ತೈಲ ಬೆಲೆ ಏರಿಕೆ | ಬಿಜೆಪಿ ಪ್ರತಿಭಟನೆ ಬರೀ‌ ನಾಟಕ: ಸಚಿವ ಎಂ‌ ಬಿ ಪಾಟೀಲ್ ವಾಗ್ದಾಳಿ

Date:

ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯನ್ನು ನಾವು ಕೇವಲ ಮೂರು ರೂಪಾಯಿ ಏರಿಸಿದ್ದೇವೆ ಅಷ್ಟೇ.‌ ಮೋದಿ ಅಧಿಕಾರಕ್ಕೆ ಬಂದ ನಂತರ ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್‌ ‌ಬೆಲೆಗಳು ಕ್ರಮವಾಗಿ 400, 38 ಮತ್ತು 35 ರೂ. ದುಬಾರಿ ಆಗಿದೆ. ಆಗ ತೆಪ್ಪಗಿದ್ದ ಬಿಜೆಪಿಯ ಅಶೋಕ್ ಮತ್ತು ವಿಜಯೇಂದ್ರ ಗ್ಯಾಂಗ್ ಈಗ ಪ್ರತಿಭಟಿಸುತ್ತಿರುವುದು ಬರೀ ನಾಟಕ ಎಂದು ಸಚಿವ ಎಂ ಬಿ ಪಾಟೀಲ್ ಎದಿರೇಟು ನೀಡಿದ್ದಾರೆ.

ಮಂಗಳವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, “ಬಿಜೆಪಿ ಅಧಿಕಾರದಲ್ಲಿ ಇರುವ ಮಹಾರಾಷ್ಟ್ರ, ಮಧ್ಯಪ್ರದೇಶ ಮುಂತಾದ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಗಳು ನಮಗಿಂತ ಜಾಸ್ತಿ ಇದೆ. ಬಿಜೆಪಿ ಅಲ್ಲೇಕೆ ಪ್ರತಿಭಟಿಸುತ್ತಿಲ್ಲ” ಎಂದು ಪ್ರಶ್ನಿಸಿದರು.

“ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಈಗಿನ ಬೆಲೆ ಏರಿಕೆಗೂ ಸಂಬಂಧ ಇಲ್ಲ. ಜೊತೆಗೆ ನಾವು ಕೊಟ್ಟಿರುವ ಗ್ಯಾರಂಟಿಗಳು ಕೂಡ ನಿಲ್ಲುವುದಿಲ್ಲ. ಅವುಗಳ ಜತೆಯಲ್ಲೇ ನಾವು ಅಭಿವೃದ್ಧಿ ಕೂಡ ಸಾಧಿಸುತ್ತೇವೆ” ಎಂದು ಅವರು ಪ್ರತಿಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ಹತ್ತು ವರ್ಷಗಳಲ್ಲಿ ಕಚ್ಚಾ ತೈಲದ ‌ಬೆಲೆ ಸಾಕಷ್ಟು ಇಳಿದಿದೆ. ಆದರೆ ಮೋದಿ ಸರಕಾರ ಮಾತ್ರ ತೈಲೋತ್ಪನ್ನಗಳ ಬೆಲೆಯನ್ನು ಒಮ್ಮೆ ಕೂಡ ಇಳಿಸಿಲ್ಲ. ಆದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ಪೆಟ್ರೋಲ್ , ಡೀಸೆಲ್‌ ಮತ್ತು ಎಲ್ ಪಿಜಿ‌ ಬೆಲೆ ಜನರ ಕೈಗೆ ಎಟುಕುವಂತಿತ್ತು” ಎಂದು ಅವರು ಹೇಳಿದ್ದಾರೆ.

“ನಾವೀಗ ಕೇವಲ ಮೂರು ರೂಪಾಯಿ ಮಾತ್ರ ಏರಿಸಿದ್ದೇವೆ. ಆದರೆ ಮೋದಿ ಮತ್ತು ಬಿಜೆಪಿ ನೀತಿಗಳಿಂದ ಜನರ ಜೀವನ ದುಬಾರಿಯಾಗಿದೆ. ಇದು ವಾಸ್ತವ ಸಂಗತಿ. ಬಿಜೆಪಿ ನಾಯಕರು ಮೊದಲು ಇದರ ವಿರುದ್ಧ ದನಿ ಎತ್ತುವ ಕರ್ತವ್ಯ ಮಾಡಬೇಕು” ಎಂದು ಅವರು ಆಗ್ರಹಿಸಿದರು.

“ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು ಹದಿನೈದು ಸಲ ಬಜೆಟ್ ಮಂಡಿಸಿದ್ದಾರೆ. ಅವರ ಅರ್ಥಿಕ ಜ್ಞಾನದ ಬಗ್ಗೆ ಜನರಿಗೆ ಚೆನ್ನಾಗಿ ತಿಳಿದಿದೆ. ರಾಜ್ಯದ ಬೊಕ್ಕಸವನ್ನು ಹೇಗೆ ತುಂಬಬೇಕು ಎಂಬುದನ್ನು ಅವರು ಬಲ್ಲರು” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...