‘ನ್ಯಾಯ ಯಾತ್ರೆ’ಗೆ ಒಂದು ವರ್ಷ; ಮೋದಿ ಭೇಟಿಗಾಗಿ ಮಣಿಪುರ ಇನ್ನೂ ಕಾಯುತ್ತಿದೆ: ಕಾಂಗ್ರೆಸ್‌

Date:

ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ಮಣಿಪುರದಿಂದ ಮುಂಬೈವರೆಗೆ ‘ಭಾರತ್ ಜೋಡೋ ನ್ಯಾಯ ಯಾತ್ರೆ’ ನಡೆದು ಒಂದು ವರ್ಷವಾಗಿದೆ. ನ್ಯಾಯ ಯಾತ್ರೆಯ ವಾರ್ಷಿಕೋತ್ಸವದ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌, ಹಿಂಸಾಚಾರ ಪೀಡಿತ ಮಣಿಪುರಕ್ಕೆ ಭೇಟಿ ನೀಡದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ.

ನಿರುದ್ಯೋಗ, ಬೆಲೆ ಏರಿಕೆ ಮತ್ತು ಸಾಮಾಜಿಕ ನ್ಯಾಯದಂತಹ ವಿಚಾರಗಳನ್ನು ಮುಂದಿಟ್ಟುಕೊಂಡು ರಾಹುಲ್‌ ಗಾಂಧಿ ಅವರು 2024ರ ಜನವರಿ 14ರಂದು ಹಿಂಸಾಚಾರ ಪೀಡಿತ ಮಣಿಪುರದಿಂದ ‘ನ್ಯಾಯ ಯಾತ್ರೆ’ ಆರಂಭಿಸಿದ್ದರು. ಆ ವೇಳೆಯು ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡಬೇಕು. ಸಂತ್ರಸ್ತರ ಅಳಲು ಆಲಿಸಬೇಕು. ಶಾಂತಿ ನೆಲೆಸುವಂತೆ ಮಾಡಬೇಕೆಂದು ಕಾಂಗ್ರೆಸ್‌ ಒತ್ತಾಯಿಸಿತ್ತು. ಆದರೆ, ಈಗ ಯಾತ್ರೆಯ ವಾರ್ಷಿಕೋತ್ಸವವನ್ನು ಕಾಂಗ್ರೆಸ್‌ ಆಚರಿಸುತ್ತಿದೆ. ಆದರೂ, ಪ್ರಧಾನಿ ಮೋದಿ ಅವರು ಮಣಿಪುರಕ್ಕೆ ಭೇಟಿ ನೀಡಿಲ್ಲ.

“ಮೋದಿ ಅವರಿಗೆ ಪ್ರಪಂಚದ ಎಲ್ಲ ಭಾಗಗಳಿಗೆ ಹೋಗಲು ಸಮಯ, ಒಲವು ಮತ್ತು ಶಕ್ತಿ ಇದೆ. ಆದರೆ, ಈಶಾನ್ಯ ರಾಜ್ಯದಲ್ಲಿ (ಮಣಿಪುರ) ಸಂಕಷ್ಟದಲ್ಲಿರುವ ಜನರನ್ನು ಭೇಟಿ ಮಾಡಲು ಅವರಿಗೆ ಸಮಯವಿಲ್ಲ. ಅದರ ಅಗತ್ಯವೂ ಇಲ್ಲ” ಎಂದು ಕಾಂಗ್ರೆಸ್‌ ಆಕ್ರೋಶ ವ್ಯಕ್ತಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇಂದಿಗೆ, ನಿಖರವಾಗಿ ಒಂದು ವರ್ಷದ ಹಿಂದೆ, ಮಣಿಪುರದಿಂದ ಕಾಂಗ್ರೆಸ್ ‘ಭಾರತ್ ಜೋಡೋ ನ್ಯಾಯ ಯಾತ್ರೆ’ಯನ್ನು ಪ್ರಾರಂಭಿಸಿತು. ಐತಿಹಾಸಿಕ ಕನ್ಯಾಕುಮಾರಿಯಿಂದ ಕಾಶ್ಮೀರಕ್ಕೆ ನಡೆದ ಭಾರತ್ ಜೋಡೋ ಯಾತ್ರೆಯ ನಂತರ ನ್ಯಾಯ ಯಾತ್ರೆಯು 15 ರಾಜ್ಯಗಳ ಮೂಲಕ 6,600 ಕಿ.ಮೀ.ಗಳನ್ನು ಕ್ರಮಿಸಿತ್ತು. 2024ರ ಮಾರ್ಚ್ 16ರಂದು ಮುಂಬೈನಲ್ಲಿ ಸಮಾರೋಪಗೊಂಡಿತ್ತು” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಪ್ರಧಾನಿಯವರ ಭೇಟಿಗಾಗಿ ಮಣಿಪುರ ಇನ್ನೂ ಕಾಯುತ್ತಿದೆ. ಅವರು ಪ್ರಪಂಚದಾದ್ಯಂತ ಹೋಗಲು ಸಮಯ, ಒಲವು ಮತ್ತು ಶಕ್ತಿಯನ್ನು ಹೊಂದಿದ್ದಾರೆ. ಆದರೆ, ಮಣಿಪುರದ ಸಂಕಷ್ಟದಲ್ಲಿರುವ ಜನರನ್ನು ಭೇಟಿ ಮಾಡುವುದು ಅವರಿಗೆ ಅಗತ್ಯವಿಲ್ಲ” ಎಂದು ರಮೇಶ್ ಕಿಡಿಕಾರಿದ್ದಾರೆ.

“ಪ್ರಧಾನಿಯವರು ತಮ್ಮ ಪಕ್ಷದ ಶಾಸಕರು ಮತ್ತು ಮುಖ್ಯಮಂತ್ರಿ ಸೇರಿದಂತೆ ಮಣಿಪುರದ ರಾಜಕೀಯ ನಾಯಕರನ್ನು ಭೇಟಿ ಮಾಡಲು ದೃಢವಾಗಿ ನಿರಾಕರಿಸಿದ್ದಾರೆ” ಎಂದು ರಮೇಶ್ ಆರೋಪಿಸಿದ್ದಾರೆ.

“2023ರ ಮೇ 3ರಿಂದ ಮಣಿಪುರದ ಯಾತನೆ ಕಡಿಮೆಯಾಗಿಲ್ಲ. ಉದ್ವಿಘ್ನತೆ ಮುಂದುವರೆದಿದೆ. ಮೈಥೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರದಲ್ಲಿ 220ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...