ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ವಿರೋಧ; ಸದನ ಸಮಿತಿ ರಚನೆಗೆ ಡಿ ಕೆ ಶಿವಕುಮಾರ್‌ ಒಪ್ಪಿಗೆ

Date:

ಡಿಸಿಎಂ ಡಿ ಕೆ ಶಿವಕುಮಾರ್ ಅವರ ಮಹತ್ವಾಕಾಂಕ್ಷೆಯ ಗ್ರೇಟರ್ ಬೆಂಗಳೂರು ವಿಧೇಯಕಕ್ಕೆ ಸದನದಲ್ಲಿ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸದನ ಸಮಿತಿ ರಚಿಸುವುದಾಗಿ ಡಿ ಕೆ ಶಿವಕುಮಾರ್‌ ತಿಳಿಸಿದರು.

ಗುರುವಾರದ ಅಧಿವೇಶನದಲ್ಲಿ ಡಿ ಕೆ ಶಿವಕುಮಾರ್‌ ಮಾತನಾಡಿ, “ಬೆಂಗಳೂರಿಗೆ ಆರ್ಥಿಕ‌ ಶಕ್ತಿ ಕೊಡಬೇಕಿದೆ. ಹೀಗಾಗಿ ಗ್ರೇಟರ್ ಬೆಂಗಳೂರು ಮಸೂದೆ ಬಗ್ಗೆ ಬೆಳಕು ಚೆಲ್ಲಬೇಕಿದೆ. ಹಾಗಾಗಿ ಚರ್ಚೆಗೆ ಅವಕಾಶ ಕೊಡಬೇಕು” ಎಂದು ಸಭಾಧ್ಯಕ್ಷರಲ್ಲಿ ಮನವಿ ಮಾಡಿದರು.

ಸಭಾಧ್ಯಕ್ಷ ಯು ಟಿ ಖಾದರ್‌ ಅವರು ಡಿ ಕೆ ಶಿವಕುಮಾರ್‌ಗೆ ಅವಕಾಶ ಮಾಡಿಕೊಟ್ಟರು. ಗ್ರೇಟರ್ ಬೆಂಗಳೂರು ವಿಧೇಯಕವನ್ನು ಉಪಮುಖ್ಯಮಂತ್ರಿಗಳು ಮಂಡಿಸಿದರು. ಆದರೆ ಇದಕ್ಕೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ವಿಧೇಯಕದ ಬಗ್ಗೆ ಸುದೀರ್ಘ ಚರ್ಚೆ ನಡೆಸಬೇಕಾಗಿದೆ. ಹಾಗಾಗಿ ಇವಾಗ ಪರ್ಯಾಲೋಚನೆ ಮಾಡಬಾರದು. ಇದಕ್ಕೆ ಒಂದು ಸದನ ಸಮಿತಿಯನ್ನು ರಚಿಸಬೇಕು. ಸಮಗ್ರವಾಗಿ ಇದರ ಬಗ್ಗೆ ಚರ್ಚೆಯಾಗಬೇಕು” ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ವಿರೋಧ ವ್ಯಕ್ತಪಡಿಸಿದರು.

“ಮಸೂದೆಗೆ ವಿರೋಧ ಬಂದ ಹಿನ್ನೆಲೆಯಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ ಸುದೀರ್ಘ ಚರ್ಚೆ ನಡೆಸಲು ಸದನ ಸಮಿತಿ ರಚನೆಗೆ ಒಪ್ಪಿಗೆ ಇದೆ” ಎಂದು ಡಿ ಕೆ ಶಿವಕುಮಾರ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...