ಆಪರೇಶನ್ ಕಮಲ‌ | ಬಿಜೆಪಿಯ ಪ್ರಭಾವಿಯೊಬ್ಬರಿಂದ ದೊಡ್ಡ ಆಫರ್: ಬಿ ಆರ್‌ ಪಾಟೀಲ್‌ ಸ್ಫೋಟಕ ಹೇಳಿಕೆ

Date:

ನನಗೂ ಆಪರೇಶನ್ ಕಮಲ‌ ಮಾಡಲು ಬಿಜೆಪಿ ಪ್ರಭಾವಿ ವ್ಯಕ್ತಿಯೊಬ್ಬರು ಯತ್ನಿಸಿದ್ದರು. ಎರಡು ತಿಂಗಳ ಹಿಂದೆ ನನಗೆ ಸಂಪರ್ಕ ಮಾಡಿ ದೊಡ್ಡ ಆಫರ್ ನೀಡಿದ್ದರು ಎಂದು ಆಳಂದ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ಬಿ ಆರ್‌ ಪಾಟೀಲ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಚುನಾವಣೆ ಖರ್ಚು ಮತ್ತು ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಕೊಡುವುದಾಗಿ ಆಫರ್ ಕೊಟ್ಟಿದ್ದರು” ಎಂದರು.

“ನನ್ನಂತಹ ಮೂರು ಜನ ಶಾಸಕರಿಗೂ ಸಹ ಆಪರೇಷನ್‌ ಕಮಲ‌ ಮಾಡಲು ಯತ್ನಿಸಲಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲ ಮಾಹಿತಿ ಕೊಟ್ಟಿದ್ದೇವೆ. ನಾನು ಯಾವುದೇ ಕಾರಣಕ್ಕೂ ಆಪರೇಶನ್ ಕಮಲಕ್ಕೆ ಒಳಗಾಗುವುದಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೂ ಕೂಡ ಬಿಜೆಪಿ ನಾಯಕರು ಸಂಪರ್ಕಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರೇ ನಮಗೆ ಬಹಿರಂಗವಾಗಿ ಹೇಳಿದ್ದರು” ಎಂದು ಬಿ ಆರ್‌ ಪಾಟೀಲ್‌ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಬ್ಬರಿ ಖರೀದಿ, ಅಧಿಕಾರಿಗಳ ಅಸಡ್ಡೆ, ಅನ್ನದಾತ ಅನಾಥ

ರವಿ ಗಾಣಿಗ ಈ ಹಿಂದೆಯೇ ಆರೋಪ

ಮಂಡ್ಯದ ಕಾಂಗ್ರೆಸ್‌ ಶಾಸಕ ರವಿ ಗಾಣಿಗ ಅವರು ಅಪರೇಷನ್ ಕಮಲ ಬಗ್ಗೆ ಈ ಹಿಂದೆಯೇ ಮಾತನಾಡುತ್ತ, “ಬಿಜೆಪಿ ಮತ್ತೊಮ್ಮೆ ಅಪರೇಷನ್ ಕಮಲ ಆರಂಭಿಸಿದೆ. ಯಾವ ಟೀಮ್‌ ಕಾಂಗ್ರೆಸ್ – ಜೆಡಿಎಸ್ ಸರ್ಕಾರ ಪತನಗೊಳಿಸಿತ್ತೋ ಅದೇ ಟೀಂ ಈಗ ಆ್ಯಕ್ಟಿವ್ ಆಗಿದೆ. ಅಂದು ಸಕ್ರಿಯವಾಗಿದ್ದ ಬಿ.ಎಸ್‌. ಯಡಿಯೂರಪ್ಪ ಅವರ ಆಪ್ತ ಸಹಾಯಕ ಎನ್‌ ಆರ್‌ ಸಂತೋಷ್‌ ಈ ಹೊಸ ಆಪರೇಷನ್‌ ಪ್ಲ್ಯಾನ್‌ನಲ್ಲೂ ಸಕ್ರಿಯವಾಗಿದ್ದಾರೆ” ಎಂದು ಆರೋಪಿಸಿದ್ದನ್ನು ಇಲ್ಲಿ ನೆನೆಯಬಹುದು.

50 ಕೋಟಿ ಆಫರ್‌ ಎಂದಿದ್ದ ಸಿಎಂ!

ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಮೈಸೂರಿನಲ್ಲಿ ಮಾತನಾಡಿ, ಬಿಜೆಪಿ ನಾಯಕರ ವಿರುದ್ಧ ಆಪರೇಷನ್‌ ಕಮಲದ ಆರೋಪ ಮಾಡಿದ್ದರು. “ನಮ್ಮ ಶಾಸಕರನ್ನು ಬಿಜೆಪಿ ನಾಯಕರು ಸಂಪರ್ಕಿಸುತ್ತಿದ್ದು, ಪ್ರತಿಯೊಬ್ಬರಿಗೆ 50 ಕೋಟಿ ರೂ. ಆಫರ್‌ ಮಾಡುತ್ತಿದ್ದಾರೆ. ಸಚಿವ ಸ್ಥಾನ ನೀಡುತ್ತೇವೆ ಎಂದು ಆಫರ್‌ ಮಾಡುತ್ತಿದ್ದಾರೆ” ಎಂದು ಬಹಿರಂಗವಾಗಿಯೇ ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...