ಮಂಗಳೂರು | ಹಿಂದೂ ಜಾಗರಣ ವೇದಿಕೆ ಮುಖಂಡನ ಮೊಬೈಲ್‌ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆ

Date:

ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಜಾಗರಣ ವೇದಿಕೆಯ ಮುಖಂಡ ಸಮಿತ್ ರಾಜ್ ಧರೆಗುಡ್ಡೆ ಮೊಬೈಲ್‌ನಲ್ಲಿ ಸುಮಾರು 50ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಮಿತ್ ರಾಜ್ ಮುಲ್ಕಿ-ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್‌ ಆಪ್ತ.

ಅಪಘಾತ ಎಸಗಿದ ಖಾಸಗಿ ಬಸ್‌ಗೆ ಕಲ್ಲು ತೂರಾಟ ನಡೆಸಿ ಹಾನಿಗೊಳಿಸಿದ ಪ್ರಕರಣದಲ್ಲಿ ಇತ್ತೀಚೆಗೆ ಸಮಿತ್ ರಾಜ್ ಬಂಧನ ಮಾಡಲಾಗಿದೆ. ಪ್ರಕರಣದ ಹೆಚ್ಚಿನ ತನಿಖೆಗಾಗಿ ಮೊಬೈಲ್ ವಶಕ್ಕೆ ಪಡೆಯಲಾಗಿದ್ದು, ಮೊಬೈಲ್ ಡೇಟಾ ಎಕ್ಸ್‌ಟ್ರಾಕ್ಟ್ ಮಾಡಲಾಗಿದೆ. ಈ ವೇಳೆ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಸಿಕ್ಕಿದೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್‌ಗಿರಿ: ಐವರು ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಈ ವಿಡಿಯೋ ಕರಾವಳಿ ರಾಜಕಾರಣಿಯೊಬ್ಬರದ್ದು ಎಂದೂ ಹೇಳಲಾಗುತ್ತಿದೆ. ಸದ್ಯ ಈ ಬಗ್ಗೆ ಮೂಡಬಿದಿರೆ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ. ವಿಡಿಯೋ ತುಣುಕುಗಳನ್ನು ಪ್ರಸಾರ ಮಾಡಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವಂತಹ ಸಾಧ್ಯತೆ ಹಿನ್ನೆಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನು ಈಗಾಗಲೇ ಸಮಿತ್ ಬಸ್​ಗೆ ಕಲ್ಲು ತೂರಿದ ಪ್ರಕರಣದಲ್ಲಿ ಜಾಮೀನು ಪಡೆದಿದ್ದಾರೆ. ಇದೀಗ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಮತ್ತೆ ಬಂಧನಕ್ಕೆ ಒಳಗಾಗುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...