ನಾವು ತಲ್ವಾರ್ ಹಿಡಿಯುತ್ತೇವೆ: ಪ್ರತಾಪ್ ಸಿಂಹ ಮತ್ತೊಂದು ವಿವಾದಾತ್ಮಕ ಹೇಳಿಕೆ

Date:

ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕಳೆದುಕೊಂಡು ನಿರುದ್ಯೋಗಿಯಾಗಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ ಸುದ್ದಿಯಲ್ಲಿ ಉಳಿದಿದ್ದಾರೆ. ಇತ್ತೀಚೆಗೆ, ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಮಾತನಾಡಿದ್ದ ಪ್ರತಾಪ್ ಸಿಂಹ, ಕೊಲೆ ಆರೋಪಿಗಳ ಎನ್‌ಕೌಂಟರ್ ಮಾಡುವ ಬಗ್ಗೆ ಮಾತನಾಡಿ ವಿವಾದ ಸೃಷ್ಟಿಸಿದ್ದರು. ಇದೀಗ, ‘ನಾವು ತಲ್ವಾರ್ ಹಿಡಿಯುತ್ತೇವೆ’ ಎಂದು ಹೇಳುವ ಮೂಲಕ ಮತ್ತೆ ವಿವಾದ ಸೃಷ್ಟಿಸಿ ಸುದ್ದಿಯಾಗಿದ್ದಾರೆ.

ಮುಸ್ಲಿಮರ ವಿರುದ್ಧ ಕೋಮು ಕಿಡಿಕಾರುತ್ತಲೇ ಇರುವ ಪ್ರತಾಪ್ ಸಿಂಹ, ಮೈಸೂರಿನಲ್ಲಿ ಮಾತನಾಡಿದ್ದು, “ಮುಸ್ಲಿಮರ ಬಳಿ ಇರುವ ಪೆಟ್ರೋಲ್ ಬಾಂಬ್, ತಲ್ವಾರ್ ಕಿತ್ತುಕೊಳ್ಳಬೇಕು. ಇಲ್ಲದಿದ್ದರೆ, ನಾವು ತಲ್ವಾರ್ ಹಿಡಿಯುತ್ತೇವೆ” ಎಂದಿದ್ದಾರೆ.

“ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಅದ್ದೂರಿ ಗಣೇಶ ಮೆರವಣಿಗೆಗಳು ನಡೆಯುತ್ತವೆ ಅಲ್ಲಿ ಯಾವುದೇ ಸಮಸ್ಯೆಯಾಗದಂತೆ ಮುಸ್ಲಿಮರ ಮೇಲೆ ನಿಯಂತ್ರಣ ಹೇರಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಷ ದಸರಾ ಬಗ್ಗೆ ಮಾತನಾಡಿದ ಮಾಜಿ ಸಂಸದ, “ಚಾಮುಂಡಿಗೆ ಅವಮಾನ ಆಗುವುದಕ್ಕೆ ಬಿಡುವುದಿಲ್ಲ. ಚಾಮುಂಡಿ ಬೆಟ್ಟದಲ್ಲಿ ಮಹಿಷಾ ದಸರಾ ನಡೆಸಲು ಬಿಡುವುದಿಲ್ಲ. ಮಹಿಷಾ ದಸರಾ ನಡೆಸುವವರು ಅವರ ಮನೆಗಳಲ್ಲಿ ಮಾಡಿಕೊಳ್ಳಲಿ” ಎಂದಿದ್ದಾರೆ.

ಮುಡಾ ಮತ್ತು ವಾಲ್ಮೀಕಿ ನಿಮಗದ ಆಪಾದಿತ ಹಗರಣಗಳ ಬಗ್ಗೆ ಪ್ರತಿಕ್ರಿಯಿಸಿದ ಪ್ರತಾಪ್ ಸಿಂಹ, “ಮುಖ್ಯಮಂತ್ರಿ ಸಿದ್ದರಾಮಯ್ಯ ತಲೆದಂಡ ಖಚಿತ. ಮುಡಾ ಹಗರಣ ವಿಚಾರ ಹೈಕೋರ್ಟ್‌ನಲ್ಲಿದೆ. ಆ ಪ್ರಕರಣದಲ್ಲಿ ಏನೇ ಆದರೂ, ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡುವುದು ನಿಶ್ಚಿತ. ಆರ್ಥಿಕ ಹಗರಣ ಆದಾಗ, ಆರ್ಥಿಕ ಸಚಿವರೇ ಹೊಣೆಗಾರರಾಗಿರುತ್ತಾರೆ. 88 ಕೋಟಿ ರೂಪಾಯಿ ಅವ್ಯವಹಾರ ಆಗಿರುವ ಬಗ್ಗೆ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...