ಸಿಎಂ ಸ್ಥಾನ : ‘ಸ್ವಾಮೀಜಿಯ ಮೂಲಕ ಡಿಕೆ ಶಿವಕುಮಾರ್ ಹೇಳಿಸಿರಲೂಬಹುದು’ ಎಂದ ವಿಪಕ್ಷ ನಾಯಕ ಅಶೋಕ್!

Date:

ಇಂದು ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ನಾಡಪ್ರಭು ಕೆಂಪೇಗೌಡರ 515 ನೇ ಜಯಂತ್ಯುತ್ಸವ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ ಮಾತನಾಡಿದ್ದ ಚಂದ್ರಶೇಖರನಾಥ ಸ್ವಾಮೀಜಿ, “ಸಿದ್ದರಾಮಯ್ಯನವರು ಮುಂದೆ ಡಿ.ಕೆ ಶಿವಕುಮಾರ್ ಅವರಿಗೆ ಸಿಎಂ ಸ್ಥಾನ ಬಿಟ್ಟುಕೊಡಬೇಕು” ಎಂದು ಹೇಳಿದ್ದರು.

ಈ ಹೇಳಿಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್ ಅಶೋಕ್, “ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದರೋ ಗೊತ್ತಿಲ್ಲ” ಎಂದು ಹೇಳುವ ಮೂಲಕ ಸ್ವಾಮೀಜಿಯ ಮೂಲಕ ಡಿಕೆ ಶಿವಕುಮಾರ್ ಹೇಳಿಸಿರಲೂಬಹುದು ಎಂಬ ಅನುಮಾನ ವ್ಯಕ್ತಪಡಿಸಿದ್ದಾರೆ.

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಕೀಯದ ಒಳಗೆ ಹೋಗಿ ತಿಳಿದುಕೊಳ್ಳುವ ಸಾಮರ್ಥ್ಯ ಇದೆ. ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಲಿ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಎಂದೂ ಆಗಿರಲಿಲ್ಲ. ಮೊದಲ ಬಾರಿಗೆ ಸಿಎಂ ಎದುರಿಗೆ ನೀವು ರಾಜೀನಾಮೆ ನೀಡಿ ಎಂದಿದ್ದಾರೆ. ಹೀಗಾಗಿ, ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಿ. ಇಷ್ಟು ಅವಮಾನ ಆಗಿಯೂ ಸಿಎಂ ಆಗಿ ಮುಂದುವರಿಯಬಾರದು” ಎಂದು ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಸಿಎಂ ಸ್ಥಾನ ನಿರ್ಧಾರ ಮಾಡುವುದು ಹೈಕಮಾಂಡ್, ಸ್ವಾಮೀಜಿಯವರಲ್ಲ: ಸಿದ್ದರಾಮಯ್ಯ

“ಸಿದ್ದರಾಮಯ್ಯ ತಂತ್ರಕ್ಕೆ ಇದೊಂದು ಪ್ರತಿತಂತ್ರ ಅಷ್ಟೇ. ಡಿಕೆ ಶಿವಕುಮಾರ್​ಗೆ ಅವರ ತಮ್ಮನ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಮೂರು ಡಿಸಿಎಂಗಳಿಗೆ ಹಿನ್ನೆಲೆ ಗಾಯಕರೇ ಸಿದ್ದರಾಮಯ್ಯ. ಅದಕ್ಕೆ ಕೌಂಟರ್ ಆಗಿ ಆದರೆ ಅಧಿಕಾರ ಬಿಟ್ಟುಕೊಡಬೇಕು ಎಂದಿದ್ದಾರೆ” ಎಂದು ವಿಪಕ್ಷ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...