ಒಬ್ಬರೇ ಸಾಕು ಎನ್ನುತ್ತಿದ್ದವರು 30 ಮೇಲ್ಪಟ್ಟು ಪಕ್ಷಗಳನ್ನು ಒಗ್ಗೂಡಿಸುತ್ತಿದ್ದಾರೆ: ಖರ್ಗೆ ವಾಗ್ದಾಳಿ

Date:

ಎಲ್ಲರಿಗೂ ಒಬ್ಬರೆ ಸಾಕು ಎಂದು ಸಂಸತ್ತಿನಲ್ಲಿ ಹೇಳುತ್ತಿದ್ದ ನರೇಂದ್ರ ಮೋದಿ ಅವರಿಗೆ 29 -30 ಪಕ್ಷಗಳು ಏಕೆ ಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, “ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಮಾತನಾಡುವಾಗ ‘ನಿಮ್ಮೆಲ್ಲರಿಗೂ ನಾನೊಬ್ಬನೆ ಸಾಕು’ ಎಂದು ಹೇಳಿದ್ದರು. ಆದರೆ ಅವರೀಗ 30 ಪಕ್ಷಗಳನ್ನು ಏಕೆ ಒಟ್ಟುಗೂಡಿಸಿದ್ದಾರೆ. ಈ 30 ಪಕ್ಷಗಳು ಯಾವುವು, ಅವರ ಹೆಸರುಗಳು ಏನು, ಅವರೆಲ್ಲರೂ ಚುನಾವಣಾ ಆಯೋಗದಲ್ಲಿ ನೋಂದಾಯಿಸಿಕೊಂಡಿದ್ದಾರೆಯೇ? ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದರು.

“ಸಂಸತ್ತಿನಲ್ಲಿ ನಮ್ಮ ಮೈತ್ರಿ ಒಟ್ಟಾಗಿ ಕೆಲಸ ಮಾಡುತ್ತದೆ. ಪ್ರಜಾಪ್ರಭುತ್ವವನ್ನು ನಾಶಮಾಡಲು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಪ್ರತಿಪಕ್ಷಗಳಿಗೆ ಬೆದರಿಕೆ ಹಾಕುವುದು ಅವರ ಏಕೈಕ ಗುರಿಯಾಗಿದೆ. ಆದರೆ ನಾವು ನಿರ್ಭೀತರು, ಅವರ ಷಡ್ಯಂತ್ರಗಳನ್ನು ಗಟ್ಟಿಯಾಗಿ ಎದುರಿಸುತ್ತೇವೆ ಮತ್ತು ಜನರ ಪರ ಹೋರಾಟ ನಡೆಸುತ್ತೇವೆ” ಎಂದು ತಿಳಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಗ್ಗಟ್ಟಿನ ಸಭೆಯನ್ನು ಸ್ಥಾಪಿಸುವ ವಿಪಕ್ಷಗಳ ಯೋಜನೆ ಬಿಜೆಪಿಯನ್ನು ದಂಗುಬಡಿಸುತ್ತಿದೆ. ಸಂಖ್ಯಾಬಲವನ್ನು ತೋರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಒಡೆದ ಪಕ್ಷಗಳನ್ನು ಒಟ್ಟಿಗೆ ಸೇರಿಸಲು ಪ್ರಯತ್ನಿಸುತ್ತಿದ್ದಾರೆ. ಜುಲೈ 18 ರಂದು ದೆಹಲಿಯಲ್ಲಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಭೆಯನ್ನು ಆಯೋಜಿಸುತ್ತಿರುವುದನ್ನು ಉಲ್ಲೇಖಿಸಿ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

2024ರ ಲೋಕಸಭೆ ಚುನಾವಣೆಗೆ ಜಂಟಿ ಕಾರ್ಯತಂತ್ರವನ್ನು ಯೋಜಿಸಲು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟಿನ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಸ್ಥಾನ ಹಂಚಿಕೆ, ಸಮನ್ವಯ ಹಾಗೂ ಪಕ್ಷಗಳ ನಡುವಿನ ಸಂವಹನಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಗುತ್ತದೆ. 16 ಪಕ್ಷಗಳ ವಿರೋಧ ಪಕ್ಷದ ನಾಯಕರ ಮೊದಲ ಸಭೆ ಜೂನ್‌ನಲ್ಲಿ ಪಾಟ್ನಾದಲ್ಲಿ ನಡೆದಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ಮಹಾ ಮೈತ್ರಿಕೂಟ ಸಭೆ | ಕಾಂಗ್ರೆಸ್‌ಗೆ ಉತ್ತರ ಹತ್ತಿರ; ದೂರವಾಯಿತೇಕೆ ದಕ್ಷಿಣ?

ಕಾಂಗ್ರೆಸ್, ಆರ್‌ಜೆಡಿ, ಜೆಡಿಯು, ಟಿಎಂಸಿ, ಡಿಎಂಕೆ, ಎಎಪಿ, ಎನ್‌ಸಿಪಿ, ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ), ಸಿಪಿಐ, ಸಿಪಿಐಎಂ, ಸಮಾಜವಾದಿ ಪಕ್ಷ, ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಜೆಎಂಎಂ ಮತ್ತು ರಾಷ್ಟ್ರೀಯ ಲೋಕದಳ ಸೇರಿದಂತೆ 24 ಪಕ್ಷಗಳ ನಾಯಕರು ಬೆಂಗಳೂರಿನ ಸಭೆಯಲ್ಲಿ ಭಾಗವಹಿಸಿದ್ದಾರೆ.

ವಿರೋಧ ಪಕ್ಷಗಳ ಸಭೆಯು ಭಾರತೀಯ ರಾಜಕೀಯದಲ್ಲಿ ಹೊಸ ಬದಲಾವಣೆಯುಂಟಾಗಲಿದೆ. ಪ್ರಜಾಪ್ರಭುತ್ವ ಹಾಗೂ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಲು ವಿರೋಧ ಪಕ್ಷಗಳು ಸಾಮಾನ್ಯ ಉದ್ದೇಶದಿಂದ ಒಂದಾಗಿವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...