ಎಎಪಿ ಜೊತೆ ಮೈತ್ರಿಗೆ ವಿರೋಧ; ಕಾಂಗ್ರೆಸ್‌ಗೆ ಇಬ್ಬರು ಮಾಜಿ ಶಾಸಕರ ರಾಜೀನಾಮೆ

Date:

ದೆಹಲಿಯಲ್ಲಿ ಎಎಪಿ ಜೊತೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿರುವುದಕ್ಕೆ ಕಾಂಗ್ರೆಸ್‌ನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಇತ್ತೀಚೆಗೆ, ದೆಹಲಿ ಕಾಂಗ್ರೆಸ್‌ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ, ದೆಹಲಿಯ ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ಪಕ್ಷ ತೊರೆದಿದ್ದಾರೆ.

ದೆಹಲಿಯ ಮಾಜಿ ಶಾಸಕರಾದ ನೀರಜ್ ಬಸೋಯಾ, ನಸ್ಸೆಬ್ ಸಿಂಗ್ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ನಿರ್ಧಾರಕ್ಕೆ ಎಎಪಿ ಜೊತೆಗಿನ ಮೈತ್ರಿಯೇ ಕಾರಣ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ನೀರಜ್ ಬಸೋಯ ಅವರು ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ 7 ವರ್ಷಗಳಲ್ಲಿ ಎಎಪಿ ಹಲವಾರು ಹಗರಣಗಳಲ್ಲಿ ಭಾಗಿಯಾಗಿದೆ ಎಂಬ ಆರೋಪಗಳಿವೆ. ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್, ಸತ್ಯೇಂದ್ರ ಜೈನ್ ಮತ್ತು ಮನೀಶ್ ಸಿಸೋಡಿಯಾ ಈಗಾಗಲೇ ಜೈಲಿನಲ್ಲಿದ್ದಾರೆ. ದೆಹಲಿ ಅಬಕಾರಿ ನೀತಿ ಹಗರಣ ಮತ್ತು ದೆಹಲಿ ಜಲ್ ಬೋರ್ಡ್ ಹಗರಣದಂತಹ ವಿವಿಧ ವಿಷಯಗಳಲ್ಲಿ ಎಎಪಿ ವಿರುದ್ಧ ಗಂಭೀರ ಭ್ರಷ್ಟಾಚಾರದ ಆರೋಪಗಳಿವೆ. ಅಂತಹ ಪಕ್ಷದೊಂದಿಗಿನ ಮೈತ್ರಿ ಅತ್ಯಂತ ಅವಮಾನಕರ” ಎಂದು ಬಸೋಯಾ ತಮ್ಮ ರಾಜೀನಾಮೆ ಪತ್ರದಲ್ಲಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...