ಅಸ್ಸಾಂನಲ್ಲಿ ‘ನ್ಯಾಯ್‌ ಯಾತ್ರೆ’ | ಕೆಲವೇ ಮೀಟರ್ ಮಾರ್ಗ ಬದಲಿಸಿದ್ದಕ್ಕೆ ರಾಹುಲ್‌ ವಿರುದ್ಧ ಎಫ್‌ಐಆರ್‌

Date:

ಅಸ್ಸಾಂನಲ್ಲಿ ಸಾಗಿದ ಭಾರತ್‌ ಜೋಡೋ ನ್ಯಾಯ್‌ ಯಾತ್ರೆಯು ಅನುಮತಿಸಲಾಗಿದ್ದ ಮಾರ್ಗದಲ್ಲಿ ತೆರಳದೆ, ಬೇರೆ ಮಾರ್ಗದಲ್ಲಿ ತೆರಳಿದೆ ಎಂಬ ಆರೋಪದ ಮೇಲೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮತ್ತು ಕೆ.ಬಿ ಬೈಜು ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಅಸ್ಸಾಂನ ಜೋರ್ಹತ್ ಸದರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಯಾತ್ರೆಯು ಜೋಹರ್ತ್‌ ಜಿಲ್ಲಾಡಳಿತ ಸೂಚಿಸಿದ್ದ ನಿಯಮಗಳನ್ನು ಅನುಸರಿಸಿಲ್ಲ. ರಸ್ತೆ ಸುರಕ್ಷತಾ ನಿಮಯಗಳನ್ನು ಪಾಲಿಸಿಲ್ಲ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಯಾತ್ರೆಯಲ್ಲಿ ಅಸ್ಸಾಂ ಜನರನ್ನು ಉದ್ದೇಶಿಸಿ ಮಾತನಾಡಿದ್ದ ರಾಹುಲ್‌ ಗಾಂಧಿ, ‘ಅಸ್ಸಾಂ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ’ ಎಂದಿದ್ದರು. ಇದರಿಂದಾಗಿ, ರಾಹುಲ್‌ ಗಾಂಧಿ ಮತ್ತು ರಾಜ್ಯದಲ್ಲಿ ಯಾತ್ರೆಯಲ್ಲಿ ಸಂಘಟಿಸಿದ್ದ ಬೈಜು ವಿರುದ್ಧ ಬಿಜೆಪಿ ಸರ್ಕಾರ ಪ್ರಕರಣ ದಾಖಲಿಸಿದೆ ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣ ದಾಖಲಿಸಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅಸ್ಸಾಂ ವಿಪಕ್ಷ ನಾಯಕ, ಕಾಂಗ್ರೆಸ್‌ ಮುಖಂಡ ದೇಬಬ್ರತ ಸೈಕಿಯಾ, “ಯಾತ್ರೆಯ ಯಶಸ್ಸಿನಿಂದ ಬಿಜೆಪಿ ವಿಚಲಿತವಾಗಿದೆ. ಹೀಗಾಗಿಯೇ, ಈ ಎಫ್‌ಐಆರ್ ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

“ಪಿಡಬ್ಲ್ಯುಡಿ ಪಾಯಿಂಟ್‌ನಲ್ಲಿ ‘ಟ್ರಾಫಿಕ್ ಡೈವರ್ಶನ್’ಅನ್ನು ನಿರ್ವಹಿಸುವ ಪೊಲೀಸರು ಇರಲಿಲ್ಲ. ನಿಯೋಜಿತ ಮಾರ್ಗವು ತುಂಬಾ ಚಿಕ್ಕದಾಗಿತ್ತು. ನಾವು ದೊಡ್ಡ ಜನಸಮೂಹ ಹೊಂದಿದ್ದೆವು. ಆದ್ದರಿಂದ, ನಾವು ಕೆಲವೇ ಮೀಟರ್‌ಗಳವರೆಗೆ ಬೇರೆ ಮಾರ್ಗದಲ್ಲಿ ಹೋದೆವು. ಅಸ್ಸಾಂನಲ್ಲಿ ಮೊದಲ ದಿನದ ಯಾತ್ರೆಯ ಯಶಸ್ಸಿನಿಂದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಯಭೀತರಾಗಿದ್ದಾರೆ. ನಮ್ಮ ಯಾತ್ರೆಯ ದಿಕ್ಕು ತಪ್ಪಿಸಲು ಅವರು ಬಯಸಿದ್ದಾರೆ” ಎಂದು ಸೈಕಿಯಾ ಹೇಳಿದ್ದಾರೆ.

