ವೈರಸ್‌ ಇಂಜೆಕ್ಟ್‌ ಮಾಡಿ ಸಾಮೂಹಿಕ ಅತ್ಯಾಚಾರ; ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

Date:

ಬಿಜೆಪಿ ಶಾಸಕ ಮುನಿರತ್ನ ತನ್ನ ಬೆಂಬಲಿಗರೊಂದಿಗೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ, ಜೊತೆಗೆ ಜೀವನಪರ್ಯಂತ ಗುಣಮುಖವಾಗದ ಕಾಯಿಲೆಯ ವೈರಸ್‌ ಇಂಜೆಕ್ಟ್‌ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದು, ಬಿಜೆಪಿ ಶಾಸಕರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.

ಆರ್‌ಎಂಸಿ ಯಾರ್ಡ್‌ ಠಾಣೆಯಲ್ಲಿ ಶಾಸಕ ಮುನಿರತ್ನ, ಅವರ ಬೆಂಬಲಿಗರಾದ ವಸಂತ, ಚನ್ನಕೇಶವ, ಕಮಲಾ ಹಾಗೂ ಅಪರಿಚಿತ ಸೇರಿ ಐವರ ವಿರುದ್ದ ಎಫ್‌ಐಆರ್ ದಾಖಲಾಗಿದೆ. ಇನ್ನು ಮಹಿಳೆ ಬಿಜೆಪಿ ಕಾರ್ಯಕರ್ತೆ, ರಾಜಕೀಯ ಕಾರಣಕ್ಕೆ ಈ ರೀತಿ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಅತ್ಯಾಚಾರವು 2023ರಲ್ಲಿ ನಡೆದಿದೆ. ಆದರೆ ಆರೋಪಿಗಳ ಬೆದರಿಕೆಯಿಂದಾಗಿ ಮಹಿಳೆ ಈವರೆಗೂ ದೂರು ನೀಡಿರಲಿಲ್ಲ ಎಂದು ಮಹಿಳೆ ಪೊಲೀಸರಿಗೆ ತಿಳಿಸಿರುವುದಾಗಿ ವರದಿಯಾಗಿದೆ.

“ನಾನು ಈ ಹಿಂದೆ ಬಿಜೆಪಿ ಕಾರ್ಯಕರ್ತೆಯಾಗಿದ್ದೆ. ನನ್ನ ಗಂಡ ನನ್ನನ್ನು ಬಿಟ್ಟು ಹೋದ ಕಾರಣ ಇನ್ನೊಂದು ವಿವಾಹವಾಗಿದ್ದೆ. ಆದರೆ ನಾನು ವೇಶ್ಯಾವಾಟಿಕೆ ನಡೆಸಿತ್ತಿರುವುದಾಗಿ ಆರೋಪ ಮಾಡಿ ನನ್ನನ್ನು ಜೈಲಿಗೆ ಕಳುಹಿಸಿದ್ದರು” ಎಂದು ಮಹಿಳೆ ತಿಳಿಸಿದ್ದಾರೆ.

“ಜಾಮೀನು ಪಡೆದು ಹೊರಗೆ ಬಂದ ಬಳಿಕ ಮುನಿರತ್ನ ಬೆಂಬಲಿಗರು ಪ್ರಕರಣದ ಇತ್ಯರ್ಥಕ್ಕಾಗಿ ಕರೆದರು. ಅದನ್ನು ನಂಬಿ ಶಾಸಕರ ಕಚೇರಿಗೆ ಹೋದೆ. ಅಲ್ಲಿ ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ನನ್ನ ಮುಖದ ಮೇಲೆ ಮುನಿರತ್ನ ಮೂತ್ರ ವಿಸರ್ಜಿಸಿದ್ದಾರೆ” ಎಂದು ದೂರಲಾಗಿದೆ.

“ಬಳಿಕ ದ್ರವವೊಂದನ್ನು ತೆಗೆದು ಇಂಜೆಕ್ಟ್ ಮಾಡಿದ್ದಾರೆ. ಜೀವನಪರ್ಯಂತ ನರಳುತ್ತೀಯಾ ಎಂದು ಬೆದರಿಕೆ ಹಾಕಿದ್ದಾರೆ. 2025ರ ಜನವರಿ 14ರಂದು ಹೊಟ್ಟೆನೋವಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಹೋಗಿ ಪರಿಶೀಲಿಸಿದಾಗ ನನಗೆ ಇಡಿಆರ್ ವೈರಸ್ ಕಾಯಿಲೆ ಇರುವುದು ತಿಳಿದುಬಂದಿದೆ. ಇದು ವಾಸಿಯಾಗದ ಕಾಯಿಲೆ ಎಂದು ವೈದ್ಯರು ಹೇಳಿದ್ದಾರೆ” ಎಂದು ಮಹಿಳೆ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.’

ಇದನ್ನು ಓದಿದ್ದೀರಾ? ಬಿಜೆಪಿ ಶಾಸಕ ಮುನಿರತ್ನಗೆ ಮೊಟ್ಟೆ ಏಟು!

ಇನ್ನು ಇಡಿಆರ್ ವೈರಸ್ ಬಗ್ಗೆ ತಿಳಿದು ಮಾನಸಿಕವಾಗಿ ನೊಂದು ಸಂತ್ರಸ್ತೆ ಮೇ 19ರಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರು ರಕ್ಷಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆಯಿಂದ ಹೇಳಿಕೆ ಪಡೆದು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ. ಬಿಬಿಎಂಪಿ ತ್ಯಾಜ್ಯ ವಿಲೇವಾರಿ ಗುತ್ತಿಗೆದಾರ ಚೆಲುವರಾಜು ಅವರಿಂದ ಹಣ ಪಡೆದು ವಂಚಿಸಿದ ಮತ್ತು ಅವರ ಜಾತಿ ನಿಂದನೆ ಮಾಡಿದ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ ಕಾರಣ ಪ್ರಕರಣ ದಾಖಲಾಗಿದೆ. ಇದಾದ ಬಳಿಕ ಮುನಿರತ್ನ ಅವರ ಒಂದೊಂದೇ ಆಘಾತಕಾರಿ ಕೃತ್ಯಗಳು ಬಯಲಾಗಿದೆ.

ಎಚ್‌ಐವಿ ಸೋಂಕಿತರ ಮೂಲಕ ಹನಿಟ್ರ್ಯಾಪ್‌ ಮಾಡಿಸುವುದು, ಎಚ್‌ಐವಿ ಇಂಜೆಕ್ಟ್ ಮಾಡುವುದು ಮೊದಲಾದ ನೀಚ ಕೃತ್ಯಗಳನ್ನು ಎಸಗಿರುವುದರ ವಿರುದ್ಧ ಈಗಾಗಲೇ ತನಿಖೆ ನಡೆಯುತ್ತಿದೆ. 2024ರಲ್ಲಿ ಮುನಿರತ್ನರ ವಿರುದ್ಧ ಅತ್ಯಾಚಾರ, ಜಾತಿ ನಿಂದನೆ ಹಾಗೂ ಸುಲಿಗೆ, ಜೀವ ಬೆದರಿಕೆ ಸೇರಿದಂತೆ ನಾನಾ ಆರೋಪಗಳಡಿ ಐದು ಪ್ರತ್ಯೇಕ ಪ್ರಕರಣಗಳು ದಾಖಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...