ತ್ರಿಭಾಷಾ ನೀತಿ ಹೇರಿಕೆಗೆ ವಿರೋಧ: ಬಿಜೆಪಿ ತೊರೆದ ತಮಿಳು ನಟಿ ರಂಜನಾ ನಾಚಿಯಾರ್

Date:

ಕೇಂದ್ರ ಸರ್ಕಾರದ ತ್ರಿಭಾಷಾ ನೀತಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿ ತಮಿಳು ನಟಿ, ರಾಜಕಾರಣಿ ರಂಜನಾ ನಾಚಿಯಾರ್ ಮಂಗಳವಾರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ತನ್ನ ರಾಜೀನಾಮೆಯಲ್ಲಿ ರಂಜನಾ ಅವರು, “ತ್ರಿಭಾಷಾ ನೀತಿ ಹೇರಿಕೆ ತಪ್ಪು” ಎಂದು ಉಲ್ಲೇಖಿಸಿದ್ದಾರೆ.

ಇತ್ತೀಚೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸದಿದ್ದರೆ ಸಮಗ್ರ ಶಿಕ್ಷ ಮಿಷನ್‌ಗೆ 2,400 ರೂಪಾಯಿ ನಿಧಿಯನ್ನು ನೀಡುವುದಿಲ್ಲ ಎಂದು ತಮಿಳುನಾಡು ಸರ್ಕಾರಕ್ಕೆ ಬೆದರಿಕೆ ಹಾಕಿದ್ದರು. ಕೇಂದ್ರ ಸಚಿವರ ಈ ಬೆದರಿಕೆಗೆ ತಮಿಳುನಾಡು ನಾಯಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿದ್ದೀರಾ? ಹಿಂದಿ ಹೇರಿಕೆ | ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ: ಉದಯನಿಧಿ ಸ್ಟ್ಯಾಲಿನ್ ಘೋಷಣೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭಾಷಾ ಯುದ್ಧಕ್ಕೆ ತಮಿಳುನಾಡು ಸಿದ್ಧ” ಎಂದು ಉದಯನಿಧಿ ಸ್ಟ್ಯಾಲಿನ್ ಘೋಷಿಸಿದ್ದಾರೆ. ಹಾಗೆಯೇ “ಹಿಂದಿಯನ್ನು ಒಪ್ಪಿಕೊಳ್ಳುವ ರಾಜ್ಯಗಳು ತಮ್ಮ ಮಾತೃಭಾಷೆಯನ್ನು ಕಳೆದುಕೊಳ್ಳಲಿದೆ” ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.

ಸದ್ಯ ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡುವುದರ ವಿರುದ್ಧವಾಗಿ ತಮಿಳುನಾಡು ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ವಾಗ್ವಾದ ನಡೆಯುತ್ತಲೇ ಇದೆ. ಈ ನಡುವೆ ರಂಜನಾ ಬಿಜೆಪಿ ತೊರೆಯುವ ನಿರ್ಧಾರ ತೆಗೆದುಕೊಂಡಿದ್ದಾರೆ.

ಇವೆಲ್ಲವುದರ ನಡುವೆ ಚುನಾವಣೆಗೂ ಮುನ್ನ ಭಾಷೆ ವಿಚಾರವನ್ನು ಆಡಳಿತಾರೂಢ ಡಿಎಂಕೆ ಸರ್ಕಾರವು ರಾಜಕೀಯಕರಣಗೊಳಿಸುತ್ತಿದೆ ಎಂದು ಎಐಎಡಿಎಂಕೆ ಸಂಸದ ಎಂ ಥಂಬಿದುರೈ ದೂರಿದ್ದಾರೆ.

ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಎಐಎಡಿಎಂಕೆ ಸಂಸದ, “ರಾಜ್ಯ ಸರ್ಕಾರವು ಹಲವು ಭಾಷೆಗಳನ್ನು ಕಲಿಸುವ ಸಿಬಿಎಸ್‌ಇ ಶಾಲೆಗಳಿಗೆ ಅವಕಾಶ ನೀಡುತ್ತದೆ. ಆದರೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು, ಹಿಂದಿ ಹೇರಿಕೆಯನ್ನು ವಿರೋಧಿಸುತ್ತದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಹಿಂದಿ ದಿವಸ | ಭಾಷಾ ಹೇರಿಕೆ ವಿರುದ್ಧ ಇಂದು ಪ್ರತಿಭಟನೆ: ‘ಕರಾಳ ದಿನ’ ಆಚರಣೆಗೆ ಕರವೇ ಕರೆ

ಅವೈಜ್ಞಾನಿಕ ರಾಷ್ಟ್ರೀಯ ಶಿಕ್ಷಣ ನೀತಿಗೆ ಹಲವು ರಾಜಕೀಯ ಪಕ್ಷಗಳು, ರಾಜ್ಯಗಳು ವಿರೋಧ ವ್ಯಕ್ತಪಡಿಸಿದೆ. ಅದರಲ್ಲೂ ಮುಖ್ಯವಾಗಿ ದಕ್ಷಿಣ ಭಾರತದ ರಾಜ್ಯಗಳು ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಕೇಸರೀಕರಣದ ಯತ್ನ ಮತ್ತು ಹಿಂದಿ ಹೇರಿಕೆ ಮಾಡುವುದನ್ನು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದೆ.

ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳು ಸ್ಥಳೀಯ ಭಾಷೆಗಳನ್ನು ನಿಧಾನವಾಗಿ ನಾಶಗೊಳಿಸುವ ಕೇಂದ್ರ ಸರ್ಕಾರದ ಹುನ್ನಾರವನ್ನು ವಿರೋಧಿಸುತ್ತಾ ಬಂದಿದೆ. ಇತರೆ ಭಾಷೆಗಳನ್ನು ಕಲಿಯಬಾರದು ಎಂಬ ವಾದವನ್ನು ಯಾವ ರಾಜ್ಯಗಳೂ ಮಾಡಿಲ್ಲ. ಬದಲಾಗಿ ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂಬಂತೆ ಬಿಂಬಿಸಿ ಹೇರಿಕೆ ಮಾಡುವುದನ್ನು ವಿರೋಧಿಸಿದೆ. ನಮ್ಮ ದೇಶದಲ್ಲಿ ಸಂಸ್ಕೃತಿ, ಭಾಷೆ, ಆಚರಣೆ ಎಲ್ಲವೂ ವೈವಿಧ್ಯವಾಗಿದ್ದು ಇದ್ಯಾವುದನ್ನು ಕೂಡಾ ನಾಶ ಮಾಡಬಾರದು ಎಂಬುದು ಸ್ಥಳೀಯ ಭಾಷಿಕರ ವಾದವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...