ಸಾಮರಸ್ಯದ ದೇಶ ಕಟ್ಟುವ ಸಲುವಾಗಿ ಸಮಾನ ಮನಸ್ಕರ ಸಭೆ: ದಿನೇಶ್‌ ಗುಂಡೂರಾವ್‌

Date:

ತಾಜ್ ವೆಸ್ಟ್‌ಎಂಡ್‌ನಲ್ಲಿ ನಡೆಯುತ್ತಿರುವ ದೇಶದ ಪ್ರಮುಖ ವಿರೋಧ ಪಕ್ಷಗಳ ಸಭೆ, ಸಂವಿಧಾನ ಹಾಗೂ‌ ಪ್ರಜಾಪ್ರಭುತ್ವದ ರಕ್ಷಣೆಗೆ ಅತಿ ಅಗತ್ಯ ಮತ್ತು ಅನಿವಾರ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ಫ್ಯಾಸಿಸ್ಟ್ ಧೋರಣೆಯಿಂದ ಸರ್ವಾಧಿಕಾರಿ ಮನೋಭಾವ ಪ್ರದರ್ಶಿಸುತ್ತಿರುವ ಕೇಂದ್ರ ಸಂವಿಧಾನವನ್ನೇ ಅಪಾಯದಲ್ಲಿಟ್ಟಿದೆ. ‘ಸಂವಿಧಾನದ ಉಳಿವೇ, ಈ ದೇಶದ ಉಳಿವು’ ಎಂಬುವುದೇ ವಿಪಕ್ಷಗಳ ಸಭೆಯ ಉದ್ದೇಶ” ಎಂದಿದ್ದಾರೆ.

“ಈ ದೇಶದ ಪ್ರತಿಯೊಬ್ಬ ನಾಗರಿಕನ ಬದುಕಿಗೆ ರಕ್ಷಣೆ ಒದಗಿಸಿರುವುದೇ ಸಂವಿಧಾ‌ನ‌‌. ಆದರೆ, ಬಿಜೆಪಿಯವರು ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳುತ್ತಾರೆ. ಸಂವಿಧಾನ ಬದಲಾಯಿಸುವುದೆಂದರೆ ನಾಗರಿಕರ ಬದುಕಿನ ಹಕ್ಕು ಕಸಿದುಕೊಂಡಂತೆ. ಕೇಂದ್ರದ ಈ ಧೋರಣೆ ವಿರುದ್ಧ ಪ್ರಮುಖ ವಿರೋಧ ಪಕ್ಷಗಳೆಲ್ಲಾ ಒಗ್ಗಟ್ಟಾಗಿ ಹೋರಾಡಲೇಬೇಕಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧಿಕಾರದಲ್ಲಿರುವ ಕೇಂದ್ರದ ಎನ್‌ಡಿಎ ಕೂಟ ವಿಭಜಿಸುವುದರಲ್ಲಿ ನಂಬಿಕೆಯಿಟ್ಟಿದೆ. ಆದರೆ, ನಾವು ಒಗ್ಗೂಡಿಸುವುದರಲ್ಲಿ ನಂಬಿಕೆಯಿಟ್ಟಿದ್ದೇವೆ. ದ್ವೇಷ ಅವರ ದೇವರು, ಪ್ರೀತಿ ನಮ್ಮ ದೇವರು. ಅವರ ಹೃದಯದಲ್ಲಿ ಧರ್ಮಾಂಧತೆಯಿದೆ. ನಮ್ಮಲ್ಲಿ ಕೂಡಿ ಬಾಳುವ ಸೌಹಾರ್ದತೆಯಿದೆ‌. ಸಾಮರಸ್ಯದ ದೇಶ ಕಟ್ಟುವ ಸಲುವಾಗಿಯೇ ಸಮಾನಮನಸ್ಕರ ಈ ಸಭೆ ನಡೆಯುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...