ಹಿರೇಮಗಳೂರು ಕಣ್ಣನ್‌ಗೆ ನೋಟಿಸ್: ಹಿಂಪಡೆಯಲು ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

Date:

ಮುಜರಾಯಿ ಇಲಾಖೆಯಡಿ ಬರುವ ದೇವಾಲಯದಲ್ಲಿ ಆದಾಯಕ್ಕಿಂತ ಹೆಚ್ಚು ಸಂಬಳ(ತಸ್ತೀಕ್ ಹಣ) ನೀಡಲಾಗಿದೆ ಎಂಬ ಆರೋಪದಡಿ ಹಿರಿಯ ಅರ್ಚಕ, ಸಾಹಿತಿ ಹಿರೇಮಗಳೂರು ಕಣ್ಣನ್ ಅವರಿಗೆ ಚಿಕ್ಕಮಗಳೂರು ತಹಶೀಲ್ದಾರ್ ನೋಟಿಸ್ ನೀಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗುತ್ತಿದ್ದಂತೆ ಅವರಿಂದ ಸಂಬಳ ವಾಪಸ್‌ ಪಡೆಯಲು ನಿರ್ಧರಿಸಿದ್ದ ನೋಟಿಸ್ ಅನ್ನು ವಾಪಸ್ ಪಡೆಯಲು ಸರ್ಕಾರ ಸೂಚನೆ ನೀಡಿದೆ.

ಈ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ, “ಇದು ತಹಶೀಲ್ದಾರ್‌ ಅವರಿಂದ ಆಗಿರುವ ಎಡವಟ್ಟು. ನನಗೂ ಈ ಮಾಹಿತಿ ಇರಲಿಲ್ಲ. ಇದರಲ್ಲಿ ಕಣ್ಣನ್ ಅವರದ್ದು ಏನೂ ತಪ್ಪಿಲ್ಲ. ತಹಶೀಲ್ದಾರ್ ದುಡ್ಡು ಕೊಟ್ಟಿದ್ದಕ್ಕೆ ಅವರು ತಗೊಂಡಿದ್ದಾರೆ. ಕೂಡಲೇ ಹಿರೇಮಗಳೂರು ಕಣ್ಣನ್ ಅವರಿಗೆ ನೀಡಿದ್ದ ನೋಟಿಸ್ ಅನ್ನು ಹಿಂಪಡೆಯಲು ಸೂಚನೆ ನೀಡುತ್ತೇನೆ” ಎಂದು ತಿಳಿಸಿದ್ದಾರೆ.

ramalinga reddy 1
ಸಚಿವ ರಾಮಲಿಂಗಾರೆಡ್ಡಿ ಹೊರಡಿಸಿರುವ ಸ್ಪಷ್ಟನೆ

ಏನಿದು ಬೆಳವಣಿಗೆ?
ಮುಜರಾಯಿ ಇಲಾಖೆಯಡಿ ಬರುವ ದೇವಾಲಯದ ಆದಾಯಕ್ಕಿಂತ ಹೆಚ್ಚು ಸಂಬಳ ನೀಡಲಾಗಿದೆ ಎಂಬ ಆರೋಪದಡಿ ಹಿರಿಯ ಅರ್ಚಕ, ಸಾಹಿತಿ ಹಿರೇಮಗಳೂರು ಕಣ್ಣನ್ ಅವರಿಗೆ ಚಿಕ್ಕಮಗಳೂರು ತಹಶೀಲ್ದಾರ್ ನೋಟಿಸ್ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಿರೇಮಗಳೂರು ಕಣ್ಣನ್ ಅವರು ಅರ್ಚಕರಾಗಿರುವ ಹಿರೇಮಗಳೂರು ಗ್ರಾಮದ ಕಲ್ಯಾಣ ಕೋದಂಡ ರಾಮಚಂದ್ರಸ್ವಾಮಿ ದೇವಾಲಯದ ಆದಾಯ ಕಡಿಮೆ ಇದ್ದು, ಸಂಬಳ ಹೆಚ್ಚುವರಿಯಾಗಿ ಪಾವತಿ ಆಗಿದೆ. ಹೀಗಾಗಿ, ತಿಂಗಳ ಸಂಬಳದ ಪೈಕಿ 4,500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು ವಾಪಸ್ ನೀಡುವಂತೆ ಕಣ್ಣನ್ ಅವರಿಗೆ ತಹಶೀಲ್ದಾರ್ ಸೂಚನೆ ನೀಡಿದ್ದರು.

