ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳು ಸಜ್ಜು

Date:

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲು ವಿಪಕ್ಷಗಳನ್ನು ಒಳಗೊಂಡ ಇಂಡಿಯಾ ಒಕ್ಕೂಟ ಸಜ್ಜಾಗಿದೆ ಎಂದು ವರದಿಯಾಗಿದೆ.

ಮತ ಕಳವು ಆರೋಪದ ಬಗ್ಗೆ ಒಂದು ವಾರದೊಳಗೆ ಅಫಿಡವಿಟ್ ಸಲ್ಲಿಸುವಂತೆ ಅಥವಾ ರಾಷ್ಟ್ರಕ್ಕೆ ಕ್ಷಮೆಯಾಚಿಸುವಂತೆ ಲೋಕಸಭಾ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ರಾಹುಲ್ ಗಾಂಧಿ ಅವರಿಗೆ ಸಿಇಸಿ ಹೇಳಿದ ಒಂದು ದಿನದ ನಂತರ ಮಹಾಭಿಯೋಗ ಪ್ರಸ್ತಾವನೆ ಮಂಡಿಸುವ ಸುದ್ದಿ ಹೊರಬಿದ್ದಿದೆ.

ಇದನ್ನು ಓದಿದ್ದೀರಾ? ಮತಗಳವು ಆರೋಪ ಸಂವಿಧಾನಕ್ಕೆ ಮಾಡಿದ ಅಪಮಾನ: ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯಸಭೆಯ ವಿಪಕ್ಷ ನಾಯಕ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ವಿರೋಧ ಪಕ್ಷದ ನಾಯಕರ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದೆ. ಕುಮಾರ್ ವಿರುದ್ಧ ದೋಷಾರೋಪಣೆ ಪ್ರಕ್ರಿಯೆಗಳನ್ನು ಪ್ರಾರಂಭಿಸುವ ನಿರ್ಧಾರವನ್ನು ಶೀಘ್ರ ಘೋಷಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

“ಭಾರತದ ಚುನಾವಣಾ ಆಯೋಗವು (ಇಸಿಐ) ತನ್ನ ಸಾಂವಿಧಾನಿಕ ಕರ್ತವ್ಯದಿಂದ ಹಿಂದೆ ಸರಿಯಲು ಮತ್ತು ಪ್ರಶ್ನೆಗಳಿಗೆ ಉತ್ತರಿಸುವುದರಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ‘ಮತದಾನದ ಹಕ್ಕು’ ಭಾರತದ ಸಂವಿಧಾನವು ನಮಗೆ ನೀಡಿರುವ ಪ್ರಮುಖ ಹಕ್ಕು. ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಯಾವುದೇ ಪ್ರಯತ್ನವನ್ನು ಇಂಡಿಯಾ ಒಕ್ಕೂ ಪ್ರತಿಭಟಿಸುತ್ತದೆ” ಎಂದು ಖರ್ಗೆ ಹೇಳಿದ್ದಾರೆ.

ಇನ್ನು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಸಂಸದ ನಸೀರ್ ಹುಸೈನ್, “ಅಗತ್ಯ ಬಿದ್ದರೆ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗ ಪ್ರಸ್ತಾವನೆ ಮಂಡಿಸಲೂ ಬಹುದು” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...