ಬಿಜೆಪಿ-ಜೆಡಿಎಸ್‌ ಮೈತ್ರಿ ನಂತರ ಕಾಂಗ್ರೆಸ್ ಸೇರುವವರ ಸಂಖ್ಯೆ ಹೆಚ್ಚಾಗುತ್ತಿದೆ:‌ ಡಿ ಕೆ ಶಿವಕುಮಾರ್

Date:

  • ಮೈತ್ರಿಯಿಂದ ರಾಜಕೀಯದಲ್ಲಿ ಸಿದ್ಧಾಂತ ಮುಖ್ಯವಲ್ಲ ಎಂಬ ಸಂದೇಶ
  • ಸರ್ಕಾರ ಬೀಳಿಸಿದವರ ಜೊತೆಯಲ್ಲೇ ಜೆಡಿಎಸ್ ಕೈ ಜೋಡಿಸಿದೆ: ಡಿಕೆಶಿ

ರಾಜಕಾರಣದಲ್ಲಿ ಸಿದ್ಧಾಂತ ಮುಖ್ಯವಲ್ಲ ಎನ್ನುವ ಕೆಟ್ಟ ಸಂದೇಶವನ್ನು ಜೆಡಿಎಸ್ – ಬಿಜೆಪಿ ಮೈತ್ರಿ ನೀಡಿದೆ. ಜೆಡಿಎಸ್- ಬಿಜೆಪಿ ಮೈತ್ರಿ ನಂತರ ಕಾಂಗ್ರೆಸ್ ಸೇರುವಂತಹವರ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜೆಡಿಎಸ್ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮಂಗಳವಾರ ರಾತ್ರಿ ಮೂರು ಜನ ಮಾಜಿ ಶಾಸಕರ ಜೊತೆ ಮಾತುಕತೆ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷ ಸೇರುವವರ ಸಂಖ್ಯೆ ಹೆಚ್ಚಾಗಲಿದೆ. ನಾವೆಲ್ಲಾ ಜಾತ್ಯತೀತ ಸರ್ಕಾರ ಇರಬೇಕು ಎಂದು ಹೋರಾಟ ಮಾಡಿದೆವು. ಈಗ ಸರ್ಕಾರ ಬೀಳಿಸಿದವರ ಜೊತೆಯಲ್ಲೇ ಕೈ ಜೋಡಿಸುತ್ತಿದ್ದಾರೆ” ಎಂದು ವ್ಯಂಗ್ಯವಾಡಿದರು.

“ಮೈತ್ರಿಯನ್ನು ವಿರೋಧಿಸಿ ಪಕ್ಷ ತೊರೆದು ಬರುತ್ತಿದ್ದಾರೆ. ನಮಗೆ ಮುಖಂಡರಿಗಿಂತ ಕಾರ್ಯಕರ್ತರು ಬಹಳ ಮುಖ್ಯ, ಶಿವಮೊಗ್ಗ, ರಾಮನಗರ, ಬೆಂಗಳೂರು ನಗರ ಹೀಗೆ ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಎರಡೂ ಪಕ್ಷಗಳ ಕಾರ್ಯಕರ್ತರು ತಂಡೋಪತಂಡವಾಗಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಸಾಮರ್ಥ್ಯವಿರುವ ಅಭ್ಯರ್ಥಿಗಳೆಲ್ಲ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ಜೆಡಿಎಸ್ ಯಾವತ್ತಿಗೂ ಬದ್ಧ: ಎಚ್.ಡಿ ದೇವೇಗೌಡ

“ಆಪರೇಷನ್ ಹಸ್ತ ನಾವೆಂದೂ ಮಾಡುವುದಿಲ್ಲ. ನಮ್ಮದು ಕೋ- ಆಪರೇಷನ್ ಎಂದು ಪದೇ ಪದೇ ಹೇಳುತ್ತಿದ್ದೇನೆ. ಕಾರ್ಯಕರ್ತರ ಮಟ್ಟದಲ್ಲಿ ಪಕ್ಷ ಸೇರ್ಪಡೆಗೆ ಸೂಚನೆ ನೀಡಿದ್ದೇನೆ” ಎಂದರು.

ಮಾಜಿ ಆಶ್ರಯ ಸಮಿತಿಯ ಅಧ್ಯಕ್ಷ ಕೆ ಎಂ ಹೋಂಬೇಗೌಡ, ಎಪಿಎಂಸಿ ಸದಸ್ಯರಾದ ಟಿ ಎ ಮೂರ್ತಿ, ನಿವೃತ್ತ ಪಶುವೈದ್ಯಾಧಿಕಾರಿ ಡಾ ರಾಜು, ಸಿಲ್ಕ್ ಮಂದಿರ್ ಮಾಲೀಕರಾದ ತಿಮ್ಮೇಗೌಡ ಅವರು ಸೇರಿದಂತೆ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ತಾವರೆಕೆರೆ, ಸೂಲಿವಾರ, ಬ್ಯಾಲಾಳು, ದೊಣ್ಣೇನಹಳ್ಳಿ, ಕುರುಬರಪಾಳ್ಯ, ಉದ್ದಂಡಹಳ್ಳಿ, ಗೊಲ್ಲಹಳ್ಳಿ ಗ್ರಾಮಗಳ 70ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಸೇರ್ಪಡೆಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...