ಗೃಹಲಕ್ಷ್ಮಿ | ಆ. 18ರ ಒಳಗೆ ಖಾತೆಗೆ ಹಣ ಹಾಕುವುದು ಖಚಿತ: ಲಕ್ಷ್ಮಿ ಹೆಬ್ಬಾಳ್ಕರ್‌

Date:

  • ಆನ್​ಲೈನ್ ಮೂಲಕ ಮತ್ತು ಭೌತಿಕವಾಗಿ ಅರ್ಜಿ ಸಲ್ಲಿಕೆಗೆ ಅವಕಾಶ
  • ಯೋಜನೆಯ ಲಾಭ ಪಡೆಯಲಿವೆ 1.28 ಕೋಟಿ ಕುಟುಂಬಗಳು

ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆ ವಿಳಂಬ ಆಗಲಿದೆ. ಆದರೆ, ಆಗಸ್ಟ್​ 18ರ ಒಳಗೆ ಮನೆಯೊಡತಿಯ ಬ್ಯಾಂಕ್‌ ಖಾತೆಗೆ ಹಣ ಹಾಕುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಗೌರಿಗದ್ದೆ ದತ್ತಾಶ್ರಮದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “ಆಗಸ್ಟ್ 18ರಂದು ಗೃಹಲಕ್ಷ್ಮಿಯರ ಖಾತೆಗೆ ಹಣ ಸಂದಾಯ ಮಾಡುವುದು ಖಚಿತ. ಆದರೆ, ಅರ್ಜಿ ಸಲ್ಲಿಕೆ ಮಾತ್ರ ಸ್ವಲ್ಪ ತಡವಾಗಲಿದೆ. ಆಗಸ್ಟ್ 17 ಅಥವಾ 18ಕ್ಕೆ ಖಂಡಿತ ಹಣ ಅವರ ಖಾತೆ ಸೇರುತ್ತೆ” ಎಂದು ಸ್ಪಷ್ಟಪಡಿಸಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ ಮಾಡುತ್ತಿರುವುದರಿಂದ ಅರ್ಜಿ ಸಲ್ಲಿಕೆ ವಿಳಂಬವಾಗುತ್ತಿದೆ ಅಷ್ಟೇ. ಯೋಜನೆ ಜನರಿಗೆ ಸರಳವಾಗಿ ಸಿಗಬೇಕು ಎಂಬುದು ನಮ್ಮ ಉದ್ದೇಶವಾಗಿದೆ. ಹಾಗಾಗಿ, ಅಧಿಕಾರಿಗಳಿಗೆ ಕೆಲವು ಬದಲಾವಣೆಗಳ ಕುರಿತು ಸೂಚನೆ ನೀಡಿದ್ದೇವೆ” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೊದಲು ಗ್ರಾಮ ಒನ್ ಕರ್ನಾಟಕ, ಬೆಂಗಳೂರು ಒನ್‌ನಲ್ಲಿ ಇದರ ಸೇವೆ ಪಡೆಯಬಹುದಾಗಿತ್ತು. ಆದರೆ, ಈಗ ಬಾಪೂಜಿ ಸೇವಾ ಕೇಂದ್ರವನ್ನು ಸೇರಿಸಿದ್ದೇವೆ, ಗ್ರಾಮ ಪಂಚಾಯಿತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರ ಇದೆ. ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಆಸಕ್ತಿ ಇರುವವರನ್ನು ಪ್ರಜಾಪ್ರತಿನಿಧಿ ಮಾಡುತ್ತೇವೆ” ಎಂದು ತಿಳಿಸಿದರು.

“ಗೃಹಲಕ್ಷ್ಮಿ ಯೋಜನೆಗೆ ಅರ್ಹರಾಗಿರುವ ಮಹಿಳೆಯರು ಯಾವ ಖಾತೆಗೆ ಬೇಕೋ ಅದೇ ಬ್ಯಾಂಕ್‌ ಖಾತೆಗೆ ಹಣ ನೀಡುತ್ತೇವೆ. ನಿನ್ನೆ ಕೆಲವು ಬದಲಾವಣೆ ಮಾಡಿದ್ದೇವೆ. ಅಧಿಕಾರಿಗಳು ಈಗಾಗಲೇ ಸಾಫ್ಟ್​​ವೇರ್​ ಸಿದ್ಧ ಮಾಡುತ್ತಿದ್ದಾರೆ. ಶೀಘ್ರದಲ್ಲಿ ಅಪ್ಲಿಕೇಶನ್ ಡೌನ್‌ಲೋಡ್‌ ಮಾಡುವ ಕಾರ್ಯಕ್ಕೆ ಚಾಲನೆ ನೀಡುತ್ತೇವೆ” ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ನೀರು ಪೂರೈಕೆಗೆ ಆಗ್ರಹ; ಖಾಲಿ ಕೊಡ ಹಿಡಿದು ಗ್ರಾ.ಪಂ ಕಚೇರಿಗೆ ಮುತ್ತಿಗೆ

“ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಯನ್ನು ರಾಜ್ಯ ಸರ್ಕಾರ 6 ದಿನ ಮುಂದೂಡಿತ್ತು. ಜೂನ್ 16ರಿಂದ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ಆಗಬೇಕಿತ್ತು. ಆದರೆ, ತಾಂತ್ರಿಕ ಕಾರಣದಿಂದ ಯೋಜನೆಯನ್ನು ಮುಂದೂಡಿದ್ದರು. 1 ಕೋಟಿ 28 ಲಕ್ಷ ಕುಟುಂಬಗಳ ಯಜಮಾನಿ ಪಡೆದುಕೊಳ್ಳುತ್ತಾರೆ. ಆದ್ದರಿಂದ ಆನ್​ಲೈನ್ ಮೂಲಕ ಮತ್ತು ಭೌತಿಕವಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ” ಎಂದು ವಿವರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...