ಮೂಲಗಳ ಪ್ರಕಾರ, ಹಿರೇಮಗಳೂರು ಕಣ್ಣನ್ ಅವರ ಖಾತೆಗೆ ಪ್ರತಿ ತಿಂಗಳು 7,500 ರೂ. ಸಂಬಳ ಜಮೆಯಾಗುತ್ತಿತ್ತು. 7,500 ರೂಪಾಯಿ ನೀಡಿದ ಸಂಬಳದಲ್ಲಿ 4,500 ರೂ. ಅಂತೆ 10 ವರ್ಷದ ಹಣವನ್ನು ವಾಪಸ್ ನೀಡಲು ಸೂಚನೆ ನೀಡಲಾಗಿದೆ. ಸದ್ಯ ಪ್ರತಿ ತಿಂಗಳು ಬರುತ್ತಿದ್ದ ಸಂಬಳವನ್ನು ತಡೆ ಹಿಡಿಯಲಾಗಿದ್ದು, ಮೇಲಾಧಿಕಾರಿಗಳ ಸೂಚನೆ ಮೇರೆಗೆ ಚಿಕ್ಕಮಗಳೂರು ತಹಶೀಲ್ದಾರ್ ಸುಮಂತ್ ನೋಟಿಸ್ ಜಾರಿ ಮಾಡಿದ್ದರು.

ಬಿಜೆಪಿ ಪಾಳಯ ಆಕ್ರೋಶ

ಈ ಬೆಳವಣಿಗೆಯ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದು, ಕಾಂಗ್ರೆಸ್ ಸರ್ಕಾರವು ಹಿಂದೂ ವಿರೋಧಿ ನಿಲುವು ತಾಳಿದೆ ಎಂದು ದೂರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಆರ್ ಅಶೋಕ್, “ಸಿಎಂ ಸಿದ್ದರಾಮಯ್ಯನವರ ಹಿಂದೂ ದ್ವೇಷ ಯಾವ ಪರಾಕಾಷ್ಠೆಗೆ ತಲುಪಿದೆ ಎಂದರೆ 10 ವರ್ಷಗಳ ಸಂಬಳ ವಾಪಸ್ಸು ನೀಡುವಂತೆ ಚಿಕ್ಕಮಗಳೂರಿನ ರಾಮನ ದೇವಸ್ಥಾನದ ಅರ್ಚಕರಿಗೆ ನೋಟಿಸ್ ಕೊಡಿಸಿದ್ದಾರೆ. 7 ತಿಂಗಳಲ್ಲೇ ರಾಜ್ಯದ ಬೊಕ್ಕಸವನ್ನ ಬರಿದು ಮಾಡಿ ದಿವಾಳಿಯಾಗಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ದೇವಸ್ಥಾನದ ಅರ್ಚಕರಿಗೆ ನೀಡುವ ಸಂಬಳಕ್ಕೂ ಕತ್ತರಿ ಹಾಕುತ್ತಿದ್ದಾರೆ. ಹಿಂದೂಗಳನ್ನು, ಹಿಂದೂಗಳ ದೇವಸ್ಥಾನಗಳನ್ನು, ಅಲ್ಲಿ ಪೂಜೆ ಮಾಡುವವರನ್ನು ಕಂಡರೆ ನಿಮಗೆ ಯಾಕಿಷ್ಟು ದ್ವೇಷ ಸಿಎಂ ಸಿದ್ದರಾಮಯ್ಯನವರೇ?” ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ, “ರಾಜ್ಯ ಸರಕಾರ ಹುಚ್ಚು ಸರ್ಕಾರ ಎನ್ನುವುದಕ್ಕೆ ಇದು ಮತ್ತೊಂದು ಉದಾಹರಣೆ. ಚಿಕ್ಕಮಗಳೂರು ದೇವಸ್ಥಾನದ ಅರ್ಚಕ‌ ಹಿರೇಮಗಳೂರು ಕಣ್ಣನ್ ಅವರಿಗೆ 10 ವರ್ಷದ ಸಂಬಳದ ಹಣ ವಾಪಸ್ ಕಟ್ಟುವಂತೆ ಹೇಳಿದೆ. ಇದು ಸುಸಂಸ್ಕೃತ ಅರ್ಚಕರಾದ ಹಿರೇಮಗಳೂರು ಕಣ್ಣನ್ ಅವರಿಗೆ ಮಾಡಿದ ದೊಡ್ಡ ಅಪಚಾರ” ಎಂದು ಕಿಡಿಕಾರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...