ಸಾಮೂಹಿಕ ಅತ್ಯಾಚಾರ ಪ್ರಕರಣ; ಹರಿಯಾಣ ಬಿಜೆಪಿ ಅಧ್ಯಕ್ಷ ಬಡೋಲಿ ರಾಜೀನಾಮೆಗೆ ವಿಪಕ್ಷಗಳ ಆಗ್ರಹ

Date:

ಹರಿಯಾಣ ಬಿಜೆಪಿ ಅಧ್ಯಕ್ಷರಾದ ಬಿಜೆಪಿ ಅಧ್ಯಕ್ಷ ಮೋಹನ್ ಲಾಲ್ ಬಡೋಲಿ ವಿರುದ್ಧ ಸಾಮೂಹಿಕ ಅತ್ಯಾಚಾರ ಮತ್ತು ಬೆದರಿಕೆಯ ಪ್ರಕರಣ ದಾಖಲಿಸಿದ್ದಾರೆ. ಅತ್ಯಾಚಾರ ಆರೋಪಿಯಾಗಿರುವ ಬಡೋಲಿ ರಾಜೀನಾಮೆ ನೀಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದೆ.

ಗಾಯಕ ಜೈ ಭಗವಾನ್ ಅಲಿಯಾಸ್ ರಾಕಿ ಮಿತ್ತಲ್ ಜೊತೆಗೆ ಸೇರಿ ಸಾಮೂಹಿಕ ಅತ್ಯಾಚಾರ ಮಾಡಿದ ಆರೋಪ ಹರಿಯಾಣ ಬಿಜೆಪಿ ಅಧ್ಯಕ್ಷರ ಮೇಲಿದೆ. ಬಡೋಲಿ ಮತ್ತೊಂದು ಅವಧಿಗೆ ಬಿಜೆಪಿ ಅಧ್ಯಕ್ಷನಾಗುವ ನಿರೀಕ್ಷೆಯನ್ನು ಹೊಂದಿದ್ದರು. ಈ ನಡುವೆ ಸಾಮೂಹಿಕ ಅತ್ಯಾಚಾರದ ಪ್ರಕರಣ ದಾಖಲಾಗಿದೆ. ಇದಾದ ಬೆನ್ನಲ್ಲೇ ಯಾವುದೇ ಬಿಜೆಪಿ ನಾಯಕರು ಬಡೋಲಿ ಪರವಾಗಿ ನಿಂತಿಲ್ಲ.

ಇದನ್ನು ಓದಿದ್ದೀರಾ? ಹರಿಯಾಣ ಬಿಜೆಪಿ ಅಧ್ಯಕ್ಷ ಬಡೋಲಿ ವಿರುದ್ಧ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ರೋಹ್ಟಕ್‌ನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಪಂಡಿತ್ ಶ್ರೀರಾಮ್ ಶರ್ಮಾ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ಸಮಾರಂಭದಲ್ಲಿಯೂ ಬಡೋಲಿ ಹಾಜರಿರಲಿಲ್ಲ. ಈ ವಿಚಾರದಲ್ಲಿ ಈವರೆಗೆ ಸಿಎಂ ನಯಾಬ್ ಸಿಂಗ್ ಸೈನಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹಾಗೆಯೇ ಬಿಜೆಪಿ ಹೈಕಮಾಂಡ್ ಕೂಡಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಸೈನಿ ಸಂಪುಟದ ಹಿರಿಯ ಸಚಿವ ಅನಿಲ್ ವಿಜ್ ಈ ಆರೋಪಗಳನ್ನು ‘ತುಂಬಾ ಗಂಭೀರ’ ಎಂದು ಕರೆದಿದ್ದಾರೆ. ಹಾಗೆಯೇ ಈ ವಿಷಯವನ್ನು ಗಮನದಲ್ಲಿಟ್ಟುಕೊಳ್ಳುವಂತೆ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.

ಇದನ್ನು ಓದಿದ್ದೀರಾ? ಹುಟ್ಟುಹಬ್ಬ ಆಚರಣೆ ನೆಪದಲ್ಲಿ ಬಾಲಕಿ ಮೇಲೆ ಅತ್ಯಾಚಾರ; ದೂರು ದಾಖಲು

ಇನ್ನು ಬಡೋಲಿ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆ ಬಿಜೆಪಿ ಮಹಿಳಾ ವಿರೋಧಿ ಪಕ್ಷ ಎಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದೆ. ಹರಿಯಾಣ ಕಾಂಗ್ರೆಸ್ ಅಧ್ಯಕ್ಷ ಉದಯ್ ಭಾನ್ ಮತ್ತು ರೋಹ್ಟಕ್‌ನ ಸಂಸತ್ ಸದಸ್ಯ ದೀಪೇಂದರ್ ಹೂಡಾ, “ಬಡೋಲಿ ರಾಜ್ಯ ಬಿಜೆಪಿ ಮುಖ್ಯಸ್ಥ ಹುದ್ದೆಗೆ ರಾಜೀನಾಮೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ತನ್ನ ಮೇಲೆ ರಾಜ್ಯ ಪ್ರವಾಸೋದ್ಯಮ ನಿಗಮ ನಡೆಸುತ್ತಿದ್ದ ಹೋಟೆಲ್‌ನಲ್ಲಿ ಅತ್ಯಾಚಾರ ನಡೆಸಲಾಗಿದೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದು, ಬಡೋಲಿ ಸೇರಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...