ಅಸ್ಸಾಂನಲ್ಲಿ ನಡೆದ ಮೊದಲ ದಿನದ ಯಾತ್ರೆಯಲ್ಲಿ ರಾಹುಲ್‌ಗಾಂಧಿ ಅವರು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಅಸ್ಸಾಂನ ಬಿಜೆಪಿ ಸರ್ಕಾರವು ಬಹುಶಃ ಭಾರತದ ಅತ್ಯಂತ ಭ್ರಷ್ಟ ಸರ್ಕಾರವಾಗಿದೆ. ಯಾತ್ರೆಯಲ್ಲಿ ನಾವು ಅಸ್ಸಾಂನ ಸಮಸ್ಯೆಗಳನ್ನು ಪ್ರಸ್ತಾಪಿಸುತ್ತೇವೆ” ಎಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ?: ರಾಹುಲ್‌ ಗಾಂಧಿಯಿಂದ ‘ನ್ಯಾಯ’ದ ನಿರೀಕ್ಷೆಯಲ್ಲಿ ಅಸ್ಸಾಂ ಕಾಂಗ್ರೆಸ್‌ನಿಂದ ಅಮಾನತಾದ ನಾಯಕಿ

ರಾಹುಲ್‌ ಹೇಳಿಕೆ ವಿರುದ್ಧ ಪ್ರತ್ಯಾರೋಪ ಮಾಡಿದ್ದ ಮುಖ್ಯಮಂತ್ರಿ ಶರ್ಮಾ, “ಗಾಂಧಿ ಕುಟುಂಬವೇ ಅತ್ಯಂತ ಭ್ರಷ್ಟ ಕುಟುಂಬವಾಗಿದೆ. ಅವರ ಯಾತ್ರೆಯು ಅಸ್ಸಾಂನಲ್ಲಿ ವಾಸಿಸುವ ಬಂಗಾಲಿ ಮುಸ್ಲಿಮರಾದಿ ‘ಮಿಯಾಸ್‌’ಗಳಿಗಾಗಿ ಮಾತ್ರ. ಇದು ‘ನ್ಯಾಯ್ ಯಾತ್ರೆ’ಯಲ್ಲ, ‘ಮಿಯಾ ಯಾತ್ರೆ’. ಎಲ್ಲೆಲ್ಲಿ ಮುಸ್ಲಿಮರು ಇರುತ್ತಾರೋ ಆ ಸ್ಥಳಗಳಿಗೆ ಭೇಟಿ ನೀಡುತ್ತಾರೆ” ಎಂದು ಹೇಳಿದ್ದರು.

2024ರ ಲೋಕಸಭಾ ಚುನಾವಣೆಗೂ ಮುನ್ನ ರಾಹುಲ್‌ ಗಾಂಧಿ ಅವರುಭಾರತದ ಪೂರ್ವದಿಂದ ಪಶ್ಚಿಮಕ್ಕೆ ಯಾತ್ರೆಯನ್ನು ನಡೆಸುತ್ತಿದ್ದಾರೆ. ಸುಮಾರು 6,700 ಕಿ.ಮೀ ದೂರ ಯಾತ್ರೆ ಕ್ರಮಿಸಲಿದೆ. ಯಾತ್ರೆಯು ಜನವರಿ 14ರಂದು ಮಣಿಪುರದ ತೌಬಲ್‌ನಲ್ಲಿ ಪ್ರಾರಂಭವಾಗಿದೆ. ಮಾರ್ಚ್ 20 ಅಥವಾ 21ರಂದು ಮಹಾರಾಷ್ಟ್ರದ ಮುಂಬೈನಲ್ಲಿ ಯಾತ್ರೆ ಕೊನೆಗೊಳ್ಳಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...