ಆಕ್ಷೇಪಾರ್ಹ ವಿಡಿಯೋ ವೈರಲ್; DGP ವಜಾ ಕೂಡ ಆಗಬಹುದು: ಗೃಹ ಸಚಿವ ಪರಮೇಶ್ವರ

Date:

ಡಿಜಿಪಿ ಕೆ ರಾಮಚಂದ್ರ ರಾವ್ ಅವರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ಅಕ್ಷೇಪಾರ್ಹ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬೆನ್ನಲ್ಲೇ, ರಾವ್ ಅವರನ್ನು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಅಮಾನತು ಮಾಡಿದೆ. ಅವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಂಡಿದ್ದೇವೆ. ತನಿಖೆ ಬಳಿಕ ಕ್ರಮ ಕೈಗೊಳ್ಳಲಾಗುತ್ತದೆ. ಅವರು ವಜಾ ಕೂಡ ಆಗಬಹುದು ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡದ ಅವರು, “ಡಿಸಿಆರ್‌ಇಯಿಂದ ತಕ್ಷಣದ ಕ್ರಮ ಕೈಗೊಳ್ಳಲಾಗಿದೆ. ಇಂತಹ ಘಟನೆಗಳನ್ನು ಸಹಿಸಲಾಗದು. ಅವರು ಎಷ್ಟೇ ದೊಡ್ಡವರು ಅಥವಾ ಹಿರಿಯರಿರಲಿ. ಈ ರೀತಿಯ ಕೃತ್ಯಗಳು ನಡೆದಾಗ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದಿದ್ದಾರೆ.

“ರಾಮಚಂದ್ರ ರಾವ್ ಅವರನ್ನು ಅಮಾನತು ಮಾಡಲಾಗಿದೆ. ತಮ್ಮ ವಿರುದ್ಧದ ಆರೋಪ ಸುಳ್ಳು ಎಂಬುದಾಗಿ ಡಿಜೆಪಿ ಹೇಳಿಕೆ ನೀಡಿದ್ದಾರೆ. ಸದ್ಯಕ್ಕೆ, ಮೇಲ್ನೋಟಕ್ಕೆ ಕಂಡುಬಂದಿರುವ ದೃಶ್ಯಗಳ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗಿದೆ. ವಿಚಾರಣೆ ನಡೆಯಲಿದೆ. ತನಿಖೆ ಪೂರ್ಣಗೊಂಡ ಬಳಿಕ, ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪೊಲೀಸ್ ಇಲಾಖೆ ಮಾತ್ರವಲ್ಲ, ಯಾವುದೇ ಇಲಾಖೆಗೂ ಇಂತಹ ಘಟನೆಗಳು ಕಳಂಕ ತರುತ್ತವೆ. ಆದ್ದರಿಂದಲೇ, ತುರ್ತು ಕ್ರಮ ಕೈಗೊಂಡಿದ್ದೇವೆ. ಪ್ರಕರಣದಲ್ಲಿ ಸಂತ್ರಸ್ತೆ ಯಾರು ಎಂಬುದು ಇನ್ನೂ ನಮಗೆ ಸ್ಪಷ್ಟವಾಗಿಲ್ಲ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...