೆ ಆಕ್ಷೇಪ ವ್ಯಕ್ತಪಡಿಸಿದ್ದು, ನೋಟಿಸ್‌ಗೆ 24 ಗಂಟೆಗಳಲ್ಲಿ ಉತ್ತರ ನೀಡುವಂತೆ ಫೆಬ್ರವರಿ 16ರಂದು ತಾಕೀತು ಮಾಡಿದೆ.

“ಕಬ್ಬು ನುರಿಯಲು ಪರವಾನಗಿಗಾಗಿ ಸಲ್ಲಿಸಿದ್ದ ಅರ್ಜಿಯಲ್ಲಿ ಅಗತ್ಯ ದಾಖಲೆಗಳನ್ನು ಒದಗಿಸಿಲ್ಲ. ಈ ಬಗ್ಗೆ ತಮಗೆ ಮಾಹಿತಿ ನೀಡಿದ್ದು, ಸೂಕ್ತ ದಾಖಲೆ ಒದಗಿಸುವಂತೆ ಸೂಚಿಸಲಾಗಿತ್ತು. ಆದರೆ, ಅಗತ್ಯ ದಾಖಲೆ ಸಲ್ಲಿಸಿ, ಪರವಾನಗಿ ಪಡೆಯದೆ ಕುಬ್ಬು ನುರಿಯಲು ಆರಂಭಿಸಿದ್ದೀರಿ. ಇದು ಕಬ್ಬು (ನಿಯಂತ್ರಣ) ಆದೇಶ-1966ರ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಸಕ್ಕರೆ ಇಲಾಖೆಯ ಅಧಿಕಾರಿಗಳು ನೋಟಿಸ್‌ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರವಾನಗಿ ಪಡೆಯದೆ ಕಬ್ಬು ನುರಿಯಲು ಆರಂಭಿಸಿರುವ ನಿಮ್ಮ ವಿರುದ್ಧ ಯಾಕೆ ಮೊಕದ್ದಮೆ ದಾಖಲಿಸಬಾರದು ಎಂಬುದಕ್ಕೆ ಸಮಜಾಯಿಸಿ ನೀಡುವಂತೆ ಈ ಹಿಂದೆ (ಜ.24) ಪತ್ರ ಬರೆಯಲಾಗಿತ್ತು. ಆದರೆ, ನೀವು ಸಮಜಾಯಿಷಿ ನೀಡಿಲ್ಲ. ಈಗ, 24 ಗಂಟೆಯೊಳಗೆ ಉತ್ತರಿಸದಿದ್ದರೆ, ಮೊಕದ್ದಮೆ ದಾಖಲಿಸಲಾಗುತ್ತದೆ” ಎಂದು ನೋಟೀಸ್‌ನಲ್ಲಿ ಎಚ್ಚರಿಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...