ಅರವಿಂದ್ ಕೇಜ್ರಿವಾಲ್ ಮಾತ್ರ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ: ಪತ್ನಿ ಸುನೀತಾ

Date:

ಗುಣಮಟ್ಟದ ಶಿಕ್ಷಣ, ಶಾಲೆಗಳು, ಆಸ್ಪತ್ರೆಗಳು, ರಸ್ತೆಗಳು, ಉಚಿತ ವಿದ್ಯುತ್ ಮತ್ತು ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವುದು ತನ್ನ ಪತಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಾತ್ರ ಎಂದು ಪತ್ನಿ ಸುನೀತಾ ಕೇಜ್ರಿವಾಲ್ ಹೇಳಿದ್ದಾರೆ.

ಯಮುನಾನಗರದ ಸಧೌರಾದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಸುನೀತಾ, ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದು ಅರವಿಂದ್ ಕೇಜ್ರಿವಾಲ್ ಮಾತ್ರ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಅರವಿಂದ್ ಕೇಜ್ರಿವಾಲ್ ವಿರುದ್ಧ ಪಿತೂರಿ ಮಾಡಿದೆ, ಜೈಲಿಗೆ ಹಾಕಿದೆ ಎಂದು ದೂರಿದರು.

“ಶಾಲೆಗಳನ್ನು ಸುಧಾರಿಸಿದ, ಮೊಹಲ್ಲಾ ಕ್ಲಿನಿಕ್‌ಗಳನ್ನು ನಿರ್ಮಿಸಿದ, ಸರ್ಕಾರಿ ಆಸ್ಪತ್ರೆಗಳನ್ನು ಸುಧಾರಿಸಿದ ಮತ್ತು ವಿದ್ಯುತ್ ಉಚಿತ ಮಾಡಿದ ಬೇರೆ ಯಾವುದಾದರೂ ಪಕ್ಷವಿದೆಯೇ” ಎಂದು ಸುನೀತಾ ಕೇಜ್ರಿವಾಲ್ ಪ್ರಶ್ನಿಸಿದ್ದು, “ಹರಿಯಾಣದ ಲಾಲ್ (ಮಗ) ಅರವಿಂದ್ ಕೇಜ್ರಿವಾಲ್ ಮಾತ್ರ ಹಾಗೆ ಮಾಡಬಹುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಅರವಿಂದ್ ಕೇಜ್ರಿವಾಲ್ ಕೋಮಾಗೆ ಜಾರಬಹುದು ಎಂದ ಎಎಪಿ, ತಿಹಾರ್ ಜೈಲು ಹೇಳುವುದೇನು?

“ಪ್ರಧಾನಿ ಮೋದಿ ಅವರಿಗೆ ಕೇಜ್ರಿವಾಲ್ ಬಗ್ಗೆ ಹೊಟ್ಟೆಕಿಚ್ಚಿದೆ. ಹಾಗಾಗಿಯೇ ದೆಹಲಿ ಮುಖ್ಯಮಂತ್ರಿಯನ್ನು ನಕಲಿ ಪ್ರಕರಣದಲ್ಲಿ ಜೈಲಿಗೆ ಹಾಕಲಾಗಿದೆ. ಮೋದಿ ಮುಂದೆ ಕೇಜ್ರಿವಾಲ್ ತಲೆಬಾಗುವುದಿಲ್ಲ” ಎಂದರು.

ಇತ್ತೀಚೆಗೆ ಇಂಡಿಯಾ ಒಕ್ಕೂಟದ ಎಎಪಿ ಹರಿಯಾಣದ ಎಲ್ಲಾ 90 ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಕಟಿಸಿದೆ. ಸುನೀತಾ ಎರಡು ದಿನಗಳ ಹರಿಯಾಣ ಪ್ರವಾಸದಲ್ಲಿದ್ದು ದೆಹಲಿಯಲ್ಲಿರುವ ಸರ್ಕಾರ ಕಾಲೇಜು ಬಗ್ಗೆ ಮಾತನಾಡಿದ್ದಾರೆ. ಹಾಗೆಯೇ ಸಧೌರಾದಲ್ಲಿ ಒಂದೇ ಒಂದು ಸರ್ಕಾರಿ ಕಾಲೇಜು ಇಲ್ಲ ಎಂದು ತನ್ನ ಭಾಷಣಗಳಲ್ಲಿ ಹೇಳಿದ್ದಾರೆ.

ಎಎಪಿ ಅಧಿಕಾರಕ್ಕೆ ಬಂದರೆ, ಸಾರ್ವಜನಿಕರಿಗೆ ನೀಡಿದ ಎಲ್ಲಾ ಐದು ಭರವಸೆಗಳನ್ನು ಈಡೇರಿಸಲಾಗುವುದು. ಉಚಿತ ಮತ್ತು 24-ಗಂಟೆಗಳ ವಿದ್ಯುತ್, ಪ್ರತಿ ಹಳ್ಳಿಯಲ್ಲಿ ಮೊಹಲ್ಲಾ ಚಿಕಿತ್ಸಾಲಯಗಳು, ಸರ್ಕಾರಿ ಆಸ್ಪತ್ರೆಗಳು ಮತ್ತು ಶಾಲೆಗಳ ಪರಿಸ್ಥಿತಿಗಳನ್ನು ಸುಧಾರಿಸುವುದು, ಉಚಿತ ಮತ್ತು ಗುಣಾತ್ಮಕ ಶಿಕ್ಷಣವನ್ನು ಒದಗಿಸುವುದು ಐದು ಭರವಸೆಯಾಗಿದೆ ಎಂದಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...