ಕೋಲಾರ | ‘ಜನತಾ ದರ್ಶನ’ದಲ್ಲಿ ಸಂಸದ-ಶಾಸಕರಿಂದ ‘ಪೌರುಷ ದರ್ಶನ’

Date:

  • ಏಕವಚನದಲ್ಲೇ ಬೈದಾಡಿಕೊಂಡ ಬಿಜೆಪಿ ಸಂಸದ ಮುನಿಸ್ವಾಮಿ, ಕಾಂಗ್ರೆಸ್ ಶಾಸಕ ನಾರಾಯಣಸ್ವಾಮಿ
  • ಉಸ್ತುವಾರಿ ಸಚಿವರ ಎದುರಲ್ಲೇ ನಡೆದ ಕಾರ್ಯಕ್ರಮದಲ್ಲಿ ನಡೆದ ಘಟನೆ; ವಿಡಿಯೋ ವೈರಲ್

ಜನತಾ ದರ್ಶನ ಕಾರ್ಯಕ್ರಮವು ಸಂಸದ-ಶಾಸಕರ ನಡುವೆ ‘ಪೌರುಷ ದರ್ಶನ’ಕ್ಕೆ ಸಾಕ್ಷಿಯಾದ ಘಟನೆ ಕೋಲಾರದಲ್ಲಿ ನಡೆದಿದೆ.

ಇಂದು ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಜನತಾ ದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೋಲಾರದಲ್ಲೂ ಕೂಡ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿತ್ತು.

ಈ ಸಭೆಯಲ್ಲಿ ಬಿಜೆಪಿ ಸಂಸದ ಎಸ್‌ ಮುನಿಸ್ವಾಮಿ ಹಾಗೂ ಕಾಂಗ್ರೆಸ್ ಶಾಸಕ ಎಸ್‌ ಎನ್ ನಾರಾಯಣಸ್ವಾಮಿ ಅವರ ನಡುವೆ ವೇದಿಕೆಯ ಮೇಲೆಯೇ ಮಾತಿನ ಚಕಮಕಿ ನಡೆದಿದ್ದು, ಬಹಿರಂಗವಾಗಿಯೇ ಕೈ – ಕೈ ಮಿಲಾಯಿಸುವ ಹಂತಕ್ಕೆ ಜನಪ್ರತಿನಿಧಿಗಳು ಮುಂದಾಗಿದ್ದರು. ಸಕಾಲಕ್ಕೆ ಪೊಲೀಸರು ಮಧ್ಯ ಪ್ರವೇಶಿಸಿದ್ದರಿಂದ ಜಗಳ ತಪ್ಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನತಾ ದರ್ಶನ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದ ಎಸ್‌ ಮುನಿಸ್ವಾಮಿ ತಮ್ಮ ಭಾಷಣದ ವೇಳೆ ಅರಣ್ಯ ಜಮೀನು ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡುತ್ತಾ, ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್‌ ಅವರಿಗೆ ಭೂಗಳ್ಳರನ್ನು ಪಕ್ಕದಲ್ಲಿಯೇ ಕೂರಿಸಿಕೊಂಡಿದ್ದೀರಾ ಎಂದು ಕುಟುಕಿದರು.

ಇದರಿಂದ ಬೈರತಿ ಸುರೇಶ್‌ ಅವರ ಪಕ್ಕದಲ್ಲಿ ಕುಳಿತಿದ್ದ ಶಾಸಕ ಎಸ್‌ ಎನ್‌ ನಾರಾಯಣಸ್ವಾಮಿ ಕೆರಳಿದರು.

‘ನಿಮ್ಮಪ್ಪ ಭೂಗಳ್ಳ, ಯಾರಿಗೆ ಹೇಳ್ತಿಯಾ? ನಿಮ್ಮಪ್ಪನಿಗೆ ಹುಟ್ಟಿದ್ದರೆ ಸಾಬೀತು ಮಾಡು’ ಎಂದು ಸಂಸದ ಎಸ್‌ ಮುನಿಸ್ವಾಮಿ ಅವರಿಗೆ ಕಾಂಗ್ರೆಸ್ ಶಾಸಕ ಎಸ್‌ ಎನ್ ನಾರಾಯಣಸ್ವಾಮಿ ಏಕವಚನದಲ್ಲಿಯೇ ಸವಾಲು ಹಾಕಿದರು. ಇದರಿಂದ ಕೆರಳಿದ ಸಂಸದ ಎಸ್‌ ಮುನಿಸ್ವಾಮಿ ಭಾಷಣ ಪೀಠವನ್ನು ಬಿಟ್ಟು ಶಾಸಕರತ್ತ ನುಗ್ಗಿ ಬಂದರು. ಈ ವೇಳೆ ಅಲ್ಲಿಯೇ ಇದ್ದ ಪೊಲೀಸರು ಸಂಸದರನ್ನು ತಡೆದು, ವೇದಿಕೆಯಿಂದ ಹೊರಕ್ಕೆ ಎಳೆದೊಯ್ದರು.

ಈ ಘಟನೆಯ ವಿಡಿಯೋ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, ವೈರಲ್ ಆಗಿದೆ. ಜನಪ್ರತಿನಿಧಿಗಳ ಈ ರೀತಿಯ ನಡೆಯನ್ನು ಖಂಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...

ಕೇರಳ ಚುನಾವಣೆ | ಮಂಜೇಶ್ವರ ಬಿಜೆಪಿ ಅಭ್ಯರ್ಥಿ ಸುರೇಂದ್ರನ್ ಮೇಲಿದೆ 242 ಕ್ರಿಮಿನಲ್ ಪ್ರಕರಣಗಳು

ಏಪ್ರಿಲ್ 9ರಂದು ಕೇರಳದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದಕ್ಕೂ ಮುನ್ನ ಅಭ್ಯರ್ಥಿಗಳು...

ಸರ್ಕಾರಿ ಅಧಿಕಾರಿಯ ಆತ್ಮಹತ್ಯೆ ಪ್ರಕರಣ: ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ವಿರುದ್ಧ ಎಫ್‌ಐಆರ್

ಪಂಜಾಬ್ ರಾಜ್ಯ ಗೋದಾಮು ನಿಗಮದ (ಪಿಎಸ್‌ಡಬ್ಲ್ಯೂಸಿ) ಜಿಲ್ಲಾ ವ್ಯವಸ್ಥಾಪಕ ಗಗನ್‌ದೀಪ್ ಸಿಂಗ್...

ಕೇರಳ | ಭಿನ್ನಮತೀಯರಿಂದ ಚುನಾವಣೆ ಮೇಲೆ ಯಾವುದೇ ಪರಿಣಾಮ ಆಗಲ್ಲ: ಸಿಪಿಐಎಂ

ಕೇರಳದಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆ ನಡೆಯಲಿದೆ. ಈಗಾಗಲೇ ಎಲ್‌ಡಿಎಫ್, ಯುಡಿಎಫ್‌,...