ಎತ್ತಿನಹೊಳೆ | ಮುಖ್ಯಮಂತ್ರಿ ಅವರಿಂದ ಬಾಗಿನ ಅರ್ಪಿಸಲು ನಿರ್ಮಿಸಲಾಗಿದ್ದ ಮಂಟಪ ದಿಢೀರ್‌ ಕುಸಿತ

Date:

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ- 1ಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಂದ ಬಾಗಿನ ಅರ್ಪಿಸಲು ನಿರ್ಮಿಸಲಾಗಿದ್ದ ಮಂಟಪ ಕಾರ್ಯಕ್ರಮ ಆರಂಭವಾಗುವುದಕ್ಕೂ ಮೊದಲೇ ಕುಸಿದಿದೆ.

ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ ಬರಪೀಡಿತ 29 ತಾಲ್ಲೂಕುಗಳಿಗೆ ಕುಡಿಯುವ ನೀರು ಒದಗಿಸುವ ಮಹತ್ವದ ಯೋಜನೆಯ ಉದ್ಘಾಟನೆ ಇಂದು ನಡೆಯುತ್ತಿದೆ.

ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಮಧ್ಯಾಹ್ನ 12ಕ್ಕೆ ಚಾಲನೆ ನೀಡಿದ ಬಳಿಕ ಹೆಬ್ಬನಹಳ್ಳಿಯಲ್ಲಿ ಬಾಗಿನ ಅರ್ಪಿಸುವ ಕಾರ್ಯಕ್ರಮ ನಿಗದಿಯಾಗಿತ್ತು. ಅದಕ್ಕಾಗಿ ಹೂವು, ತಳಿರು ತೋರಣಗಳಿಂದ ಅಲಂಕೃತ ಮಂಟಪ ನಿರ್ಮಿಸಲಾಗಿತ್ತು. ಶುಕ್ರವಾರ 11.15ರ ಹೊತ್ತಿಗೆ ಮಂಟಪ ಕುಸಿದು ಬಿದ್ದಿದೆ. ಈ ರೀತಿ ಆಗಿರುವುದು ಅಧಿಕಾರಿಗಳಿಗೆ, ಜನಪ್ರತಿನಿದಿಗಳಿಗೆ ಬೇಸರ ತಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...