ಅಕ್ರಮ ಪಡಿತರ ವಿರುದ್ಧ ಕಾರ್ಯಾಚರಣೆ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ : ಸಚಿವ ಕೆ ಎಚ್ ಮುನಿಯಪ್ಪ

Date:

ಅಕ್ರಮ ಪಡಿತರ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ವ್ಯಕ್ತಿಗಳ ವಿರುದ್ಧ ನ್ಯಾಯಾಲಯದ ಆದೇಶದಂತೆ ಕಾನೂನು ರೀತಿ ಕ್ರಮ ಜರುಗಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ವಿಧಾನ ಪರಿಷತನಲ್ಲಿ ಸದಸ್ಯರಾದ ಟಿ.ಎನ್.ಜವರಾಯಿಗೌಡ, ಐವನ್ ಡಿ ಸೋಜಾ, ಸಿ.ಟಿ.ರವಿ, ಶರವಣ.ಟಿ.ಎ, ನಿರಾಣಿ ರುದ್ರಪ್ರ ಹನುಮಂತಪ್ಪ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿ, “ಅಕ್ರಮ ಪಡಿತರ ವಿರುದ್ಧ ಸರ್ಕಾರದಿಂದ ವಿಶೇಷ ಕಾರ್ಯಾಚರಣೆ ಪ್ರಕ್ರಿಯೆ ಚಾಲ್ತಿಯಲ್ಲಿದೆ” ಎಂದು ಸದನಕ್ಕೆ ತಿಳಿಸಿದರು.

“ರಾಜ್ಯಾದ್ಯಂತ ಜನವರಿ-2021 ರಿಂದ ಮೇ 2023ರ ಅವಧಿಯಲ್ಲಿ 3,35,463 ಅನರ್ಹ ಆದ್ಯತಾ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಲಾಗಿದ್ದು, ಇವರಿಂದ 13,51,30,858 ರೂ. ದಂಡ ವಿಧಿಸಿ, ಅನರ್ಹರಿಗೆ ನೀಡಿದ ಸವಲತ್ತುಗಳಿಂದ ಉಂಟಾದ ನಷ್ಟವನ್ನು ಭರಿಸಲು ಸರ್ಕಾರ ಕ್ರಮವಹಿಸಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಹಾರ ಇಲಾಖೆಯ ಉಗ್ರಾಣಗಳಿಂದ ಅಕ್ರಮವಾಗಿ ಕಾಳ ಸಂತೆಯಲ್ಲಿ ಅಕ್ಕಿ ಮಾರಾಟವಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ಕ್ರಮ ವಹಿಸಿದೆ. ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸುವ ಪಡಿತರ ಅಕ್ರಮ ಸಾಗಣೆ ಕಂಡು ಬಂದಲ್ಲಿ ಕೂಡಲೇ ದಾಳಿ ನಡೆಸಿ, ಅಗತ್ಯ ವಸ್ತುಗಳ ಕಾಯ್ದೆ 1955 ರಡಿ ಪ್ರಕರಣ ದಾಖಲಿಸಲಾಗಿದೆ. ಅಕ್ರಮ ಪಡಿತರ ದಾಸ್ತಾನು ಮುಟ್ಟುಗೋಲು ಹಾಕಿಕೊಂಡು, ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ, ಮುಟ್ಟುಗೋಲು ದಾಸ್ತಾನನ್ನು ವಿಲೇ ಮಾಡಿ, ಪಡಿತರ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡಲಾಗುತ್ತಿದೆ” ಎಂದರು.

“ರಾಜ್ಯಾದ್ಯಂತ 2024-25ನೇ ಸಾಲಿನಲ್ಲಿ 213 ಎಫ್.ಐ.ಆರ್ ದಾಖಲಿಸಿ ಒಟ್ಟು 2,68,07,872 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು, 238 ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಪರಿಶೀಲಿಸಲು ಮೇಲ್ವಿಚಾರಣೆ ಮಾಡಲು ಇಲಾಖಾ ವತಿಯಿಂದ ನೋಡಲ್ ಅಧಿಕಾರಿಗಳನ್ನು ವಿಭಾಗವಾರು ನೇಮಕ ಮಾಡಲಾಗಿದೆ” ಎಂದು ವಿವರಿಸಿದರು.

“ಈ ಹಿಂದೆ ಕೆಲವು ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹರಿದ್ದ ಫಲಾನುಭವಿಗಳು ಹಾಲಿ ಬಡತನ ರೇಖೆಗಿಂತ ಮೇಲೆ ಬಂದಿದ್ದು, ಸದರಿ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳನ್ನಾಗಿ ಪರಿವರ್ತಿಸಲು ಕ್ರಮ ವಹಿಸಲಾಗುತ್ತಿದೆ. ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು, ಜಿಎಸ್‌ಟಿ ಅಥವಾ ಸಿಎಸ್‌ಟಿ ಪಾವತಿದಾರರ ವಿವರಗಳನ್ನು ಕುಟುಂಬ ತಂತ್ರಾಂಶದಿಂದ ಪಡೆದು ದಂಡ ವಸೂಲಿ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಪ್ರಸ್ತುತ ಆಹಾರ ಇಲಾಖೆಯಲ್ಲಿ ಬಳಸುವ ಸರ್ವರ್ ಹಳೆಯದಾಗಿದೆ. ಈ ಕಾರಣದಿಂದಾಗಿ ಎನ್‌ಐಸಿಯಿಂದ ಕೆಎಸ್‌ಡಿಸಿಗೆ ಆಹಾರ ತಂತ್ರಾಂಶದ ಮೈಗ್ರೇಶನ್ ಕಾರ್ಯ ಅಂತಿಮ ಹಂತದಲ್ಲಿದ್ದು, ಈ ಕಾರ್ಯಪೂರ್ಣವಾದ ನಂತರ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಹಾಗೂ ಪಡಿತರ ತಿದ್ದುಪಡಿ ಕಾರ್ಯ ನಿರಂತರವಾಗಿ ನಡೆಯಲಿದೆ” ಎಂದು ಬಾಕಿ ಅರ್ಜಿಗಳ ಕಾಲಮಿತಿ ವಿಲೇಯ ಪ್ರಶ್ನೆಗೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...